ದಿನದ ಸುದ್ದಿ
ಶಿಕ್ಷಣ ಗುಣಮಟ್ಟ ಸುಧಾರಣೆಗೆ ಚಿಂತನೆ; 535 ಶಾಲೆಗಳ ದುರಸ್ತಿಗೆ ಸಿಎಂ ಸೂಚನೆ
ಸುದ್ದಿದಿನ ಡೆಸ್ಕ್: ಶಿಕ್ಷಣ ಗುಣಮಟ್ಟ ಸುಧಾರಣೆ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಈ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ರಾಜ್ಯದ 502 ಸರ್ಕಾರಿ ಪ್ರಾಥಮಿಕ ಶಾಲೆಗಳ ಕೊಠಡಿಗಳ ದುರಸ್ತಿ ಮತ್ತು ನಿರ್ಮಾಣ ಹಾಗೂ 233 ಸರ್ಕಾರಿ ಪ್ರೌಢಶಾಲೆಗಳ ಹಳೆಯ ಕಟ್ಟಡಗಳನ್ನು ನೆಲಸಮಗೊಳಿಸಿ, ಮರು ನಿರ್ಮಾಣಕ್ಕೆ ಟೆಂಡರ್ ಕರೆಯುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.