ರಾಜಕೀಯ
ನನ್ನ ಹಾಗೂ ಜನರ ನಡುವೆ ಕಂದಕ ಸೃಷ್ಟಿಸ ಬೇಡಿ | ಮಾಧ್ಯಮಗಳ ಮೇಲೆ ಹರಿಹಾಯ್ದ ಹೆಚ್ ಡಿ ಕೆ
ಸುದ್ದಿದಿನ, ಬೆಂಗಳೂರು | ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇವಲ ಒಂದು ರೂಪಾಯಿ ಹೆಚ್ಚಾಗಿದ್ದಕ್ಕೆ ಮಂಗಳೂರಿನ ಮೀನುಗಾರ ಮಹಿಳೆಯರ ಬಳಿ “ಕುಮಾರಸ್ವಾಮಿ ಈಸ್ ನಾಟ್ ಅವರ್” ಎಂದು ಹೇಳಿಸುತ್ತಿದ್ದೀರಿ ಎಂದು ಮಾಧ್ಯಮಗಳ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇಂದು (ಜುಲೈ14) ನಗರದ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಚಿವರು, ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ನನ್ನ ಮೇಲೆ ನಿಮಗೇಕೆ ಇಷ್ಟು ಕೋಪ, ಪ್ರಧಾನಿ ನರೇಂದ್ರ ಮೋದಿ ಹನ್ನೊಂದು ಬಾರಿ ಇಂಧನದ ಬೆಲೆ ಏರಿಕೆ ಮಾಡಿದ್ದರೂ ಸಣ್ಣಚಕಾರ ಎತ್ತಿಲ್ಲ. ಎಷ್ಟು ದಿನ ಅಂತಾ ನೀವು ನನ್ನ ವಿರುದ್ದ ಜನರನ್ನು ಎತ್ತಿಕಟ್ಟುತ್ತೀರಿ. ನಾನು ಆ ಜನಗಳ ಮಧ್ಯೆಯೇ ಹೋಗುತ್ತೇನೆ. ನಿಮ್ಮ ಕಷ್ಟ ಏನು ಅಂತಾ ಕೇಳ್ತೇನೆ”. ಎಂದು ಖಡಕ್ ಆಗಿ ಮಾದ್ಯಮಗಳ ವರ್ತನೆಯ ಬಗೆಗೆ ಬೇಸರ ವ್ಯಕ್ತಪಡಿಸಿದರು
ನಾನು ಜನರ ಮುಖ್ಯಮಂತ್ರಿ ಹೆಚ್ ಡಿ.ಕೆ
ನಾನು ಜನ ಸಾಮಾನ್ಯರ ಪರವಾಗಿದ್ದೇನೆ.
ಜನರ ಹೊಟ್ಟೆ ಮೇಲೆ ಹೊಡೆದು ತೆರಿಗೆ ಸಂಗ್ರಹಿಸಬೇಕಿಲ್ಲ. ವಿದ್ಯುತ್ ಬಿಲ್ ಹತ್ತು ರೂಪಾಯಿ ಏರಿಕೆ ಮಾಡಿದ್ದೇನೆ.ಇಂದು ಬಡ ಕುಟುಂಬಗಳು ಕೂಡ ಇಪ್ಪತ್ತು ರೂಪಾಯಿ ಕೊಟ್ಟು ಮಿನರಲ್ ವಾಟರ್ ಖರೀಧಿಸುತ್ತಾರೆ. ಅಂತಹುದರಲ್ಲಿ ಹತ್ತು ರೂಪಾಯಿ ದೊಡ್ಡ ಮೊತ್ತವೇ. ಸರ್ಕಾರದಲ್ಲಿ ದುಡ್ಡು ಇಟ್ಡುಕೊಳ್ಳದೆ ನಾನು ಎಲ್ಲಿಂದ ಕಾರ್ಯಕ್ರಮಗಳನ್ನು ಕೊಡಲಿ ಎಂದು ಮಾಧ್ಯಮಗಳಿಗೆ ಕುಟುಕಿದರು.
ನಾನು ಅಧಿಕಾರಕ್ಕೆ ಬಂದು ಕೇವಲ ಎರಡು ತಿಂಗಳಾಗಿದೆ. ನನಗೆ ಸ್ವಲ್ಪ ಸಮಯಕೊಡಿ.
ನಾನು ಯಾರಿಗೂ ಮೋಸ ಮಾಡಲ್ಲ.
ಜನರಿಗೆ ತೊಂದರೆ ಕೊಡಬೇಕು ಎಂದು ಕಾಂಗ್ರೆಸ್ ಮೈತ್ರಿಯೊಂದಿಗೆ ಮುಖ್ಯಮಂತ್ರಿ ಯಾಗಿಲ್ಲ. ನಮ್ಮ ವಿಷನ್ ಗಳ ಬಗ್ಗೆ ನನ್ನ ಕಣ್ತೆರೆಸಿ. ನಾನು ಯಾವುದೋ ಒಂದು ಭಾಗದ ಸಿಎಂ ಅಲ್ಲ. ಎರಡು ತಿಂಗಳಿಂದ ಟೀಕೆ ಮಾಡಿದ್ದು ಸಾಕು. ರೈತರ ಸಾಲ ಮನ್ನಾ ವಿಷಯದಲ್ಲಿ ನಾನು ಹುಡುಕಾಟ ಆಡಲು ಸಾಧ್ಯವೇ 35,000 ಕೋಟಿ ಸಾಲ ಮನ್ನಾ ಸುಲಭವಲ್ಲ. ನಿಮಗೇಕೆ ಅನುಮಾನ.ನಿಮಗೆ ಯಾವುದೇ ಅನುಮಾನ ಇದ್ದರೂ ಬನ್ನಿ ನೇರವಾಗಿ ನನಗೆ ಹೇಳಿ. ನನ್ನ ತಪ್ಪು ಸರಿಪಡಿಸಿಕೊಳ್ಳಲು ಸಿದ್ದವಿದ್ದೇನೆ.
ತಪ್ಪೇ ಮಾಡದೆ ದೋಷ ಕೊಡಬೇಡಿ.
ನನ್ನ ಹಾಗೂ ಜನರ ನಡುವೆ ಕಂದಕ ಸೃಷ್ಟಿಸಬೇಡಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಆನಗೋಡು ಗ್ರಾಮದಲ್ಲಿ ಮಂಗಳವಾರ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ‘ಸಂಚಾರಿ ಆರೋಗ್ಯ ಘಟಕ’ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ವಾಹನಗಳನ್ನು ವಿಶೇಷ ರೀತಿಯಲ್ಲಿ ಸಿದ್ಧಗೊಳಿಸಲಾಗಿದೆ ಎಂದರು.
ಕಾರ್ಮಿಕರಿಗೆ ಆರೋಗ್ಯದಲ್ಲಿ ಸಮಸ್ಯೆ ಎದುರಾದಲ್ಲಿ ಅವರಿದ್ದಲ್ಲಿಗೆ ವೈದ್ಯರ ಸಮೇತ ಈ ಯುನಿಟ್ ತೆರಳಿ ಉಚಿತ ಚಿಕಿತ್ಸೆ, ಔಷಧ ಕೂಡ ಕೊಡಲಾಗುತ್ತದೆ. ಕಾರ್ಮಿಕರ ಕಾರ್ಡ್ ಪಡೆದಿರುವ ಕಾರ್ಮಿಕರಿಗೆ ಮೊದಲ ಆದ್ಯತೆ ಇದೆ. ಪ್ರತಿಯೊಬ್ಬ ಕಾರ್ಮಿಕರು ಆನ್‌ಲೈನ್ ಮೂಲಕ ಅರ್ಜಿ ಹಾಕಿ ಕಾರ್ಡ್ ಪಡೆದುಕೊಳ್ಳಬೇಕು. ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಮಿಕರಲ್ಲಿ ಜಾಗೃತಿ ಮೂಡಿಸಿ ಕಾರ್ಡ್ ಮಾಡಿಸುವ ಕೆಲಸ ಮಾಡಬೇಕೆಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕಾರ್ಮಿಕರು ಆರೋಗ್ಯದ ಮೇಲೆ ಗಮನ ಕೊಡದೆ ಸದಾ ಕೆಲಸದಲ್ಲಿ ಕಾಲ ಕಳೆಯುತ್ತಾರೆ. ಶ್ರಮಿಕರ ಆರೋಗ್ಯ ಕಾಪಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಚಿಕಿತ್ಸೆಗಾಗಿ ಅಧಿಕ ಹಣ ಭರಿಸದಿರುವ, ವೈದ್ಯರ ಬಳಿ ತೆರಳದ ಅದೆಷ್ಟೋ ಕಾರ್ಮಿಕರಿದ್ದು, ಅಂತಹ ಶ್ರಮಿಕರಿಗೆ ಉಚಿತ ಚಿಕಿತ್ಸೆ, ಉಚಿತ ಔಷದ ಸಿಗಲೆಂದು ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಅಧಿಕಾರಿಗಳು ಈ ಯೋಜನೆಯನ್ನು ಕಾರ್ಮಿಕರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ಕೆಲಸದ ಸುರಕ್ಷತೆ ವಸ್ತç ಹಾಗೂ ಸಾಮಗ್ರಿಗಳನ್ನು ವಿತರಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ಆರ್.ಅರವಿಂದ್, ಸಂಚಾರಿ ಕ್ಲಿನಿಕ್‌ನ ಜಿಲ್ಲಾ ಮಡಿಕಲ್ ಅಧಿಕಾರಿ ಡಾ.ಕೆ.ಎನ್.ಕಸ್ತೂರಿ, ಕಾರ್ಮಿಕ ಅಧಿಕಾರಿ ರಾಜಶೇಖರ್ ಹಿರೇಮಠ್, ಮುಮ್ತಾಜ್ ಬೇಗಂ, ರಾಜಪ್ಪ, ಪಿಡಿಒ ಸುಮಲತಾ, ಮುಖಂಡರಾದ ಕರಿಬಸಪ್ಪ, ಪ್ರಕಾಶ್, ಬಸಣ್ಣ, ರವಿ, ಜಾಕೀರ್, ರಾಜಣ್ಣ, ಹಾಗೂ ಕಾರ್ಮಿಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
“ಸಂಚಾರಿ ಆರೋಗ್ಯ ಘಟಕವು ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಹೋಗಲಿದ್ದು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಒತ್ತು ನೀಡಬೇಕು”.
|ಕೆ.ಎಸ್.ಬಸವಂತಪ್ಪ, ಶಾಸಕರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ2 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ2 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ3 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ8 hours agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

