ದಿನದ ಸುದ್ದಿ

ಹಾವೇರಿಯಲ್ಲಿ 650 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿಯಲ್ಲಿ ಇಂದು 650 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಲಾಗಿದೆ ಎಂದರು.

ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ಬಂಡವಾಳ ವೆಚ್ಚ ಕಳೆದ ವರ್ಷಕ್ಕಿಂತ 31 ಸಾವಿರ ಕೋಟಿ ಹೆಚ್ಚಾಗಿದೆ.

ಇದಲ್ಲದೆ ಹೆಚ್ಚುವರಿವಾಗಿ 50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ತೆಗೆದಿಡಲಾಗಿದೆ. ಒಟ್ಟು ಒಂದು ಲಕ್ಷದ 33 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version