ದಿನದ ಸುದ್ದಿ
ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಸಿಎಂ..!
ಸುದ್ದಿದಿನ,ಹುಬ್ಬಳ್ಳಿ: ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ.
ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಯ ನಡುವೆ ಸಿಎಂ ಬೊಮ್ಮಾಯಿ ಶಾಸಕ ಅರವಿಂದ್ ಬೆಲ್ಲದ್ ನಿವಾಸಕ್ಕೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈವರೆಗೂ ಅರವಿಂದ್ ಬೆಲ್ಲದ್ ಜೊತೆ ಅಂತರ ಕಾಯ್ದುಕೊಂಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಏಕಾಏಕಿ ಬೆಲ್ಲದ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪರ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಅರವಿಂದ್ ಬೆಲ್ಲದ್ ಅವರನ್ನು ಸಿಎಂ ಭೇಟಿಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243