ದಿನದ ಸುದ್ದಿ
ಕುಡಿವ ನೀರಿಗಾಗಿ ಮಹಾರಾಷ್ಟ್ರಕ್ಕೆ ಸಿಎಂ ಮನವಿ
ಸುದ್ದಿದಿನ, ಬೆಂಗಳೂರು : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ಮಹಾರಾಷ್ಟ್ರದ ಜಲಾಶಯಗಳಿಂದ ಕರ್ನಾಟಕದ ನದಿಗಳಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೋರಿದ್ದಾರೆ.
ರಾಜ್ಯದ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ತೊಂದರೆಯಿದ್ದು, ಮಹಾರಾಷ್ಟ್ರ ದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಹಾಗೂ ಉಜನಿ ಜಲಾಶಯದಿಂದ ಭೀಮಾ ನದಿಗೆ ತಲಾ 3.00 ಟಿಎಂಸಿ ನೀರು ಬಿಡುವಂತೆ ಮನವಿ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243