Connect with us

ದಿನದ ಸುದ್ದಿ

ರೈತರಿಗೆ ಹೆಕ್ಟೇರ್ ಗೆ 25 ಸಾವಿರ ಪರಿಹಾರ ನೀಡಲು ರಾಜ್ಯಸರ್ಕಾರದ ಮಹತ್ವದ ನಿರ್ಧಾರ : 2 ತಿಂಗಳ ವಿದ್ಯುತ್ ಬಿಲ್ ಮನ್ನಾ..!

Published

on

ಸುದ್ದಿದಿನ,ಬೆಂಗಳೂರು : ಭೀಕರ ಕೊರೊನಾ ಎಫೆಕ್ಟ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಕಷ್ಟ ಕಾಲದಲ್ಲಿ ನಾವು ಈಗ ಲಾಕ್​ಡೌನ್​ ಅನ್ನು ಸರಳಗೊಳಿಸಿದ್ದೇವೆ. ಆದರೆ ಲಾಕ್​ಡೌನ್ ನಿಲ್ಲಿಸಿದ್ದೇವೆ ಎಂದು ಅರ್ಥವಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಬುಧವಾರ ವಿಧಾನಸೌದದಲ್ಲಿ‌ ತುರ್ತು ಪತ್ರಿಕಾಗೋಷ್ಠಿಯ ನಡೆಸಿ ಅವರು ಮಾತನಾಡಿದ ಅವರು, ನಾಳೆಯಿಂದ ಬಸ್ಸಿನಲ್ಲಿ ಕಾರ್ಮಿಕರನ್ನು ಕಳಿಸುವುದನ್ನು ನಿಲ್ಲಿಸಲಾಗುತ್ತೆದೆ. ಕಾರ್ಮಿಕರಿಗೆ ಲಾಕ್ ಡೌನ್ ಶುರುವಾದಾಗಿನಿಂದ, ಹಲವು ಬಿಲ್ಡರ್​ಗಳು, ಕಂಪನಿಗಳು ಕೆಲಸ ಇಲ್ಲದಿದ್ದರೂ ಉಚಿತ ಊಟ, ವಸತಿಯನ್ನು ನೀಡಿದ್ದಾರೆ. ಹಾಗೆ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ಅವರವರ ರಾಜ್ಯಕ್ಕೆ, ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದೇವೆ ಎಂದರು.

ಪ್ರೆಸ್ ಮೀಟ್ ಹೈಲೈಟ್ಸ್

  1. ರಾಜ್ಯಕ್ಕೆ ₹1600 ಕೋಟಿ ಪ್ಯಾಕೇಜ್​ ಘೋಷಣೆ.
  2. 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದ ಹೂವು ಮಾರಾಟವಾಗದೇ ನಮ್ಮ ರೈತರು ಬೆಳೆದ ಹೂವು ನಾಶವಾಗಿದ್ದು, ಒಂದು ಹೆಕ್ಟೇರ್​ಗೆ 25 ಸಾವಿರ ರೂಪಾಯಿ ಪರಿಹಾರವನ್ನು ರೈತರಿಗೆ ನೀಡಲು ತೀರ್ಮಾನ.
  3. ರೈತರು ಬೆಳೆದ ತರಕಾರಿ ಮತ್ತು ಹಣ್ಣುಗಳಿಗೆ ಸರಿಯಾದ ದರ, ಮಾರುಕಟ್ಟೆ ಸಿಗದೇ ಸಂಕಷ್ಟಕ್ಕೆ ಒಳಗಾಗಿರುವ ಬೆಳೆಗಾರರಿಗೆ ಸೆಪರೇಟ್ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದರ ಬಗ್ಗೆ ಕೆಲವು ಅಧ್ಯಯನ ನಡೆಸಲಾಗುತ್ತಿದೆ.
  4. ರಾಜ್ಯದಲ್ಲಿ ಸುಮಾರು 15.8 ಲಕ್ಷ ಕಾರ್ಮಿಕರಿಗೆ 2 ಸಾವಿರ ರೂಪಾಯಿ ಸಹಾಯ ಧನ ನೀಡಲು ನಿರ್ಧಾರ.
  5. 60 ಸಾವಿರ ಅಗಸರಿಗೆ, 2 ಲಕ್ಷ 30 ಸಾವಿರ ಕ್ಷೌರಿಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರವನ್ನು ನೀಡಲು ನಿರ್ಧಾರ.
  6. ರಾಜ್ಯದಲ್ಲಿ 575 ಸಾವಿರ ಚಾಲಕರಿದ್ದು, ಅವರಿಗೂ ಸಹ ಒನ್​ ಟೈಮ್ 5 ಸಾವಿರ ರೂಪಾಯಿ ಪರಿಹಾರ ನೀಡಲು ನಿರ್ಧಾರ.
  7. ರಾಜ್ಯ ಬಿಟ್ಟು ಹೊರಗೆ ಹೋಗುವುದನ್ನು ತಡೆಯಲು ಕಾರ್ಮಿಕರಿಗೆ 5 ಸಾವಿರ ರೂಪಾಯಿ ನೀಡಲು ಕೂಡ ನಿರ್ಧಾರ.
  8. ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ವಿದ್ಯುತ್​​ ಬಿಲ್​ನ ಫಿಕ್ಸ್​​ಡ್​ ಮಿನಿಮಮ್​ ಚಾರ್ಜಸ್​ ಅನ್ನು ಎರಡು ತಿಂಗಳ ಅವಧಿಗೆ ಸಂಪೂರ್ಣ ಮನ್ನಾ.
  9. ನೇಕಾರರಿಗೆ ನೆರವಾಗಲೂ ಈಗಾಗಲೇ 109 ಕೋಟಿ ವೆಚ್ಚದಲ್ಲಿ ನೇಕಾರ ಸಾಲ ಮನ್ನಾ ಯೋಜನೆ ಘೋಷಿಸಿಸಲಾಗಿತ್ತು. ಈಗ ಎಲ್ಲ ಸಾಲ ಮನ್ನಾ ಮಾಡಿ, ಹೊಸ ಸಾಲ ಕೊಡಲಾಗುವುದು. ಹಾಗೇ 1 ಲಕ್ಷದ ವರೆಗೆ ಯಾರು ಈಗಾಗಲೇ ಸಾಲ ಪಾವತಿ ಮಾಡಿದ್ದಾರೋ ಅದನ್ನು ವಾಪಾಸ್ ಕೊಡಲಾಗುವುದು.
  10. ನೇಕಾರ ಸಮ್ಮಾನ ಯೋಜನೆ ಘೋಷಣೆ ಮಾಡಿದ್ದು, ಇದರ ಮೂಲಕ ಸುಮಾರು 40 ಸಾವಿರ ನೇಕಾರರಿಗೆ ಪ್ರತಿ ವರ್ಷ 2 ಸಾವಿರ ರೂಪಾಯಿ ನೀಡಲು ನಿರ್ಧಾರ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending