ದಿನದ ಸುದ್ದಿ

ಹತ್ತಿ ಇಳುವರಿ, ಉತ್ಪಾದಕತೆ ವೃದ್ಧಿಗೆ ಸಂಘಟಿತ ಪ್ರಯತ್ನ ಅಗತ್ಯ: ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರೈತರ ಆದಾಯ ವೃದ್ಧಿಸಲು ಹತ್ತಿ ಇಳುವರಿ ಮತ್ತು ಉತ್ಪಾದಕತೆ ಹೆಚ್ಚಿಸಲು ಸಂಘಟಿತ ಪ್ರಯತ್ನಗಳನ್ನು ಮಾಡುವಂತೆ ಎಲ್ಲ ಭಾಗೀದಾರರಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ.

ಸಿಐಟಿಐ-ಸಿಡಿಆರ್ ಎ ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದ ಪ್ರಮುಖ ಹತ್ತಿ ಬೆಳೆಯುವ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಡಿಮೆ ಹತ್ತಿ ಉತ್ಪಾದನೆಯಾಗುತ್ತಿದೆ ಎಂದು ತಿಳಿಸಿದರು.

ಉತ್ತಮ ಸಂಶೋಧನೆ ಮತ್ತು ಉತ್ತಮ ವಿಧಾನಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ರೈತರಿಗೆ ಮಾರ್ಗದರ್ಶನ ನೀಡಲು ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version