ದಿನದ ಸುದ್ದಿ
ತರೀಕೆರೆ | ಕುಂಟಿನಮಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಸಮಾರಂಭ
ಸುದ್ದಿದಿನ,ತರೀಕೆರೆ : ತಾಲೂಕಿನ ಕುಂಟಿನಮಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಪರೀಕ್ಷೆ ಯಶಸ್ಸಿನ ಬಗ್ಗೆ, ಪರೀಕ್ಷಾ ಭಯದ ಬಗ್ಗೆ ಇರುವ ಆತಂಕವನ್ನು ನಿವಾರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡಲಾಯಿತು. ಪರೀಕ್ಷೆಯ ಭಯದ ಬಗ್ಗೆ ಆತ್ಮಸ್ಥೈರ್ಯವನ್ನು ಈ ಸಂದರ್ಭದಲ್ಲಿ ತುಂಬಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಮತಾ ಸಿ, ಸಮಾಜಶಾಸ್ತ್ರಉಪನ್ಯಾಸಕರಾದ ಮಮತಾ ಆರ್, ಚಂದ್ರಕಿರಣ ಬಿ. ಪ್ರದೀಪ್ ಕುಮಾರ್ ಬಿ.ಜೆ ಚೇತನ್ ಕುಮಾರ್, ಸತ್ಯನಾರಾಯಣರಾವ್, ರುದ್ರಪ್ಪನವರು, ಶಿವಣ್ಣ ಮಂಜಪ್ಪ, ನಂಜುಂಡಪ್ಪ. ಕಾಲೇಜು ಸಮಿತಿಯ ಸದಸ್ಯರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243