Connect with us

ದಿನದ ಸುದ್ದಿ

ಶಾಸಕ ಕೃಷ್ಣ ಬೈರೇಗೌಡ ಆಯೋಜಿಸಿದ್ದ ‘ನಮ್ಮ ಯಂಗ್ ಸ್ಟಾರ್ಗೆ’ ವರ್ಣರಂಜಿತ ತೆರೆ

Published

on

ಸುದ್ದಿದಿನ,ಬ್ಯಾಟರಾಯನಪುರ: ಚಿಕ್ಕಂದಿನಲ್ಲಿ ನಾವು ಏನೆಲ್ಲಾ ಕನಸು ಕಂಡಿರುತ್ತೇವೆ. ಡಾಕ್ಟರ್, ಇಂಜಿನಿಯರ್ ಆಗಬೇಕೆನ್ನುವ ಹಂಬಲ ಎಲ್ಲರದ್ದು. ಆದರೆ, ಆಸೆ ಇದ್ದರಷ್ಟೇ ಸಾಲದು ಅದಕ್ಕೆ ಶ್ರಮವೂ ಮುಖ್ಯ ಎಂದು ಬ್ಯಾಟರಾಯನಪುರ ಶಾಸಕಾರದ ಶ್ರೀ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕ್ಷೇತ್ರದ ಚಿಕ್ಕಜಾಲದಲ್ಲಿ ಹಮ್ಮಿಕೊಂಡಿದ್ದ ನಮ್ಮ ಯಂಗ್ ಸ್ಟಾರ್ ಹಾಗೂ ನಮ್ಮೂರ ಹೆಮ್ಮೆ ಕಾರ್ಯಕ್ರಮದ 9ನೇ ಹಾಗೂ ಕಡೆಯ ಆವೃತ್ತಿಯ ಕಾರ್ಯಕ್ರಮದಲ್ಲಿ ಸಭಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ಶ್ರಮವಿದ್ದರೆ ಮಾತ್ರ ಪ್ರತಿಫಲ ದೊರೆಯುತ್ತಿದೆ. ಯಾವ ಮಕ್ಕಳು ಉತ್ತಮ ಪರಿಶ್ರಮ ಹಾಕುತ್ತಾರೋ ಅಂತಹ ಮಕ್ಕಳಿಗೆ ಉತ್ತಮ ಅಂಕಗಳು ದೊರೆಯುತ್ತದೆ. ಮಕ್ಕಳ ಶೈಕ್ಷಣಿಕ ಸಾಧನೆಗೆ ಪೋಷಕರ ಸಹಕಾರ ಅತಿ ಮುಖ್ಯ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮಾತ್ರ ಪ್ರಗತಿ ಹೊಂದಿದರೆ ಸಾಲದು ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಅವರು ಮುಂದಿರಬೇಕು ಆಗ ಮಾತ್ರ ಅವರು ಓದು ಮುಗಿಸಿದ ನಂತರ ಬದುಕಿನಲ್ಲಿ ಸೆಟಲ್‌ ಆಗಲು ಸಾಧ್ಯ ಎಂದು ಅವರು ಹೇಳಿದರು.

ಕ್ಷೇತ್ರದ ಯುವ ಜನತೆಯ ಶೈಕ್ಷಣಿಕ ಹಾಗೂ ಪಠ್ಯೇತರ ಪ್ರತಿಭೆಯನ್ನು ಗುರುತಿಸಲು ಕ್ರಮವಾಗಿ ನಮ್ಮೂರ ಹೆಮ್ಮೆ ಹಾಗೂ ನಮ್ಮ ಯಂಗ್‌ ಸ್ಟಾರ್‌ ಕಾರ್ಯಕ್ರಮವನ್ನು ಎಲ್ಲಾ ವಾರ್ಡ್‌ಗಳಲ್ಲೂ ಆಯೋಜಿಸಲಾಗಿತ್ತು. ಸುಮಾರು ಎರಡು ತಿಂಗಳುಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ. ಪ್ರತೀ ವಾರ್ಡ್‌ನಲ್ಲಿ ಕಾರ್ಯಕ್ರಮ ನಡೆಸಿದಾಗಲೂ ಕನಿಷ್ಠ ನಾಲ್ಕು ಸಾವಿರ ಮಂದಿ ಹಾಜರಿದ್ದು ನಮ್ಮ ಪ್ರಯತ್ನಕ್ಕೆ ಬೆನ್ನು ತಟ್ಟಿದ್ದಾರೆ ಎಂದು ತಿಳಿಸಿದರು.

2 ತಿಂಗಳ ಕಾರ್ಯಕ್ರಮಕ್ಕೆ ತೆರೆ

ಕ್ಷೇತ್ರದ ಯುವ ಪ್ರತಿಭೆಗಳನ್ನು ಗುರುತಿಸುವ ಹಾಗೂ ಎಸ್ಸೆಸ್ಸೆಲ್ಸಿ, ಪಿಯುನಲ್ಲಿ ಶೇ65ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕೆನ್ನುವ ಉದ್ದೇಶದಿಂದ ಕೃಷ್ಣ ಬೈರೇಗೌಡ ಅವರು ಎರಡು ತಿಂಗಳ ಹಿಂದೆ ನಮ್ಮ ಯಂಗ್ ಸ್ಟಾರ್ ಹಾಗೂ ನಮ್ಮೂರ ಹೆಮ್ಮೆ ಎನ್ನುವ ಕಾರ್ಯಕ್ರಮವನ್ನು ಪ್ರತೀ ವಾರ್ಡ್ನಲ್ಲಿ ನಡೆಸಲು ನಿರ್ಧರಿಸಿದ್ದರು. ಅದರಂತೆ ವಿವಿಧ ವಾರ್ಡ್ಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 3100 ಮಂದಿಗೆ ಸನ್ಮಾನ ಮಾಡಲಾಗಿದ್ದು, ಸುಮಾರು 500 ಮಂದಿ ಯುವಕ/ಯುವತಿಯರು ತಮ್ಮ ನೃತ್ಯ, ಗಾಯನ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಶಾಸಕರು ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ಕ್ಷೇತ್ರದೆಲ್ಲಡೆಯಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು ಪೋಷಕರು ಹಾಡಿ ಹೊಗಳಿದ್ದಾರೆ.


  • ಶಾಸಕ ಕೃಷ್ಣ ಬೈರೇಗೌಡ ಅವರು ಆಯೋಜಿಸಿರುವ ಕಾರ್ಯಕ್ರಮದ ಮೂಲಕ ನಮ್ಮ ಮಕ್ಕಳಿಗೆ ಒಂದು ವೇದಿಕೆ ಸಿಕ್ಕಂತಾಗಿದೆ. ನಮ್ಮ ಮಕ್ಕಳೂ ಸಹ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

| ರೇಣುಕಾ, ವಿದ್ಯಾರಣ್ಯಪುರ


  • ನಮ್ಮ ಮಗಳು ಸಂಗೀತಾಭ್ಯಾಸ ಮಾಡುತ್ತಿದ್ದಾಳೆ. ಆಕೆಗೆ ನಮ್ಮ ಯಂಗ್‌ ಸ್ಟಾರ್‌ ಕಾರ್ಯಕ್ರಮ ಒಂದು ವೇದಿಕೆ ನೀಡಿ ಪ್ರೋತ್ಸಾಹಿಸಿದೆ. ಮಕ್ಕಳ ಪ್ರತಿಭೆಯನ್ನು ಪೋಷಕರು ಯಾವಾಗಲೂ ಪ್ರೋತ್ಸಾಹಿಸಬೇಕು.

| ಗುರುನಾಥ್‌, ಸಹಕಾರನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending