ಸಿನಿ ಸುದ್ದಿ
ಕಾಮಿಡಿ ಕಿಲಾಡಿಗಳು ಖ್ಯಾತಿಯ ‘ತುಕಾಲಿ ಸ್ಟಾರ್ ಸಂತೋಷ್ ಕುಮಾರ್’ ಸರಳ ವಿವಾಹ
ಸುದ್ದಿದಿನ, ಡೆಸ್ಕ್ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳು ಸ್ತಬ್ಧವಾಗಿದೆ. ಅಲ್ಲದೆ ಸಾಂಪ್ರದಾಯಿಕ ಆಚರಣೆಗಳು, ವಿವಾಹ, ನಾಮಕರಣ ಇತರೆ ಸಂಭ್ರಮಾಚರಣೆಗಳಿಗೂ ಬ್ರೇಕ್ ಬಿದ್ದಿದೆ.
ಇಂತಹ ಸಂದರ್ಭಗಳಲ್ಲಿ ನಿಶ್ಚಯವಾಗಿರುವ ಮದುವೆಗಳನ್ನು ಸಾಧ್ಯವಾದರೆ ಮುಂದೂಡುವ, ಇಲ್ಲವೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬಹಳ ಸರಳವಾಗಿ ವಿವಾಹ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎಲ್ಲೆಡೆ ಇದೆ. ಅಂತಹುದೇ ಒಂದು ವಿವಾಹ ಕೂಡ ನಡೆದಿದ್ದು, ಕಾಮೆಡಿ ಕಿಲಾಡಿಗಳು ಸೀಸನ್ ಮೂರರ ಖ್ಯಾತಿಯ ಹಾಸ್ಯ ಕಲಾವಿದರೊಬ್ಬರ ವಿವಾಹ ಸರಳವಾಗಿ ನಡೆದಿದೆ.
ಕಾಮೆಡಿ ಕಿಲಾಡಿಗಳು ಸೀಸನ್ ಮೂರರ ಮೂಲಕ ಜನರ ಮೆಚ್ಚುಗೆ ಪಡೆದ ಹಾಸ್ಯ ಕಲಾವಿದ ಸಂತೋಷ್ ಕುಮಾರ್ ಅವರ ಮದುವೆ ಸರಳವಾಗಿ ನಡೆದಿದ್ದು, ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅವರು ತಮ್ಮ ಪೋಸ್ಟ್ ನಲ್ಲಿ ಗೆಳಯರೇ ಇಂದು ನಿಮ್ಮ ತುಕಾಲಿ ಸ್ಟಾರ್ ಸಂತು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಮ್ಮೆಲ್ಲರ ಶುಭ ಹಾರೈಕೆಗಳು ನನ್ನ ಮೇಲೆ ಇರಲಿ ಗೆಳೆಯರೇ. ಲಾಕ್ ಡೌನ್ ಇದ್ದ ಹಿನ್ನೆಲೆಯಲ್ಲಿ ನಿಮ್ಮೆಲ್ಲರಿಗೂ ಮದುವೆಯ ಕರೆಯೋಲೆಯನ್ನು ಕಳುಹಿಸುವುದಕ್ಕೆ ಆಗಿರಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ದಯವಿಟ್ಟು ಯಾರೂ ಬೇಜಾರು ಮಾಡಿಕೊಳ್ಳಬೇಡಿ. ಲಾಕ್ ಡೌನ್ ಮುಗಿದ ನಂತರ ನಿಮ್ಮೆಲ್ಲರನ್ನು ಕರೆಯುತ್ತೇನೆ. ಇಂತಿ ನಿಮ್ಮ ತುಕಾಲಿ ಸ್ಟಾರ್ ಸಂತು ಎಂದು ತಮ್ಮ ಪೋಸ್ಟ್ ಮಾಡಿ ತಮ್ಮ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಸಂತೋಷ್ ಕುಮಾರ್ ಅವರ ಹೊಸ ಜೀವನಕ್ಕೆ ನಾವು ಕೂಡಾ ಶುಭ ಹಾರೈಸೋಣ. ಹಾಸ್ಯ ಕಲಾವಿದನಾಗಿ ಮತ್ತಷ್ಟು ಹೆಸರು ಮಾಡಲಿ ಎಂದು ನಾವು ಶುಭ ಹಾರೈಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್‌ಬೌನ್ಸ್ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ : ಜಿಲ್ಲಾ ಸಮಿತಿ ಸದಸ್ಯತ್ವಕ್ಕೆ ನೇಮಕ ಮಾಡಲು ಆಹ್ವಾನ
-
ದಿನದ ಸುದ್ದಿ7 days ago
ಕಬ್ಬಳ ಗ್ರಾಮದ ಮಹಿಳೆ ನಾಪತ್ತೆ
-
ದಿನದ ಸುದ್ದಿ7 days ago
ದಾವಣಗೆರೆ | ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ : ಡಿಸಿ ಗಂಗಾಧರಸ್ವಾಮಿ ಜಿ.ಎಂ.
-
ದಿನದ ಸುದ್ದಿ6 days ago
ಒಳಮೀಸಲಾತಿ ಜಾರಿಗೆ ಚಾಲನೆ ; ಜಾತಿಗಣತಿ ವರದಿ ವಿರೋಧಕ್ಕೆ ಬೇಡ ಮನ್ನಣೆ : ಮಾಜಿ ಸಚಿವ ಎಚ್.ಆಂಜನೇಯ
-
ದಿನದ ಸುದ್ದಿ21 hours ago
ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ನೂತನ ಕಟ್ಟಡದ ಲೋಕಾರ್ಪಣೆ ; ಗ್ರೂಪ್ ಡಿ ಹುದ್ದೆಗಳಿಗೆ ನೇರಪಾವತಿಯಡಿ ನೇಮಕಕ್ಕೆ ಕಾನೂನು ಇಲಾಖೆಗೆ ಪ್ರಸ್ತಾವನೆ : ಸಚಿವ ದಿನೇಶ್ ಗುಂಡೂರಾವ್
-
ದಿನದ ಸುದ್ದಿ6 days ago
ದಾವಣಗೆರೆ | ಬಿರ್ಸಾ ಮುಂಡಾ ಜನ್ಮ ದಿನಾಚರಣೆ ; ಬುಡಕಟ್ಟು ಜನರ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆಗಳ ಸಮರ್ಪಕ ಬಳಕೆಗೆ ಸೂಚನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್