ದಿನದ ಸುದ್ದಿ

ಜೀತಕ್ಕೆ ಎಳೆದೊಯ್ದಿದ್ದ ಮಹಿಳೆಗೆ ಸಾಂತ್ವನ ; ಅರೋಪಿಗೆ ಜಾಮೀನು ಮಂಜೂರು ಮಾಡದಂತೆ ಆದೇಶ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ

Published

on

ಸುದ್ದಿದಿನ ಡೆಸ್ಕ್ : ಇಂದು ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿ ನಡೆಸಿದ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷೆ ದಲಿತ ಮಹಿಳೆಯ ಕ್ರೌರ್ಯ ಎಸೆದ ಆರೋಪಿಗಳನ್ನು ಪತ್ತೆ ಮಾಡಿ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.

ಮಂಡ್ಯ ಜಿಲ್ಲೆಯಲ್ಲಿ ಇಂದಿಗೂ ಜೀತ ಪದ್ಧತಿ ಜೀವಂತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನೊಂದ ಮಹಿಳೆಗೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು ಮತ್ತು ಅವರ ಮಗನಿಗೆ ವಸತಿ ಶಾಲೆಯಲ್ಲಿ
ವ್ಯವಸ್ಥೆ ಮಾಡಲಾಗುತ್ತದೆ ಎಂದರು
ಸಭೆಯಲ್ಲಿ ದಲಿತ ನಾಯಕರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ರೂಪ , ಡಿವೈಎಸ್ಪಿ ಮಲ್ಲೀಕ್, ಸರ್ಕಲ್ ಇನ್ಸ್ಪೆಕ್ಟರ್ ಪ್ರಭಾಕರ್ , ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ,ಸಿ.ಡಿ.ಪಿ.ಒ.ಚೇತನ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಮತ್ತು ಜೀವಿತ ಸಂಸ್ಥೆಯ ಮುಖಂಡರುಗಳು ಹಾಗೂ ದಲಿತ ಪರ ಸಂಘಟನೆಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version