Connect with us

ದಿನದ ಸುದ್ದಿ

ಮಾನವ ಹಕ್ಕುಗಳ ಸಂರಕ್ಷಣೆಗೆ ಆಯೋಗ ಸುಮೋಟೋ ಕೇಸ್ ; ಆಯೋಗದ ಹೆಸರೇಳಿ ಬೆದರಿಸುವರ ಮೇಲೆ ಕಾನೂನು ಕ್ರಮ: ಟಿ.ಶ್ಯಾಮ್‍ಭಟ್

Published

on

ಸುದ್ದಿದಿನ,ದಾವಣಗೆರೆ:ಮಾನವ ಹಕ್ಕುಗಳ ಉಲ್ಲಂಘನೆ ತಡೆಗಟ್ಟಲು ನೇರ ದೂರುಗಳ ಜೊತೆಗೆ ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಟಿ.ಶ್ಯಾಮ್‍ಭಟ್ ತಿಳಿಸಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಬಾಕಿ ಇರುವ ಜಿಲ್ಲೆಯ ಪ್ರಕರಣಗಳ ಕುರಿತು ವಿಚಾರಣೆ ನಡೆಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. ಸರ್ಕಾರದ ವಿವಿಧ ಇಲಾಖೆಗಳು ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕಚೇರಿಗಳಿಗೆ ಬಂದಾಗ ಅವರ ಅಹವಾಲುಗಳನ್ನು ಸೌಜನ್ಯಯುತವಾಗಿ ಸ್ವೀಕರಿಸಿ ನೋವು, ನಲಿವುಗಳಿಗೆ ಸ್ಪಂದನೆ ನೀಡಿದಾಗ ಸಾಕಷ್ಟು ಪರಿಹಾರ ಸಿಕ್ಕಂತಾಗುತ್ತದೆ. ಯಾವುದೇ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ವೈಯಕ್ತಿಕವಾಗಿ ತೆಗೆದುಕೊಳ್ಳದೇ ನಿಯಮಾನುಸಾರವಾಗಿ ಕೆಲಸ ಮಾಡಿಕೊಡುವ ನಿಟ್ಟಿನಲ್ಲಿ ಸೇವೆ ಸಲ್ಲಿಸಬೇಕು. ಅರ್ಹತೆ ಇದ್ದರೂ ಸೌಲಭ್ಯಗಳನ್ನು ನೀಡದಿದ್ದಲ್ಲಿ ಅದು ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂದರು.

ಮಾನವ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳಲ್ಲಿ ಆಯೋಗಕ್ಕೆ ನೇರವಾಗಿ, ಆನ್‍ಲೈನ್ ಮೂಲಕವೂ ಅತ್ಯಂತ ಕಡಿಮೆ ಖರ್ಚಿನಲ್ಲಿ ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕ ಹಿತಾಸಕ್ತಿ ದೂರುಗಳನ್ನು ಸ್ವಯಂಪ್ರೇರಿತವಾಗಿ ದಾಖಲು ಮಾಡಲಾಗುತ್ತದೆ. ಸಾರ್ವಜನಿಕರಿಗೆ ಇರುವ ಮೂಲಭೂತ ಹಕ್ಕುಗಳನ್ನು ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಉಲ್ಲಂಘನೆಯ ಬಗ್ಗೆ ಇಲಾಖೆಗಳಿಗೆ ದೂರುಗಳು ಬಂದಲ್ಲಿ ಇದಕ್ಕೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಇಲಾಖೆ ಅಧಿಕಾರಿಗಳು ಮಾಡಬೇಕಾಗಿದೆ ಎಂದರು.

ಅಧಿಕಾರ ವಹಿಸಿಕೊಂಡ ಸಮಯದಲ್ಲಿ ಆಯೋಗದಲ್ಲಿ 5400 ರಷ್ಟು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದವು, ಆಯಾ ಜಿಲ್ಲೆಗಳಿಗೆ ತೆರಳಿ ಅಲ್ಲಿಯೇ ಇಲಾಖೆ ಅಧಿಕಾರಿಗಳು, ದೂರುದಾರರೊಂದಿಗೆ ನೇರವಾಗಿ ವಿಚಾರಣೆ ಮಾಡಲಾಗುತ್ತಿದೆ. ಇದರಿಂದ ಶೀಘ್ರವಾಗಿ ಪ್ರಕರಣಗಳ ಇತ್ಯರ್ಥ ಮಾಡಲು ಸಾಧ್ಯವಾಗಲಿದೆ. ಬಾಕಿ ಇದ್ದ ಪ್ರಕರಣಗಳಲ್ಲಿ 2000 ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಮಾಡಿದ್ದು 3413 ಪ್ರಕರಣಗಳು ಆಯೋಗದಲ್ಲಿ ಇತ್ಯರ್ಥಕ್ಕೆ ಬಾಕಿ ಇವೆ.

ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದಂತೆ 18 ಪ್ರಕರಣಗಳು ಬಾಕಿ ಇದ್ದು ಸ್ಥಳದಲ್ಲಿಯೇ ವಿಚಾರಣೆ ನಡೆಸಲಾಗಿದ್ದು 15 ಪ್ರಕರಣಗಳನ್ನು ಮುಕ್ತಾಯ ಮಾಡಲಾಗಿದೆ. ಬಾಕಿ ಮೂರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮಾನವ ಹಕ್ಕು ಆಯೋಗದ ಹೆಸರಿನಲ್ಲಿ ಬೆದರಿಕೆಗೆ ಕ್ರಮ; ಅನೇಕ ಸಂಘ, ಸಂಸ್ಥೆಯವರು ಮಾನವ ಹಕ್ಕುಗಳ ಆಯೋಗ, ಪರಿಷತ್ತು, ಹೋರಾಟ ಸಮಿತಿ ಎಂಬ ಹೆಸರನ್ನಿಟ್ಟುಕೊಂಡು ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಬೆದರಿಕೆಯೊಡ್ಡುತ್ತಿರುವ ಬಗ್ಗೆ ಮಾಹಿತಿ ಇದೆ. ಯಾವುದೇ ವ್ಯಕ್ತಿ, ಸಂಘ, ಸಂಸ್ಥೆಯವರು ಮಾನವ ಹಕ್ಕುಗಳ ಆಯೋಗದ ಹೆಸರಿನಲ್ಲಿ ಬೆದರಿಕೆಯೊಡ್ಡಿದಲ್ಲಿ ನೇರವಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಇಲ್ಲವೇ ಆಯೋಗಕ್ಕೆ ದೂರು ನೀಡಬಹುದಾಗಿದೆ. ಯಾವುದೇ ವ್ಯಕ್ತಿ ಆಯೋಗದ ಹೆಸರಿನಲ್ಲಿ ಸಂಘ, ಸಂಸ್ಥೆ, ಪರಿಷತ್‍ಗಳನ್ನು ಸ್ಥಾಪನೆ ಮಾಡಿಕೊಳ್ಳುವಂತಿಲ್ಲ, ಅವರ ಹಕ್ಕುಗಳ ಉಲ್ಲಂಘನೆಯಾಗಿದ್ದಲ್ಲಿ ನೇರವಾಗಿ ಆಯೋಗಕ್ಕೆ ದೂರು ನೀಡಬಹುದು. ಆದರೆ ಹೆಸರಿಟ್ಟುಕೊಂಡು ಬೆದರಿಕೆ ಸಲ್ಲದು, ಅಧಿಕಾರಿಗಳು ಇಂತಹ ವ್ಯಕ್ತಿಗಳಿಗೆ ಕಡಿವಾಣ ಹಾಕಿ ಎಂದರು.

ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಮಾತನಾಡಿ ಪ್ರತಿಯೊಬ್ಬರಿಗೂ ನೈಸರ್ಗಿಕವಾಗಿ ಬಂದಂತಹ ಹಕ್ಕುಗಳು, ಪರಭಾರೆಯಾಗಂತಹ ಹಕ್ಕುಗಳಾಗಿವೆÀ. ಮತ್ತು ಸಂವಿಧಾನದತ್ತವಾಗಿ ಬಂದಂತಹ ಹಕ್ಕುಗಳು ಸೇರಿವೆ. ಇದರಲ್ಲಿ ಯಾವುದೇ ಹಕ್ಕುಗಳು ಉಲ್ಲಂಘನೆಯಾದರೂ ಪ್ರಶ್ನಿಸುವ ಹಕ್ಕು ಎಲ್ಲರಿಗಿದೆ. ನೊಂದವರು ನೇರವಾಗಿ ಆಯೋಗಕ್ಕೆ ದೂರು ನೀಡಬಹುದು. ಮತ್ತು ಆಯೋಗವು ಸಹ ಮಾಧ್ಯಮಗಳಲ್ಲಿ ಬರುವ ದೂರುಗಳನ್ನು ಆಧರಿಸಿ ಸ್ವಯಂಪ್ರೇರಿತ ದೂರುಗಳನ್ನಾಗಿ ಆಯೋಗ ದಾಖಲು ಮಾಡಿಕೊಳ್ಳಲಿದೆ ಎಂದರು.

ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿನ ಬಿಸಿಎಂ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‍ಗೆ ಅನಿರೀಕ್ಷಿತ ಭೇಟಿ ನೀಡಿದ ವೇಳೆ ಪ.ಪಂಗಡದ ಹಾಸ್ಟೆಲ್‍ನಲ್ಲಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚಿನ ವಿದ್ಯಾರ್ಥಿಗಳಿದ್ದು ಈಗಿರುವ ಅಡುಗೆ ಸಿಬ್ಬಂದಿಗೆ ಕಾರ್ಯಭಾರ ಹೆಚ್ಚಿದೆ. ಇದಕ್ಕೆ ಹೆಚ್ಚುವರಿ ಸಿಬ್ಬಂದಿ ಮಂಜೂರು ಮಾಡಿಸಲು ಮತ್ತು ರಾತ್ರಿ ಕಾವಲು ಹೊರಗುತ್ತಿಗೆ ಸಿಬ್ಬಂದಿಗೆ ಕಡಿಮೆ ವೇತನ ಪಾವತಿಸಲಾಗುತ್ತಿದೆ ಎಂಬ ಸಿಬ್ಬಂದಿ ಅಹವಾಲಾಗಿದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್‍ಗೆ ಬಸ್ ವ್ಯವಸ್ಥೆ ಕಲ್ಪಿಸಲಾಗದೆ, ಆದರೆ ಬೆಳಗ್ಗೆ ಒಂದು ಬಸ್ ಮಾತ್ರ ಬರುತ್ತಿದ್ದು ಬಸ್‍ಗಳನ್ನು ಹೆಚ್ಚಿಸಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದರು. ಕಾಲೇಜು ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಡ್ರೆಸ್ಸಿಂಗ್ ಕೊಠಡಿಯ ವ್ಯವಸ್ಥೆ ಹೊಸ ಕಟ್ಟಡ ನಿರ್ಮಾಣದ ವೇಳೆ ಅಳವಡಿಸಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಮಾತನಾಡಿ ಹಾಸ್ಟೆಲ್‍ಗೆ ಹೆಚ್ಚುವರಿ ಬಸ್ ವ್ಯವಸ್ಥೆ, ಬಾಲಕಿಯರಿಗೆ ಡ್ರೆಸ್ಸಿಂಗ್ ರೂಂ, ಬಿಸಿ ನೀರು ವ್ಯವಸ್ಥೆ, ಹೊಸ ಜೈಲು ನಿರ್ಮಾಣ, ಹೊಸ ಸಿಜಿ ಆಸ್ಪತ್ರೆ ಕಟ್ಟಡ ನಿರ್ಮಾಣದ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಆಯೋಗಕ್ಕೆ ಮನವರಿಕೆ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending