Connect with us

ದಿನದ ಸುದ್ದಿ

ರಾಜ್ಯ ಸರಕಾರಿ ನೌಕರರಿಗೆ 2022 ಕ್ಕೆ ಪರಿಷ್ಕೃತ ವೇತನ ಕೊಡಿಸಲು ಹಾಗೂ ಎಪಿಎಸ್ ರದ್ದುಗೊಳಿಸಲು ಬದ್ಧ; ಅಗತ್ಯಬಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ: ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ

Published

on

ಸುದ್ದಿದಿನ,ಧಾರವಾಡ : ಕರ್ನಾಟಕ ರಾಜ್ಯ ಸರಕಾರದಿಂದ 2022 ರ ಆರಂಭದಲ್ಲಿ ವೇತನ ಆಯೋಗದ ಶಿಫಾರಸ್ಸು ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೊಳಿಸಲು ಮತ್ತು ನೂತನ ಪಿಂಚಣಿ (ಎನ್.ಪಿ.ಎಸ್) ಯೋಜನೆ ರದ್ದುಗೊಳಿಸಲು ಸರಕಾರದ ಮೇಲೆ ಒತ್ತಡ ಹೇರಿ ಕ್ರಮಜರುಗಿಸಲು ರಾಜ್ಯ ಸರಕಾರಿ ನೌಕರರ ಸಂಘ ಬದ್ದವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಅವರು ಇಂದು ಮಧ್ಯಾಹ್ನ ರಾಜ್ಯ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕವು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದಿರುವ ಜಿಲ್ಲೆಯ ಸರಕಾರಿ ನೌಕರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ 2020-21 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ, ಮಾತನಾಡಿದರು.

ರಾಜ್ಯ ಸರಕಾರಿ ನೌಕರರ ವೇತನ ತಾರತಮ್ಯ ಹೊಗಲಾಡಿಸಲು ವೇತನ ಆಯೋಗ ಪರಿಷ್ಕೃತ ವೇತನ ನೀಡಲು ಶಿಪಾರಸ್ಸು ಮಾಡಿದೆ. ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರು ಪಡೆಯುತ್ತಿರುವ ವೇತನಕ್ಕಿಂತ ನಮ್ಮ ರಾಜ್ಯ ಸರಕಾರಿ ನೌಕರರಿಗೆ ಕಡಿಮೆ ವೇತನವಿದೆ.

ಪರಿಷ್ಕೃತ ವೇತನ ಜಾರಿಗೊಳಿಸಲು ಸರಕಾರಕ್ಕೆ ಸಂಘದಿಂದ ಹಲವು ಬಾರಿ ಮನವಿ ಸಲ್ಲಿಸಿ, ಒತ್ತಾಯಿಸಲಾಗಿದೆ. ಸರಕಾರ ಪರೀಶಿಲಿಸಿ, ಜಾರಿಗೊಳಿಸುವ ಭರವಸೆ ನೀಡುತ್ತಾ ಬರುತ್ತಿದೆ. ಆದ್ದರಿಂದ ಸಂಘವು ವೇತನ ಆಯೋಗದ ಶಿಫಾರಸುಗಳನ್ನು ಮತ್ತು ಕೇಂದ್ರ ಹಾಗೂ ಇತರೆ ರಾಜ್ಯಗಳ ಸರಕಾರಿ ನೌಕರರ ವೇತನ ಕುರಿತು ಅಧ್ಯಯನ ಮಾಡಿ ವರದಿಸಲ್ಲಿಸಲು ತಜ್ಞರ ಸಮಿತಿ ರಚಿಸಿದ್ದು, ಸದ್ಯದಲ್ಲೆ ಆ ಸಮಿತಿ ವರದಿ ನೀಡಲಿದೆ.

ರಾಜ್ಯ ಸರಕಾರ ಬರುವ 2022 ರ ಆರಂಭದಲ್ಲಿ ಪರಿಷ್ಕೃತ ವೇತನ ನೀಡದಿದ್ದಲ್ಲಿ ರಾಜ್ಯದಾದ್ಯಂತ ಸಂಘವು ಉಗ್ರ ಹೋರಾಟ ಮಾಡಲು ನಿರ್ಧರಿಸಿದೆ. ಈ ಕುರಿತು ಬರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಿ, ಹೋರಾಟದ ರೂಪುರೇμÉಗಳನ್ನು ನಿರ್ಧರಿಸಲಾಗುತ್ತಿದೆ ಎಂದು ಅವರು ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ರಾಜ್ಯ ನೌಕರರ ಸಂಘವು ಸಲ್ಲಿಸಿದ್ದ ಬಹುತೇಕ ಬೇಡಿಕೆಗಳನ್ನು ಯಾವುದೇ ಹೊರಾಟಗಳಿಗೆ ಆಸ್ಪದವಿಲ್ಲದಂತೆ ರಾಜ್ಯ ಸರಕಾರವು ಸಕಾರಾತ್ಮಕವಾಗಿ ಸ್ಪಂದಿಸಿ, ಈಡೆರಿಸಿದೆ.ಕೋವಿಡ್‍ದಂತ ವಿಷಮ ಪರಿಸ್ಥಿತಿಯಲ್ಲಿಯೂ ಯಾವುದೇ ರೀತಿಯಲ್ಲಿ ವೇತನ ಕಡಿತಗೊಳಿಸದೆ ನೌಕರರ ವಿಶ್ವಾಸ ಗಳಿಸಿದೆ. ಆರೋಗ್ಯ ಯೋಜನೆ, ಹೆಣ್ಣುಮಕ್ಕಳಿಗೆ 6 ತಿಂಗಳ ವೇತನ ಸಹಿತ ರಜೆ, ಬಾಕಿ ಉಳಿದಿದ್ದ ಅರಿಯರ್ಸ್ ಹಣ ಬಿಡುಗಡೆ, ಗಳಿಕೆ ರಜೆ ನಗದೀಕರಣಕ್ಕೆ ಅವಕಾಶ, ಕೋವಿಡ್ ನಿಂದ ಉಂಟಾದ ನೌಕರನ ಸಾವಿಗೆ ಪರಿಹಾರಧನ ಹೀಗೆ ಹತ್ತು ಹಲವು ಯೋಜನೆಗಳನ್ನು ರಾಜ್ಯ ಸರಕಾರಿ ನೌಕರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರಕಾರದಿಂದ ಸಂಘವು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರಕಾರ ಜಾರಿಗೊಳಿಸಿರುವ ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯು ತಾರತಮ್ಯದಿಂದ ಕೂಡಿದ್ದು, ಇದರಿಂದಾಗಿ 2006 ರಿಂದ ನೇಮಕವಾದ ಎಲ್ಲ ನೌಕರಿಗೆ ಅನ್ಯಾಯವಾಗುತ್ತದೆ. ಎನ್.ಪಿ.ಎಸ್. ರದ್ದುಗೊಳಿಸುವುದು ನಮ್ಮ ನೌಕರರ ಬಹುದಿನಗಳ ಬೇಡಿಕೆಯಾಗಿದ್ದು, ಸಂಘವು ಈ ಕುರಿತು ಉಗ್ರ ಹೋರಾಟ ಮಾಡಲು ಸಿದ್ದತೆ ನಡೆಸಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.

ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಕಾರ್ಯದಲ್ಲಿ ತೊಡಗಿದ್ದ ನಮ್ಮ ಅನೇಕ ಸರಕಾರಿ ನೌಕರರರು ತಮ್ಮ ಪ್ರಾಣ ಕಳೆದುಕೊಂಡುದ್ದಾರೆ. ಅನೇಕ ಅಧಿಕಾರಿ, ಸಿಬ್ಬಂದಿಗಳು ರಾತ್ರಿ,ಹಗಲು ಎನ್ನದೆ ಕೋವಿಡ್ ನಿಯಂತ್ರಣಕ್ಕಾಗಿ ಕರ್ತವ್ಯ ನಿರ್ವಹಿಸಿದ್ದರಿಂದ ಅದು ನಿಯಂತ್ರಣವಾಗಿದೆ. ಸರಕಾರದ ಆದೇಶ, ಯೋಜನೆಗಳನ್ಬು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸರಕಾರದ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಭಾವನೆ, ಗೌರವ ಮೂಡಿಸುತ್ತಾರೆ. ಆದ್ದರಿಂದ ಸರಕಾರಗಳು ನೌಕರರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ವಿಶ್ವಾಸ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಮುಖ್ಯ ಅತಿಥಿಗಳಾಗಿದ್ದ ಶಾಸಕ ಅಮೃತ ದೇಸಾಯಿ ಅವರು ಮಾತನಾಡಿ, ಕಾರ್ಯಾಂಗ ಮತ್ತು ಶಾಸಕಾಂಗ ಎರಡು ಎತ್ತುಗಳಿದ್ದಂತೆ. ಅವುಗಳು ಜೊತೆಯಾಗಿ, ಹಿತವಾಗಿ ಕೂಡಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ತಮ್ಮ ಶಾಸಕತ್ವ ಅವಧಿಯಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮಿಸಿ, ಸರಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ಅವರ ಕಾರ್ಯದಿಂದ ಸರಕಾರ ಮತ್ತು ತಮ್ಮ ಬಗ್ಗೆ ಜನರಲ್ಲಿ ವಿಶ್ವಾಸ, ಗೌರವ ಇನ್ನಷ್ಟು ಹೆಚ್ಚಿದೆ. ನಾನು ಜನತೆಯ ಪರವಾಗಿ ಎಲ್ಲ ಸರಕಾರಿ ನೌಕರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಪ್ರೇರಣಾ ನುಡಿಗಳನ್ನಾಡಿದ ಉಪವಿಭಾಗಾಧಿಕಾರಿ ಡಾ.ಗೋಪಶಲ ಕೃಷ್ಣ ಬಿ., ಸಾಧನೆಗೆ ಛಲ ಬೇಕು. ವಿದ್ಯಾರ್ಥಿಗಳು ಸ್ವಯಂ ನಿಯಂತ್ರಣ, ಓದಿನ ಬಗ್ಗೆ ಆಸಕ್ತಿ, ವಿಷಯಗಳನ್ನು ತಿಳಿಯುವ ಕುತೂಹಲ ಮತ್ತು ಆಳವಾದ ಅಧ್ಯಯನ ಅಳವಡಿಸಿಕೊಳ್ಳಬೇಕು. ಆಶಾಭಾವನೆಯಿಂದ ಕಷ್ಟಪಟ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ ಎಲ್ಲವೂ ಸಾಧ್ಯ. ಪ್ರಾಮಾಣಿಕವಾಗಿ ಓದಿ ಪ್ರಯತ್ನ ಪಡುವವರಿಗೆ ಐಎಎಸ್, ಐಪಿಎಸ್, ಕೆಎಎಸ್ ಯಾವುದು ಕಷ್ಟವಲ್ಲ. ತಮಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಬೆಳೆಯಬೇಕು ಎಂದು ಅವರು ಹೇಳಿದರು.

ಎಐಪಿಟಿಎಪ್ ಉಪಾಧ್ಯಕ್ಷ ಬಸವರಾಜ ಗುರಿಕಾರ ಅವರು ಮಾತನಾಡಿ, ಸಂಘದ ಬೆಳವಣಿಗೆ, ಕಾರ್ಯಚಟುವಟಿಕೆ ಮತ್ತು ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಘಟಕದ ಖಜಾಂಚಿ ಶ್ರೀನಿವಾಸ ಆರ್, ರುದ್ರಪ್ಪ, ಮತ್ತು ಜಿಲ್ಲಾ ಖಜಾಂಚಿ ರಾಜಶೇಖರ ಬಾಣದ, ನೌಕರ ಭವನದ ಕಾರ್ಯದರ್ಶಿ ಗಿರೀಶ ಚೌಡಕಿ, ವಿವಿಧ ತಾಲೂಕಾ ಅಧ್ಯಕ್ಷರಾದ ಪ್ರಹ್ಲಾದ ಗೆಜ್ಜಿ, ವಿ.ಎಪ್.ಚುಳಕಿ, ಎ.ಬಿ.ಕೊಪ್ಪದ, ಎಸ್.ಎನ್.ಅರಳಿಕಟ್ಟಿ, ಆರ್.ಎಮ್.ಹೊಲ್ತಿಕೋಟಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.

ಸಂಘದ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ಅವರು ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಸಂಘದ ಉಪಾಧ್ಯಕ್ಷ ಎಪ್.ವಿ.ಮಂಜಣ್ಣವರ ಅವರು ಪಿಯುಸಿ ಪರೀಕೆಯ ಸಾಧಕ ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಅವರ ಸಾಧನೆಯನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಿದರು.

ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ ಸ್ವಾಗತಿಸಿದರು. ಗೌರವಉಪಾಧ್ಯಕ್ಷ ಆರ್.ಬಿ.ಲಿಂಗದಾಳ ಹಾಗೂ ಶಾಂತಾ ಶೀಲವಂತರ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ ವಂದಿಸಿದರು.ಕಾರ್ಯಕ್ರಮದಲ್ಲಿ ರಾಜ್ಯ,ಜಿಲ್ಲಾ ಮತ್ಯು ತಾಲೂಕಾ ಘಟಕಗಳ ಪದಾಧಿಕಾರಿಗಳು, ಸರಕಾರಿ ನೌಕರರು, ಸಾಧಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.

ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.

ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending