Connect with us

ದಿನದ ಸುದ್ದಿ

ದಾವಣಗೆರೆ | ವೈದ್ಯಕೀಯ ತ್ಯಾಜ್ಯ ವಸ್ತುಗಳ ವಿಲೇವಾರಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ನರ್ಸಿಂಗ್ ಹೋಂಗಳು, ಆಸ್ಪತ್ರೆಗಳು ಮತ್ತು ಕ್ಲಿನಿಕ್‍ಳಿಂದ ಉತ್ಪಾದನೆಯಾಗುವ ಜೀವ ವೈದ್ಯಕೀಯ ತ್ಯಾಜ್ಯವನ್ನು ಮೆ||ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್, ಅಮರಾವತಿ ಇವರ ಮುಖಾಂತರ ವಿಲೇವಾರಿ ಮಾಡಲಾಗಿರುತ್ತದೆ.

ಇತ್ತೀಚೆಗೆ ಪತ್ರಿಕೆಯಲ್ಲಿ ಬಂದ ವರದಿಯಂತೆ, ಹರಿಹರ-ದಾವಣಗೆರೆ ಮಾರ್ಗದ ರಸ್ತೆ ಬದಿಯಲ್ಲಿ ಮರದ ಕೆಳಗೆ ಆಸ್ಪತ್ರೆಗಳಲ್ಲಿ ಉಪಯೋಗಿಸಿದ ಜೀವ ವೈದ್ಯಕೀಯ ತ್ಯಾಜ್ಯವನ್ನು ಸ್ವಚ್ಛ ಭಾರತ ಮುದ್ರಿತ ಸಿಮೆಂಟ್ ಚೀಲದಲ್ಲಿ ಕಟ್ಟಿ ಎಸೆಯಲಾಗಿರುವ ಬಗ್ಗೆ ತಿಳಿದು ಜೂ.19 ರಂದು ಸ್ಥಳ ಪರಿವೀಕ್ಷಣೆ ನಡೆಸಿ ಜೀವ ವೈದ್ಯಕೀಯ ತ್ಯಾಜ್ಯವನ್ನು ಮೆ|| ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್, ಅಮರಾವತಿ ಇವರ ಮುಖಾಂತರ ವಿಲೇವಾರಿ ಮಾಡಲಾಗಿರುತ್ತದೆ.

ಕೋವಿಡ್-19 ವೈರಸ್ ಬಗ್ಗೆ ಜಾಗೃತಿಗೊಳ್ಳುವುದರ ಜೊತೆಗೆ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಹಕರಿಸಬೇಕಾಗಿರುತ್ತದೆ. ಇನ್ನು ಮುಂದೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್, ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಿಂದ ಉತ್ಪತ್ತಿಯಾಗುವ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳನ್ನು ವಿಲೇವಾರಿಗಾಗಿ ಸಾಮೂಹಿಕ ಜೀವ ವ್ಯದ್ಯಕೀಯ ತ್ಯಾಜ್ಯ ವಸ್ತುಗಳ ಸಂಸ್ಕರಣಾ ಘಟಕ (Common Bio-medical Waste Treatment facility) ಮೆ||ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್, ಅಮರಾವತಿ ಇವರಿಗೆ ನೀಡುವುದು ಕಡ್ಡಾಯವಾಗಿರುತ್ತದೆ.

ಜೀವ ವೈದ್ಯಕೀಯ ವಸ್ತುಗಳಾದ ಪ್ಲಾಸ್ಟಿಕ್, ಟ್ಯೂಬ್, ಕ್ಯಾಥಟರ್ಸ್, ಗುಕ್ಲೋಸ್ ಬಾಟಲ್‍ಗಳನ್ನು ಗುಜರಿ ಅಂಗಡಿಗಳಿಗೆ ನೀಡಬಾರದಾಗಿ ತಿಳಿಸಲಾಗಿಸದೆ. ತಪ್ಪಿದಲ್ಲಿ ಕ್ಲಿನಿಕ್/ಆಸ್ಪತ್ರೆ/ನರ್ಸಿಂಗ್ ಹೋಂ/ಗುಜರಿ ಅಂಗಡಿಗಳ ವಿರುದ್ಧ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿಯಮಗಳು, ಪರಿಸರ ಸಂರಕ್ಷಣಾ ಕಾಯ್ದೆ, 1986 ರಡಿಯಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು

ಸಾರ್ವಜನಿಕರು ಮನೆಗಳಲ್ಲಿ ಸ್ವಂತವಾಗಿ ಉಪಯೋಗಿಸುವ ಸಿರೆಂಜ್ ಮತ್ತು ಇತರೆ ಔಷಧಿಗಳನ್ನು ಸಂಬಂಧಿಸಿದ ಆಸ್ಪತ್ರೆಗಳಿಗೆ/ಮೆ.ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್, ಇವರಿಗೆ ವಿಲೇವಾರಿ ನೀಡಬೇಕಾಗಿ ಸೂಚಿಸಲಾಗಿದೆ.

ಔಷಧಿ ನಿಯಂತ್ರಕರು ಇವರು ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳ ನಿಯಮಗಳ ಪ್ರಕಾರ ಜಿಲ್ಲೆಯಲ್ಲಿ ಬರುವ ಎಲ್ಲಾ ಔಷಧಿ ಅಂಗಡಿಯವರು ಅವಧಿ ಮಿರಿದ ಔಷಧಿಗಳನ್ನು ಸಂಬಂಧಿದ ಕಂಪನಿಗಳಿಗೆ ಹಿಂದಿರಿಗಿಸಲು ಕ್ರಮಕೈಳ್ಳುವಂತೆ ತಿಳಿಸಲಾಗಿದೆ.

ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ಉತ್ಪತ್ತಿಯಾಗುವ ಎಲ್ಲಾ ರೀತಿಯ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳನ್ನು ವಿಂಗಡಿ ಮೆ||ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್, ಅಮರಾವತಿ ಇವರಿಗೆ ನೀಡುವಂತೆ ಈ ಮೂಲಕ ಸೂಚಿಸಲಾಗಿದೆ.

ತಪ್ಪಿದಲ್ಲಿ ಸಂಬಂಧಿಸಿದ ಕ್ಲಿನಿಕ್, ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳ ವಿರುದ್ಧ ಜೀವ ವೈದ್ಯಕೀಯ ತಾಜ್ಯ ವಸ್ತುಗಳ ನಿಯಮಗಳು, 2016 ಮತ್ತು ಪರಿಸರ ಸಂರಕ್ಷಣಾ ಕಾಯ್ದೆ 1986 ರಡಿಯಲ್ಲಿ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾವುದು.

ಇನ್ನೂ ಮುಂದೆ ದಾವಣಗೆರೆ ಜಿಲ್ಲೆದ್ಯಾದಂತ ರಸ್ತೆಗಳ ಬದಿಯಲ್ಲಿ ಖಾಲಿ ಜಾಗದಲ್ಲಿ ಜೀವ ವೈದ್ಯಕೀಯ ತ್ಯಾಜ್ಯ ವಸ್ತುಗಳನ್ನು ಎಸೆದಿರುವುದನ್ನು ಕಂಡು ಬಂದರೆ ಕೂಡಲೆ ಮೆ|| ಸುಶಾಂತ್ ಎನ್ವಿರಾಮೆಂಟಲ್ ಟೆಕ್ನಾಲಜೀಸ್, ಅಧಿಕಾರಿ ಸಂತೋಷ 994690358 ಇವರಿಗೆ ತಿಳಿಸುವಂತೆ ಪರಿಸರ ಅಧಿಕಾರಿ ಕೆ.ಬಿ ಕೊಟ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending