ಕ್ರೀಡೆ

ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ

Published

on

ಸುದ್ದಿದಿನ ಡೆಸ್ಕ್ : ಭಾರತದ ವೇಟ್ ಲಿಫ್ಟರ್ ಅಚಿಂತಾ ಶೆಯಿಲಿ ( Achinta Sheuli – Indian weightlifter) ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ (Birmingham 2022 Commonwealth Games) ಪುರುಷರ 73 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ (Gold Medal) ಗೆದ್ದಿದ್ದಾರೆ.

20 ವರ್ಷದ ಅಚಿಂತಾ ಸ್ನ್ಯಾಚ್ ವಿಭಾಗದಲ್ಲಿ143 ಕೆ.ಜಿ. ಹಾಗೂ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ170 ಕೆ.ಜಿ ಸೇರಿದಂತೆ ಒಟ್ಟಾರೆ 313 ಕೆ.ಜಿ ಭಾರ ಎತ್ತುವ ಮೂಲಕ ಸ್ವರ್ಣ ಪದಕ ಜಯಿಸಿದ್ದಾರೆ. ಭಾರತಕ್ಕೆ ಲಭಿಸಿರುವ ಆರು ಪದಕಗಳು ವೇಟ್ ಲಿಫ್ಟಿಂಗ್‌ನಿಂದಲೇ ಬಂದಿರುವುದು ವಿಶೇಷವಾಗಿದೆ.

ಇದನ್ನೂ ಓದಿ | ಹರಿಯಾಣದ ಚಾಂಡಿಮಂದಿರದಲ್ಲಿ ಇಂದಿನಿಂದ ಇದೇ 20ರವರೆಗೆ ಭಾರತ – ವಿಯೆಟ್ನಾಂ ಸೇನಾ ಸಮರಾಭ್ಯಾಸ

ಮೀರಾಬಾಯಿ ಚಾನು ಮತ್ತು ಜೆರೆಮಿ ಲಾಲ್ರಿನ್ನುಂಗಾ ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದರೆ, ಬಿಂದ್ಯಾರಾಣಿ ಮತ್ತು ಸಂಕೇತ್ ಸರ್ಗರ್ ಬೆಳ್ಳಿ ಪದಕ ಹಾಗೂ ಗುರುರಾಜ ಪೂಜಾರಿ ಕಂಚಿನ ಪದಕ ಜಯಿಸಿದ್ದಾರೆ. ಶೆಯಿಲಿ ಚಿನ್ನ ಗೆಲ್ಲುವುದರೊಂದಿಗೆ ಭಾರತ ಇದುವೆರೆಗೆ 3 ಚಿನ್ನ, 2ಬೆಳ್ಳಿ ಮತ್ತು 1 ಕಂಚು ಸೇರಿ ಆರು ಪದಕ ಗೆದ್ದಿದೆ.


ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಬ್ಯಾಡ್ಮಿಂಟನ್ ತಂಡವು ಮಿಶ್ರ ತಂಡ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version