ಲೈಫ್ ಸ್ಟೈಲ್
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳು; ಒಂದು ಅರಿವು
ಜೀವಿಗಳ ಬೆಳವಣಿಗೆಯಿಂದಲೇ ಅವು ಜೀವಿಗಳು ಎಂದೆನಿಸಿಕೊಳ್ಳುತ್ತವೆ. ಅಂತೆಯೇ ಮನುಷ್ಯನ ದೇಹವೂ ಕೂಡ. ಆದರೆ ಪರಿಸರದ ಯಾವುದೇ ಒತ್ತಡಕ್ಕೂ ಮಣಿಯದೇ ಅಥವಾ ದೇಹ ತನ್ನ ಯಾವ ರೀತಿಯ ದಿನಚರಿಯಿಂದಲೂ ತನಗೆ ಯಾವುದೇ ಹಾನಿಯಾಗದೇ ಯಾವ ಜೀವಕಣಗಳೂ ಇರುವುದಿಲ್ಲ. ಪರಿಸರಕ್ಕೆ ತಕ್ಕಂತೆ, ದೇಹವು ತನ್ನ ಜೀವಕಣಗಳನ್ನು ಪೋಷಿಸುವುದಕ್ಕೆ ತಕ್ಕಂತೆ ಜೀವಕಣಗಳೂ ಪ್ರತಿದಿನ ಬದಲಾವಣೆಗಳನ್ನು ತೋರಿಸುತ್ತದೆ.
ಅಂದರೆ, ಒಬ್ಬ ವ್ಯಕ್ತಿಯು ರೋಗಪೀಡಿತನಾಗಿದ್ದರೆ ಒಂದು ಸಣ್ಣ ಸೊಳ್ಳೆಯಿಂದಲೂ ಅದು ಇನ್ನೊಬ್ಬರಿಗೆ ಹರಡಬಲ್ಲದು. ಒಬ್ಬ ವ್ಯಕ್ತಿಗೆ ಅತಿಯಾಗಿ ಕೊಲೆಸ್ಟ್ರಾಲ್ ಪದಾರ್ಥವನ್ನು ತಿನ್ನುವ ರೂಢಿಯಿದ್ದರೆ ಕ್ರಮೇಣ ಅಧಿಕ ರಕ್ತದೊತ್ತಡ ಉಂಟಾಗಿ ಮುಂದೊಂದು ದಿನ ಸ್ಟ್ರೋಕ್ ಕೂಡ ಆಗಬಹುದು.
ಯಾರಾದರೂ ಯಾವುದಾದರೂ ಒಂದು ರೋಗಕ್ಕೆ ತುತ್ತಾಗಿದ್ದರೆ ಅವರ ಸನಿಹದಲ್ಲಿರುವವರಿಗೆ ಯಾವುದೋ ಒಂದು ಕ್ಷಣವಾದರೂ ಹಾದುಹೋಗುವ ಪ್ರಶ್ನೆ ಅವರ ಬಳಿಯಲ್ಲಿ ಹೋದರೆ ತಮಗೂ ಆ ರೋಗ ಹರಡಿದರೆ ಅಪಾಯ ಅಂತ. ರೋಗಗಳು ಹೀಗೆ ಒಬ್ಬರಿಂದೊಬ್ಬರಿಗೆ ಹರಡುವ ನಿಟ್ಟಿನಲ್ಲಿ ಯೋಚಿಸಿದರೆ ಎರಡು ಭಾಗಗಳಾಗಿ ವಿಂಗಡಿಸಬಹುದು.
ಅತ್ತ ಒಬ್ಬ ರೋಗಪೀಡಿತ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಹರಡುವ ರೋಗಗಳು ಸಾಂಕ್ರಾಮಿಕ ರೋಗ ( Communicable diseases) ಗಳೆನಿಸಿಕೊಂಡರೆ ಇತ್ತ ಒಬ್ಬರಿಂದೊಬ್ಬರಿಗೆ ಹರಡದೇ ವ್ಯಕ್ತಿಯ ದೈನಂದಿನ ಜೀವನಶೈಲಿಯನ್ನು ಅನುಸರಿಸಿಕೊಂಡು ಅಥವಾ ಅನುವಂಶಿಕವಾಗಿ ಯಾವುದೇ ಮುನ್ಸೂಚನೆಯಿಲ್ಲದೆ ಬಂದು ಸುದೀರ್ಘ ಕಾಲದ ಬಳಿಕ ದೇಹದ ಮೇಲೆ ತನ್ನ ಪರಿಣಾಮಗಳನ್ನು ಬೀರುವ ರೋಗಗಳು ಅಸಾಂಕ್ರಾಮಿಕ ರೋಗ ( Non communicable diseases) ಗಳೆನಿಸಿಕೊಳ್ಳುತ್ತವೆ.
ಸಾಂಕ್ರಾಮಿಕ ರೋಗಗಳೆಂದರೆ ಮಲೇರಿಯಾ, ಡೆಂಗ್ಯೂ, ಚಿಕೂನ್ಗುನ್ಯಾ, ಕ್ಷಯರೋಗ, ಕಾಲರಾ, ಹೆಪಟಿಟಿಸ್, ಹೆಚ್ಐವಿ ಮುಂತಾದ ರೋಗಗಳನ್ನು ನೋಡುತ್ತೇವೆ. ಸಾಂಕ್ರಾಮಿಕ ರೋಗಗಳು ನಮ್ಮ ದೇಹ ಪ್ರವೇಶವಾದ ನಂತರ ತಮ್ಮ ಆ ರೋಗಕ್ಕೆ ತಕ್ಕಂತೆ ಗುಣಲಕ್ಷಣಗಳನ್ನು ತೋರಿಸುತ್ತವೆ. ಆದ್ದರಿಂದ ತಕ್ಷಣವೇ ವೈದ್ಯರಿಂದ ಸಮಾಲೋಚನೆ ಪಡೆದರೆ ಅವುಗಳ ವಿರುದ್ಧ ಗೆಲ್ಲಬಹುದು.
ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳು
- ಶುದ್ಧ ನೀರು, ಶುದ್ಧ ಆಹಾರ ಪದ್ಧತಿಗಳನ್ನು ರೂಢಿಸಿಕೊಳ್ಳಬೇಕು.
- ಸುತ್ತಮುತ್ತಲಿನ ಪರಿಸರವನ್ನು ಶುಚಿಯಿಂದ ಕಾಪಾಡಿಕೊಳ್ಳಬೇಕು.
- ನಂಜಾಗುವ ಅಥವಾ ಸಾಂಕ್ರಾಮಿಕ ರೋಗವುಳ್ಳ ಯಾವುದೇ ವ್ಯಕ್ತಿಯ ಜೊತೆ ಸಂಪರ್ಕವುಂಟಾದರೆ ಅದಕ್ಕೆ ಆ ದಿನವೇ ವೈದ್ಯರ ಸಮಾಲೋಚನೆ ಪಡೆದು ಸೂಕ್ತ ಚಿಕಿತ್ಸೆ ಶುರು ಮಾಡಬೇಕು. ಇದಕ್ಕೆ Post Exposure Prophylaxis ಎಂದು ಕರೆಯಾಗುತ್ತದೆ..
- ಆರೋಗ್ಯದಲ್ಲಿ ಏನಾದರೂ ವ್ಯತ್ಯಾಸವಾದ ಗುಣಲಕ್ಷಣಗಳು ಕಂಡುಬಂದಲ್ಲಿ, ತಕ್ಷಣವೇ ಇನ್ನೊಬ್ಬರಿಗೆ ಹರಡದಂತೆ ನಾವು ಪ್ರತ್ಯೇಕವಾಗುವುದು ( Isolation ) ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ, ನಂತರವಷ್ಟೇ ವೈದ್ಯರ ಸಮಾಲೋಚನೆ ಪಡೆಯಬೇಕು.
ಆದರೆ ಮೌನದಲ್ಲಿಯೇ ಬಂದು ಮೌನದಲ್ಲಿಯೇ ಇದ್ದು ಕೊನೆಗೊಂದು ದಿನ ರೌದ್ರಾವತಾರ ತಾಳುವ ಅಸಾಂಕ್ರಾಮಿಕ ರೋಗಗಳಲ್ಲಿ ಎರಡು ತರಹದ ರೋಗಗಳನ್ನು ಕಾಣಬಹುದು.
ಜೀವನಶೈಲಿಗೆ ಸಂಬಂಧಿಸಿದ ರೋಗಗಳು
- ಹೃದಯ – ರಕ್ತನಾಳಗಳ ಖಾಯಿಲೆ.
- ಮಧುಮೇಹ.
- ಅಧಿಕ ರಕ್ತದೊತ್ತಡ.
- ಅಪೌಷ್ಟಿಕತೆ.
- ಬೊಜ್ಜು.
- ಕಾನ್ಸರ್
- ಸ್ಟ್ರೋಕ್
- ಲಿವರ್ ಸಿರೊಸಿಸ್
ಅನುವಂಶಿಕ ಖಾಯಿಲೆಗಳು (Inherited/Genetic diseases)
- ಹೀಮೋಫೀಲಿಯಾ
- ತಲಸೀಮಿಯಾ
- ವರ್ಣ ಕುರುಡುತನ
- ಅಲ್ಜೀóಮರ್ ಖಾಯಿಲೆ
- ಪಾರ್ಕಿನ್ಸನ್ ಖಾಯಿಲೆ
- ಸಿಸ್ಟಿಕ್ ಫೈಬ್ರೊಸಿಸ್, ಮುಂತಾದವು
ಅನುವಂಶಿಕ ಖಾಯಿಲೆಗಳು ವ್ಯಕ್ತಿಗೆ ಬರದಂತೆ ತಡೆಹಿಡಿಯುವುದು ನಮ್ಮ ಹತೋಟಿಯಲ್ಲಿಲ್ಲದ ಕಾರಣ ಅವುಗಳ ಗುಣಲಕ್ಷಣಗಳು ವ್ಯಕ್ತಿಯಲ್ಲಿ ಕಾಣ ಸಿಕೊಂಡ ನಂತರವಷ್ಟೇ ಚಿಕಿತ್ಸೆ ನೀಡಬಹುದಾಗಿರುತ್ತದೆ. ಆದರೂ ಅವುಗಳ ವಿರುದ್ಧ ಕೆಲವೊಮ್ಮೆ ಸಮರ್ಥವಾಗಿ ಚಿಕಿತ್ಸೆ ನೀಡಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಆದರೆ ಜೀವನಶೈಲಿಗೆ ಸಂಬಂಧಿಸಿದ ಖಾಯಿಲೆಗಳನ್ನು ನಾವುಗಳು ಸ್ವಲ್ಪ ಹೆಚ್ಚಿನ ಕಾಳಜಿವಹಿಸಿದರೆ ಅವುಗಳು ಸುಳಿಯದಂತೆ ತಡೆಯಬಹುದು. ಆದರೆ ಅಸಾಂಕ್ರಾಮಿಕ ರೋಗಗಳು ಹಾಗಲ್ಲ, ನಮ್ಮ ಜೀವನ ಶೈಲಿಯಲ್ಲಿ ಸ್ವಲ್ಪ ಬದಲಾವಣೆ ತಂದುಕೊಂಡರೂ ಮುಂಬರುವ ಖಾಯಿಲೆಗಳಿಗೆ ರಾಮಬಾಣ ಮೊದಲೇ ಸಿದ್ಧವಾದಂತಾಗುತ್ತದೆ.
ಅಸಾಂಕ್ರಾಮಿಕ ರೋಗಗಳು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳು
- ಜೀವನ ಶೈಲಿಯಲ್ಲಿ ಬದಲಾವಣೆ
- ಊಟದಲ್ಲಿ ಉಪ್ಪು, ಸಿಹಿ ಅಂಶಗಳಲ್ಲಿ ಹಿಡಿತವಿರಲಿ
- ಪ್ರತಿನಿತ್ಯ 2.5ಲೀ ರಿಂದ 3ಲೀ ನೀರು ಕುಡಿಯಬೇಕು
- ಊಟದಲ್ಲಿ ಕೊಲೆಸ್ಟ್ರಾಲ್ ಅಂಶದಲ್ಲಿ ಮಿತವಿರಲಿ
- ಪ್ರತಿನಿತ್ಯ ವ್ಯಾಯಾಮ ಅಥವಾ ಯೋಗ ಮಾಡುವ ರೂಢಿಯಿರಲಿ
- ಪ್ರತಿನಿತ್ಯ ಕನಿಷ್ಟ 30 ನಿಮಿಷಗಳ ಕಾಲ್ನಡಿಗೆ
- ಸಮಯಕ್ಕೆ ಸರಿಯಾಗಿ ಸಮತೋಲನ ಆಹಾರ
- ಮುಖ್ಯವಾಗಿ ಧೂಮಪಾನ ಮತ್ತು ಮದ್ಯಪಾನಗಳಿಗೆ ವಿದಾಯ ಹೇಳುವುದು
- ಮಾನಸಿಕ ಒತ್ತಡರಹಿತ ಜೀವನ

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.




