Connect with us

ದಿನದ ಸುದ್ದಿ

ನುಡಿಯ ಒಡಲು – 16 | ವಿಚಾರ ಸಂವಹನ : ತೊಡಕುಗಳೆಂತಹವು..?

Published

on

  • ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ವಿಚಾರ ಎಂಬ ಪರಿಕಲ್ಪನೆಯ ಅರ್ಥ ವ್ಯಾಪ್ತಿ ದೊಡ್ಡದು. ಇದರ ತಾತ್ವಿಕ ಚೌಕಟ್ಟನ್ನು ಕುರಿತು ವಿಶ್ಲೇಷಣೆ ಮಾಡುವ ಬದಲಾಗಿ, ಈ ಪರಿಕಲ್ಪನೆಯ ತಾತ್ವಿಕ ಪರಿಣಾಮಗಳ ಬಗೆಗೆ ಮಾತ್ರ ಇಲ್ಲಿ ಚರ್ಚಿಸುತ್ತೇನೆ. ಏಕೆಂದರೆ ಬಹುತೇಕ ಸನ್ನಿವೇಶದಲ್ಲಿ ಓದುಗರನ್ನು ಗಮನದಲ್ಲಿಟ್ಟುಕೊಂಡು ಬರೆಯಬೇಕು ಎನ್ನುವ ಅಭಿಪ್ರಾಯಗಳನ್ನು ಕೇಳುತ್ತೇವೆ ಹಾಗೂ ಹೇಳುತ್ತಿರುತ್ತೇವೆ.

ಅಂದರೆ ಬರೆಯುವವರು ಮತ್ತು ಓದುವವರು ಬೇರೆ ಬೇರೆ ವರ್ಗಕ್ಕೆ ಸೇರಿದ್ದೇವೆ ಎಂಬ ಸಾಮಾನ್ಯ ತಿಳಿವಳಿಕೆ ಇಲ್ಲಿದೆ. ಇಂತಹದೊಂದು ನಿಲುವು ಯಾಕೇ ತಲೆಯೆತ್ತಿದೆ ಎಂದು ಕೇಳಿದರೆ, ಈ ಪ್ರಶ್ನೆಗೆ ಉತ್ತರಿಸುವುದು ದುಸ್ತರ. ಸಂವಹನ ನಡೆಸುವ ಪ್ರತೀ ಸಂದರ್ಭದಲ್ಲಿಯೂ ನಾವಾಡುವ ಮಾತುಕತೆ, ಭಾಷಣ, ಪ್ರವಚನ, ಸಂಭಾಷಣೆ ಹಾಗೂ ಬರೆಯುವ ಸಂಕಥನಗಳನ್ನು ಎರಡು ರೀತಿಯಲ್ಲಿ ವಿಂಗಡಿಸುತ್ತೇವೆ.

ಅಂದರೆ ಅರ್ಥ ಮಾಡಿಕೊಳ್ಳುವ ಬಗೆಗಳನ್ನು ಸಾಮಾನ್ಯವಾಗಿ ಸಂವಹನಶೀಲವಾಗಿದೆ ಎಂದು ಇಲ್ಲವೇ ಸಂವಹನ ಸಹಜವಾಗಿಲ್ಲವೆಂದು ಹೇಳುತ್ತಿರುತ್ತೇವೆ. ಸಂವಹನ ಪ್ರಕ್ರಿಯೆಯಲ್ಲಿ ಎದುರಾಗುವ ಬಿಕ್ಕಟ್ಟುಗಳಿಗೆ ಏನು ಕಾರಣಗಳಿರಬಹುದು ಎಂದು ಕೇಳಿದರೆ, ಆಯಾ ವ್ಯಕ್ತಿ ಬಳಸುವ ಭಾಷೆಯ ಸ್ವರೂಪ, ನಿರೂಪಣೆ ಮತ್ತು ವಾಕ್ಯಸರಣಿಗಳಲ್ಲಿಯೇ ತೊಡಕುಗಳಿವೆ ಎಂದು ಹೇಳುತ್ತೇವೆ. ಇಡಿಯಾಗಿ ಇದನ್ನು ಸಂಕೀರ್ಣ ಸ್ಥಿತಿಯೆಂದು ಗುರುತಿಸುತ್ತೇವೆ.

ಈ ಸಂಕೀರ್ಣತೆ ಭಾಷೆಗೆ ಸಂಬಂಧಿಸಿದ ಸಂಗತಿಯೋ? ಇಲ್ಲವೇ ವಿಚಾರಕ್ಕೆ ಸಂಬಂಧಿಸಿದ್ದೋ? ಎನ್ನುವುದರ ಬಗೆಗೆ ನಮಗೆ ಯಾವುದೇ ಖಚಿತತೆ ಇರುವುದಿಲ್ಲ. ಒಟ್ಟಾರೆ ಈ ಸ್ಥಿತಿಯನ್ನು ಸಂವಹನಶೀಲವಲ್ಲದ್ದು ಎಂದು ಭಾವಿಸುತ್ತೇವೆ. ಇದುವೇ ಸರಿಯಾದ ನಿಲುವು ಎಂದೂ ನಂಬಲಾಗುತ್ತದೆ. ಈ ನಿಲುವನ್ನು ಪರಿಶೀಲಿಸುವ ಬದಲಾಗಿ ಸರಿಯಾದುದು ಎಂದು ಒಪ್ಪಿಕೊಳ್ಳಲಾಗುತ್ತದೆ.

ಹೇಳುವವರು, ಕೇಳುವವರು, ಬರೆಯುವವರು ಮತ್ತು ಓದುವವರು ಇವರೆಲ್ಲರಲ್ಲೂ ನುಡಿ ರಚನೆ ಮತ್ತು ಬಳಕೆಯ ನೆಲೆಗಳು ಸಮಾನವಾಗಿರುತ್ತವೆ. ನುಡಿಯ ಕಸುವನ್ನು ಪಡೆಯುವ ಬಗೆಯಲ್ಲಿ ಯಾವುದೇ ಏರುಪೇರುಗಳಿರುವುದಿಲ್ಲ. ಈ ನುಡಿ ಕಸುವು ಎನ್ನುವುದು ಎಲ್ಲರಲ್ಲೂ ಸಮಾನವಾಗಿಯೇ ನೆಲೆಗೊಂಡಿರುತ್ತದೆ. ಆದರೆ ಸಂವಹನದ ಮೂಲಕ ಮಾಡುವ ವಿಶ್ಲೇಷಣೆ, ವ್ಯಾಖ್ಯಾನ ಇಲ್ಲವೇ ನಿರ್ವಚಿಸುವ ಕ್ರಮಗಳಲ್ಲಿ ವ್ಯತ್ಯಾಸಗಳು ಏರ್ಪಡುವುದು ಸಹಜ.

ಏಕೆಂದರೆ, ಪ್ರತೀ ನುಡಿಯೊಳಗೆ ವಿಚಾರ ಸಂವಹನ ಮತ್ತು ಸಾಮಾನ್ಯ ಸಂವಹನವನ್ನು ಏರ್ಪಡಿಸುವ ಬಗೆಗಳನ್ನು ಸಜ್ಜುಗೊಳಿಸುವ ಜರೂರಿರುತ್ತದೆ. ಈ ವಿನ್ಯಾಸ ಸಾರ್ವತ್ರಿಕವಾಗಿ ಎಲ್ಲ ನುಡಿಗಳಲ್ಲಿಯೂ ಒಂದೇ ಬಗೆಯಲ್ಲಿ ಇರುವುದಿಲ್ಲ. ಹಾಗಾಗಿ ತಮ್ಮ ಬದುಕಿಗೆ ಸಂಬಂಧಿಸಿದ ‘ಅರಿವು’ ಮತ್ತು ‘ಅಭಿವ್ಯಕ್ತಿಶೀಲ’ ಚಟುವಟಿಕೆಗಳಲ್ಲಿ ಜನರು ಭಾಷೆ ಮತ್ತು ಭಾಷಿಕ ವಿದ್ಯಮಾನಗಳಿಗೆ ಸಂಬಂಧಿಸಿದ ಬಿಕ್ಕಟ್ಟುಗಳನ್ನು ನಿರಂತರವಾಗಿ ಎದುರಿಸುತ್ತಾರೆ.

ನಾವು ದಿನನಿತ್ಯ ಬದುಕಿನಲ್ಲಿ ಕೆಲವು ನಿರ್ದಿಷ್ಟ ರೂಢಿಗಳಲ್ಲಿಯೇ ಮುಳುಗಿರುತ್ತೇವೆ ಹಾಗೂ ಅಷ್ಟರಲ್ಲಿಯೇ ಪ್ರಪಂಚವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇವೆ. ಇದೆಲ್ಲವೂ ಭಾಷೆಯ ಮೂಲಕ ನಡೆಯುತ್ತದೆ ದಿಟ. ಆದರೆ ಭಾಷೆಯು ಹಲವು ಬಗೆಯ ಸಂಜ್ಞೆ, ಸಂಕೇತಗಳನ್ನು ಬಳಸಿಕೊಳ್ಳುತ್ತದೆ. ಈ ಲೋಕದ ಎಲ್ಲ ವಿದ್ಯಮಾನಗಳನ್ನು ಅರಿಯಲು ಮತ್ತು ಅರ್ಥೈಸಲು ಈ ಸಂಜ್ಞಾ ವ್ಯಾಪಾರಗಳ ಮೂಲಕ ಪ್ರಯತ್ನಿಸುತ್ತೇವೆ.

ಇದೆಲ್ಲವೂ ಕೇವಲ ಭಾಷೆಯ ಮೇಲೆ ಮಾತ್ರ ಕೇಂದ್ರಿಕೃತವಾಗಿರುವುದಿಲ್ಲ. ಬದಲಾಗಿ ಭಾಷೆ ಅಮೂರ್ತ ವಿದ್ಯಮಾನವಾಗಿ ಹೊರಹೊಮ್ಮುತ್ತದೆ. ಸಾಮಾನ್ಯವಾಗಿ ಭಾಷೆಯು ಏಕಕಾಲಕ್ಕೆ ಪಾರದರ್ಶಕವೂ ಮತ್ತು ಅಗೋಚರವೂ ಆಗಿರುತ್ತದೆ. ಈ ಇಕ್ಕಟ್ಟಿನಲ್ಲಿಯೇ ನಾವು ಲೋಕದ ಎಲ್ಲ ವ್ಯವಹಾರಗಳನ್ನು ಗ್ರಹಿಸುತ್ತೇವೆ, ಅರ್ಥೈಸುತ್ತೇವೆ ಮತ್ತು ಅವುಗಳ ಬಗೆಗೆ ಮಾತ್ನಾಡುತ್ತೇವೆ. ಮಾತು, ಮಾತಿಗೆ ಸಂಬಂಧಿಸಿದ ವಿಷಯ ಮತ್ತು ವ್ಯಕ್ತಿಗಳ ನಡುವಣ ಸಂಬಂಧಗಳ ಮೂಲಕವೇ ನಮ್ಮ ಬಹುತೇಕ ಸಂವಹನ ಚಟುವಟಿಕೆಗಳು ಏರ್ಪಡುತ್ತವೆ.

ಹಾಗಾದರೆ, ಭಾಷೆಯನ್ನು ಪಾರದರ್ಶಕ ಮತ್ತು ಕ್ರಿಯಾಶೀಲ ವ್ಯಾಪಾರವನ್ನಾಗಿ ಗ್ರಹಿಸಲು ಹೇಗೆ ಸಾಧ್ಯ? ಏಕೆಂದರೆ ನುಡಿ ಕಸುವು ಪ್ರಕಟಗೊಳ್ಳುವ ಇಡೀ ಪ್ರಕ್ರಿಯೆಯಲ್ಲಿ ಕೇವಲ ಭಾಷಿಕ ವಿವರಗಳು ಮಾತ್ರ ಪಾಲ್ಗೊಳ್ಳುವುದಿಲ್ಲ. ಹೊರತಾಗಿ ಸಾಂಸ್ಕೃತಿಕ, ಮಾನಸಿಕ ಹಾಗೂ ಸಾಂಕೇತಿಕ ವಿದ್ಯಮಾನಗಳು ಸೇರಿರುತ್ತವೆ. ಯಾವುದೇ ಅಮೂರ್ತ ರೂಪ, ವಿದ್ಯಮಾನ, ವಸ್ತುಗಳನ್ನು ಗುರುತಿಸುವುದು ಮಾತ್ರ ಇದೇ ಭಾಷಿಕ ವ್ಯಾಪಾರಗಳಿಂದ. ಈ ಭಾಷಿಕ ವ್ಯವಹಾರಗಳನ್ನು ‘ಕ್ರಿಯೆ’ ಮತ್ತು ‘ರಚನೆ’ಗಳ ಸ್ವರೂಪದಲ್ಲಿ ಗುರುತಿಸಲಾಗುತ್ತೆ. ಆದ್ದರಿಂದ ಈ ಭಾಷಿಕ ವಿದ್ಯಮಾನಗಳನ್ನು ಅತ್ಯಂತ ಸಮಂಜಸವಾದ ನೆಲೆಗಳನ್ನಾಗಿ ಒಪಿಕೊಳ್ಳಲಾಗುತ್ತದೆ.

ನಾವು ಮಾತ್ನಾಡುವ, ಕೇಳುವ, ಯಾವುದೇ ಮಾತಿಗೆ ಪ್ರತಿಕ್ರಿಯಿಸುವ ಬಗೆಗಳು ‘ಸಂವಾದದಲ್ಲಿ ಮಾತಿಗೆ’ ತೊಡಗಿಕೊಳ್ಳುವ ಬಗೆಯಾಗಿದೆ. ಸಂವಾದ ಕೇವಲ ಭಾಷಿಕ ವ್ಯವಹಾರವಲ್ಲ. ಅದು ಸಾಮಾಜಿಕ, ಮಾನಸಿಕ ನಂಟುಗಳನ್ನು ಪಡೆದಿರುತ್ತದೆ. ಇಡೀ ಲೋಕಾನುಭವನ್ನು ಗ್ರಹಿಸುವ, ಅಭಿವ್ಯಕ್ತಿಸುವ ಸಾಮರ್ಥ್ಯವನ್ನು ನಾವು ಪ್ರತಿಭಾನ (ಇಂಟ್ಯೂಶನ್) ಹಾಗೂ ಬುದ್ಧಿವ್ಯಾಪಾರ (ರೀಸನ್)ಗಳಿಂದ ಪಡೆಯುತ್ತೇವೆ ಎಂಬ ವಾದವು ಪ್ರಬಲವಾಗಿದೆ. ಆದರೆ ಮನುಷ್ಯನ ಮಾನಸಿಕ ತಂತ್ರಗಾರಿಕೆಗೆ ಹೊರತಾದ ವಿಶೇಷ ಭಾಷಿಕ ಸಾಮರ್ಥ್ಯವು ಮನುಷ್ಯರಲ್ಲಿ ಅಂತಸ್ಥವಾಗಿದೆ. ಪರಿಣಾಮವಾಗಿ ಭಾಷೆಯ ಮೂಲ ವಿಷಯ ಹಾಗೂ ಅರ್ಥಗಳು, ಮಾನವನ ಆಲೋಚನಾಕ್ರಮಕ್ಕೆ ಆಳವಾದ ಅಂಶಗಳಾಗಿವೆ ಎನ್ನುವ ಚಿಂತನೆಗೆ ಬಲಬಂದಿದೆ.

ಫ್ರೆಂಚ್ ತತ್ವಜ್ಞಾನಿಯ ರೆನೆ ಡೆಕಾರ್ಟಸ್‍ನ ‘ಐ ಥಿಂಕ್ ದೇರ್ಫೋರ್ ಐ ಆ್ಯಮ್’ ಎನ್ನುವ ಪ್ರಸಿದ್ಧ ಮಾತಿದೆ. ಇದು ಮನುಷ್ಯನ ಅಸ್ತಿತ್ವದ ಮೂಲ ಚಹರೆಯಾಗಿದೆ. ಮನುಷ್ಯ ಯೋಚಿಸಬಲ್ಲ ಎಂಬೀ ನೆಲೆಯೇ ಆತನ/ಅವಳ ಪ್ರಾಥಮಿಕ ಗುರುತಾಗಿದೆ. ಬುದ್ಧಿವ್ಯಾಪಾರ (ರೀಸನ್) ಮತ್ತು ವಿಜ್ಞಾನ (ಸೈಯನ್ಸ್) ಎಂಬ ಪರಿಕಲ್ಪನೆಗಳು ಮನುಷ್ಯನ ಚಿಂತನೆಯ ತಳಹದಿಯಾಗಿದೆ. ಈ ಇಡೀ ಆಲೋಚನಾ ಕ್ರಮವು ‘ವೈಚಾರಿಕ ಅನುಮಾನ’ (ರಾಡಿಕಲ್ ಡೌಟ್)ಎನ್ನುವ ತಾತ್ವಿಕ ಪರಿಕಲ್ಪನೆಯ ಆಧಾರದ ಮೇಲೆ ನಿಂತಿದೆ.

ಯಾವುದೇ ತಿಳಿವು ಒಂದು ಆತ್ಯಂತಿಕ ಸತ್ಯವೆಂದು ನಿರ್ದರಿಸಲು ಆಗುವುದಿಲ್ಲ ಎಂಬುದನ್ನು ಈ ಮಾತು ಸೂಚಿಸುತ್ತದೆ. ಕೇವಲ ಮನಸ್ಸು ಇಲ್ಲವೇ ಪ್ರಜ್ಞೆಯ ಮೂಲಕ ಮಾತ್ರ ಗ್ರಹಿಕೆಗಳನ್ನು ನಂಬುವ, ಅನುಮಾನಿಸುವ ನೆಲೆಯಿರುತ್ತದೆ. ಈ ಇಡೀ ನೆಲೆಯನ್ನು ಡೆಕಾರ್ಟಸ್ ‘ಐ ಥಿಂಕ್ ದೇರ್ಫೋರ್ ಐ ಆ್ಯಮ್’ ಎಂದು ಸೂತ್ರೀಕರಿಸಿದ್ದಾನೆ. ಇದನ್ನೇ ಇತಾಲಿಯ ಭಾಷಾ ಚಿಂತಕ ಆಂಡ್ರಿಯಾ ಮೋರೊ ‘ಐ ಸ್ಪೀಕ್ ದೇರ್ಫೋರ್ ಐ ಆ್ಯಮ್’ ಎಂದೂ ಗುರುತಿಸಿದ್ದಾನೆ.

ಮನಸ್ಸು (ಮೈಂಡ್) ಮತ್ತು ದೇಹ (ಬಾಡಿ) ಎರಡು ಭಿನ್ನ ಮತ್ತು ವಿಶಿಷ್ಟ ಘಟಕಗಳು ಎಂಬ ಪ್ರಮೇಯವನ್ನೂ ಡೆಕಾರ್ಟಸ್ ಮಂಡಿಸಿದನು. ಏಕೆಂದರೆ ದೇಹ ಮನಸ್ಸಿನಂತೆ ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುವ ಘಟಕವಲ್ಲ. ಇಡೀ ಲೋಕವ್ಯವಹಾರವನ್ನು ಗ್ರಹಿಸುವುದು ಕೇವಲ ಮನಸ್ಸಿನಿಂದ ಮಾತ್ರ. ಮನಸ್ಸು ಇರುವುದರಿಂದಲೇ ದೇಹವನ್ನೂ ಗ್ರಹಿಸಲಾಗುತ್ತದೆ. ಇಲ್ಲಿ ದೇವರ ಅಸ್ತಿತ್ವವನ್ನು ನಿರಾಕರಿಸಿ ಮನಸ್ಸು ಮತ್ತು ಬುದ್ಧಿವ್ಯಾಪಾರಕ್ಕೆ ಮಾತ್ರ ಪ್ರಾಮುಖ್ಯತೆಯನ್ನು ನೀಡಲಾಯಿತು.

ಭಾಷೆಯಲ್ಲಿಯೂ ಬೇರೆ ಬೇರೆ ಪದಗಳನ್ನು ಸಂಯೋಜಿಸಿಕೊಂಡು ವಿಶಿಷ್ಟ ಅರ್ಥಗಳನ್ನು ರೂಪಿಸುವ ಸಾಮರ್ಥ್ಯವೂ ಇದೇ ಮನಸ್ಸಿನಲ್ಲಿ ಅಂತಸ್ಥವಾಗಿರುವ ನುಡಿ ಕಸುವಿನಿಂದ ಮಾತ್ರ. ಆದರೆ ಈ ಸಾಮರ್ಥ್ಯವನ್ನು ಸಾಂಸ್ಕೃತಿಕ ಪರಿಣತಿಯನ್ನಾಗಿ ರೂಪಿಸಿಕೊಳ್ಳುವ ಅವಶ್ಯಕತೆಯಿದೆ. ಈ ಪರಿಣತಿಯನ್ನು ಪಡೆಯದ ಮನುಷ್ಯನು ಕೂಡ ನುಡಿಯನ್ನು ಅರಿಯದ ಇಲ್ಲವೇ ನುಡಿಯದ ಮೂರ್ಖನೂ ಅಲ್ಲ ಮತ್ತು ಶತದಡ್ಡನೂ ಅಲ್ಲ. ಹಾಗಾಗಿ ನುಡಿಯ ಮೂಲಕ ಪ್ರಕಟಗೊಳ್ಳುವ ಎಲ್ಲ ವ್ಯಾಪಾರಗಳನ್ನು ಗ್ರಹಿಸುವ ಪ್ರಾಥಮಿಕ ಸಾಮರ್ಥ್ಯ ಪ್ರತೀ ಮನುಷ್ಯರಲ್ಲಿ ಅಂತಸ್ಥವಾಗಿದೆ.

ಅದರೆ ವೈಚಾರಿಕ ವಿನ್ಯಾಸಗಳನ್ನು ಗ್ರಹಿಸುವಲ್ಲಿ ತೊಡಕುಗಳು ಎದುರಾಗುತ್ತವೆ. ಏಕೆಂದರೆ ಎಲ್ಲ ಬಗೆಯ ಜ್ಞಾನ/ವಿಚಾರದ ಸಮರ್ಥನೆಗಳು ವೈಜ್ಞಾನಿಕ ಮತ್ತು ಸಾರ್ವತ್ರಿಕವಾಗಿರುವುದಿಲ್ಲ. ನುಡಿಯ ಜೊತೆಗೆ ಸಾಂಸ್ಕೃತಿಕ, ವೈಜ್ಞಾನಿಕ ಇತ್ಯಾದಿ ವಿಶೇಷ ಪರಿಣತಿಯನ್ನು ಮನುಷ್ಯರು ರೂಪಿಸಿಕೊಂಡಾಗ ಮಾತ್ರ ಗ್ರಹಿಕೆಗೆ ಯಾವುದೇ ತೊಡಕುಗಳಿರುವುದಿಲ್ಲ. ಅದರೆ ಹೇಳುವ ಇಲ್ಲವೇ ಬರೆಯುವ ಸನ್ನಿವೇಶದಲ್ಲಿ ಇಂತಹದೊಂದು ಬಿಕ್ಕಟ್ಟು ಏರ್ಪಡುವುದಿಲ್ಲ. ವ್ಯಕ್ತಿ ತಾನಾಡುವ ಮಾತುಗಳಿಗೆ ಖಚಿತ ಅರ್ಥಗಳನ್ನು ಕಲ್ಪಿಸಿಕೊಂಡು ಹೇಳುತ್ತಾನೆ/ಳೆ ಮತ್ತು ಬರೆಯುತ್ತಾಳೆ/ನೆ. ತಾನಾಡುವ ಮಾತು/ಬರಹಗಳ ಅರ್ಥ ನಿರ್ದಿಷ್ಟತೆಯನ್ನು ಗ್ರಹಿಸದೇ ಹೋದರೆ ಏನೆಲ್ಲ ಅಪಾಯಗಳು ಉಂಟಾಗಬಹುದು ಎಂಬ ನೆನಪಿನಲ್ಲಿಯೇ ಅಪಾಯಗಳಿವೆ ಅಲ್ಲವೇ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

Published

on

ಹುಟ್ಟುಹಬ್ಬದ ಸಂಭ್ರಮಕ್ಕೆ ಬ್ರೇಕ್: ಅಭಿಮಾನಿಗಳಿಗೆ ಕಿಚ್ಚ ಸುದೀಪ್‌ ಭಾವುಕ ಮನವಿ, ಸಮಾಜಮುಖಿ ಕಾರ್ಯಕ್ಕೆ ಕರೆ!

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.

ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್‌ ಅವರ ಮನವಿ ವಿಶೇಷ ಗಮನ ಸೆಳೆದಿದೆ.

ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ

ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್‌ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.

30 ವರ್ಷಗಳ ಸಿನಿ ಪಯಣದ ನೆನಪು

ಕನ್ನಡ ಚಿತ್ರರಂಗಕ್ಕೆ ಸುದೀಪ್‌ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್‌ ಡೈಲಾಗ್‌ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್‌ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.

https://x.com/KicchaSudeep/status/2092857077706506638

“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”

ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್‌ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.

“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

 

Continue Reading

ದಿನದ ಸುದ್ದಿ

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

Published

on

toxic-movie-geethu-mohandas-old-statement-viral-yash-fans-troll
‘ಟಾಕ್ಸಿಕ್’ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್: ಸ್ಕ್ರಿಪ್ಟ್‌ ಬಗ್ಗೆ ಹೇಳಿಕೆಗೆ ಯಶ್ ಅಭಿಮಾನಿಗಳ ಆಕ್ರೋಶ!

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.

ವೈರಲ್ ವಿಡಿಯೋದಲ್ಲಿ ಗೀತು ಮೋಹನ್‌ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್‌ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

http://Visit : www.suddidina.com

‘ಸ್ಕ್ರಿಪ್ಟ್‌ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ

ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್‌ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.

ಸಾಮಾನ್ಯವಾಗಿ ದೊಡ್ಡ ಬಜೆಟ್‌ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

https://x.com/alpasankhyata/status/2092620787698094334

‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?

‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್‌ವರ್ಲ್ಡ್‌ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.

ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ

ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.

ಸದ್ಯ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

 

 

Continue Reading

Trending