ದಿನದ ಸುದ್ದಿ
ದಾವಣಗೆರೆ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ
ಸುದ್ದಿದಿನ,ದಾವಣಗೆರೆ :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (PSI) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.
ಡಿ.16 ರಿಂದ 24 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ: 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243