ದಿನದ ಸುದ್ದಿ
ಪರಿಶಿಷ್ಟರಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ : ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿಧರ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿದೆ.
ಅರ್ಹ ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವೀಧರರು ಜ.07 ರ ಒಳಗಾಗಿ ತಮ್ಮ ಹೆಸರನ್ನು ಮಹಾನಗರಪಾಲಿಕೆಯ ನಲ್ಮ್ ಶಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದು ಹಾಗೂ ಪರೀಕ್ಷೆಯ ದಿನಾಂಕವನ್ನು ಇ-ಮೇಲ್ ಮುಖಾಂತರ ತಿಳಿಸಲಾಗುವುದೆಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243