Connect with us

ಸಿನಿ ಸುದ್ದಿ

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ದೂರು ದಾಖಲು

Published

on

ಸುದ್ದಿದಿನ ಡೆಸ್ಕ್ : ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ವೆಂಕಟರಾಜು ಅವರಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಹಿರಿಯ ಪತ್ರಕರ್ತ ಬಿ.ಜಿ.ವೈಕುಂಠರಾಜು ರವರನ್ನ ವೈಯುಕ್ತಿಕವಾಗಿ ತೇಜೋವಧೆ ಮಾಡಿದ ನಿಟ್ಟಿನಲ್ಲಿ ಖಾಸಗಿ ದೂರು ದಾಖಲಾಗಿದ್ದು, 1 ಕೋಟಿಗೆ ಮಾನನಷ್ಟ ಪರಿಹಾರವಾಗಿ 8ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ವೆಂಕಟರಾಜು.

ಬಿ.ಜಿ.ವೈಕುಂಠರಾಜುರವರು ಕರ್ನಾಟಕ ನಾಟಕ ಹಾಗೂ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿದ್ದವರು, ನಾಗತಿಹಳ್ಳಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಪರಮೇಶ್ವರ್ ನಿರ್ದೇಶಿಸಿದ್ದ ಬಿ ಎಲ್ ವೇಣು ರವರ ಸಾಕ್ಷ್ಯಚಿತ್ರ ದಲ್ಲಿ ವೈಯಕ್ತಿಕ ತೇಜೋವಧೆ ಮಾಡಿರೋ ಆರೋಪ ಹಿನ್ನೆಲೆ ದೂರು ದಾಖಲಾಗಿದೆ.

ಸರ್ಕಾರದ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರ ಪ್ರಕಟಗೊಂಡಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವೆಂಕಟರಾಜು ಅವರಿಂದ ಖಾಸಗಿ ದೂರು ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಿಚ್ಚ ಸುದೀಪ್ ತಾಯಿ ನಿಧನ

Published

on

ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಕೊನೆಯುಸಿರೆಳೆದರು.

ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ21 hours ago

ಸಮಾಜ ಕಲ್ಯಾಣ ಇಲಾಖೆ ಕಚೇರಿ ಸ್ಥಳಾಂತರ

ಸುದ್ದಿದಿನ,ದಾವಣಗೆರೆ:ಎಂ.ಸಿ.ಸಿ. ಬ್ಲಾಕ್‍ನಲ್ಲಿ ಬಾಡಿಗೆ ಕಟ್ಟಡದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು #1374/19, ಎರಡನೇ ಮಹಡಿ, ಸರೂರ್ ಆರ್ಕೆಡ್ ಯು.ಬಿ.ಡಿ.ಟಿ ಇಂಜಿನಿಯರಿಂಗ್ ಲೇಡಿಸ್ ಹಾಸ್ಟೆಲ್ ಎದುರು,...

ದಿನದ ಸುದ್ದಿ2 days ago

ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿಯ ಸಲ್ಲಿಸುವ ಅವಧಿಯನ್ನು ನವಂಬರ್ 10 ರವರೆಗೆ ವಿಸ್ತರಿಸಲಾಗಿದೆ...

ದಿನದ ಸುದ್ದಿ2 days ago

ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಜಗಳೂರು ಕಾಟಮ್ಮ ; ಸಾಧನೆಯ ಹೆಗ್ಗುರುತುಗಳು

ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಸದಸ್ಯರು, ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು ದಾವಣಗೆರೆ ಜಿಲ್ಲೆಯ ಜಗಳೂರು ಸೀಮೆ ಬುಡಕಟ್ಟು ಸಮುದಾಯಗಳ ನೆಲೆವೀಡು, ತಾಜಾ ಜಾನಪದ ಸಂಸ್ಕೃತಿಯು ಹಾಸು ಹೊಕ್ಕಾದ ಸಮೃದ್ಧ...

ದಿನದ ಸುದ್ದಿ2 days ago

ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು

ಸುದ್ದಿದಿನ,ಬೆಂಗಳೂರು: ಕರ್ನಾಟಕದ ಬುಡಕಟ್ಟು ಜಾನಪದ ಅಧ್ಯಯನ, ಸಂಶೋಧನೆ, ಉಳಿವುಗಾಗಿ ಬದುಕನ್ನೇ ಮುಡಿಪಿಟ್ಟ ನಾಡಿನ ಖ್ಯಾತ ವಿದ್ವಾಂಸ ಪ್ರೊ. ಹಿ.ಚಿ ಬೋರಲಿಂಗಯ್ಯ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭ ಮತ್ತು...

ದಿನದ ಸುದ್ದಿ3 days ago

ಕರ್ನಾಟಕ ಜಾನಪದ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರಕಟ

ಸುದ್ದಿದಿನಡೆಸ್ಕ್: ಕರ್ನಾಟಕ ಜಾನಪದ ಅಕಾಡೆಮಿಯು 2023 ನೇ ಸಾಲಿನ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ನೀಡಿ ಸನ್ಮಾಸಿದೆ ಎಂದು...

ದಿನದ ಸುದ್ದಿ3 days ago

SC-ST | ರೈತರಿಗೆ ಪಶುಸಂಗೋಪನಾ ಚಟಿವಟಿಕೆಗಳ ತರಬೇತಿ

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ತರಬೇತಿಯನ್ನು ಆಯೋಜಿಸಲಾಗಿದೆ. ನವೆಂಬರ್ 5, 6 ಮತ್ತು 29,30 ರಂದು ಆಧುನಿಕ ಹೈನುಗಾರಿಕೆ ತರಬೇತಿ, ನ.11...

ದಿನದ ಸುದ್ದಿ3 days ago

ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್‍ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ...

ದಿನದ ಸುದ್ದಿ4 days ago

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌...

ದಿನದ ಸುದ್ದಿ4 days ago

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. 52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....

ದಿನದ ಸುದ್ದಿ5 days ago

ಚನ್ನಗಿರಿ | ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ; ಬಹುಮಾನ ವಿತರಣೆ

ಸುದ್ದಿದಿನ,ಚನ್ನಗಿರಿ:ಕರ್ನಾಟಕ ಏಕೀಕರಣವಾಗಿ 17 ವರ್ಷಗಳ ನಂತರ ರಾಜ್ಯದ ಮರುನಾಮಕರಣ ಮತ್ತು ಅದರ ಸ್ಮರಣೆಯ ಭಾಗವಾಗಿ ಹಲವು ವಿಚಾರಗಳ ಬಗ್ಗೆ ಮೆಲುಕು ಹಾಕಬೇಕಿದೆ ಎಂದು ಪ್ರಾಂಶುಪಾಲರಾದ ಡಾ.ಅಮೃತೇಶ್ವರ ಬಿ.ಜಿ...

Trending