Connect with us

ಸಿನಿ ಸುದ್ದಿ

ಸುದೀಪ್ ವಿರುದ್ಧ ಕಾಫಿ ತೋಟದ ಮಾಲೀಕ ದೂರು

Published

on

ಸುದ್ದಿದಿನ ಡೆಸ್ಕ್: ಅಭಿನಯ ಚಕ್ರವರ್ತಿ ಸುದೀಪ್ ಒಡೆತನದ ಕಿಚ್ಚ ಕ್ರಿಯೇಶನ್ಸ್ ಬ್ಯಾನರ್‍ನಲ್ಲಿ ಮೂಡಿಬಂದ ವಾರಸ್ಥಾರ ಧಾರವಾಹಿಯ ತಂಡವು ತಮ್ಮ ಕಾಫಿ ತೋಟವನ್ನು ಸಂಪೂರ್ಣ ನಾಶ ಮಾಡಿರುವುದಾಗಿ ಚಿಕ್ಕಮಗಳೂರು ಮೂಲದ ಕಾಫಿ ಎಸ್ಟೇಟ್ ಮಾಲೀಕರೊಬ್ಬರು ರಾಜ್ಯ ಚಲನಚಿತ್ರ ಮಂಡಳಿಗೆ ದೂರು ನೀಡಿದ್ದಾರೆ.

ಚಿಕ್ಕಮಗಳೂರಿನಿಂದ ಕಿ.ಮೀ. ದೂರದಲ್ಲಿರುವ ಬೈಂದೂರು ಬಳಿಯ ಕಾಫಿ ತೋಟದಲ್ಲಿ ಧಾರವಾಹಿಯ ಚಿತ್ರೀಕರಣ ನಡೆದಿದ್ದು, ಶೂಟಿಂಗ್ ನಡೆಸುವ ಸಲುವಾಗಿ ಕಾಫಿ ಗಿಡಗಳು, ಸಿಲ್ವರ್ ಮರಗಳು ಹಾಗೂ ಮೆಣಸಿನ ಗಿಡಗಳನ್ನು ಕಡಿಯಲಾಗಿದೆ ಎಂದು ತೋಟದ ಮಾಲೀಕ ದೀಪಕ್ ಅವರು ಮಂಡಳಿ ಅಧ್ಯಕ್ಷ ಚೆನ್ನೇಗೌಡ ಅವರಿಗೆ ದೂರು ನೀಡಿದ್ದಾರೆ.

ನಟ ಸುದೀಪ್ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದು ಎರಡು ವರ್ಷಗಳ ಕಾಲ ತೋಟ ಹಾಗೂ ತೋಟದ ಮನೆಯನ್ನು ಚಿತ್ರೀಕರಣಕ್ಕೆ ಕೊಡಬೇಕು ಎಂದು ಕೋರಿಕೊಂಡಿದ್ದರು. ಅವರ ಮಾತಿಗೆ ಬೆಲೆಕೊಟ್ಟು ತೋಟವನ್ನು ಬಿಟ್ಟುಕೊಟ್ಟಿದ್ದೆ. ಆದರೆ, ತಂಡವು ಶೂಟಿಂಗ್ ನಡೆಸುವ ಸಲುವಾಗಿ ತೋಟವನ್ನು ಸಂಪೂರ್ಣ ಹಾಳುಮಡಿದೆ. ಸುಮಾರು ಒಂದೂವರೆ ಕೋಟಿ ರೂಪಾಯಿ ನಷ್ಟವಾಗಿದ್ದು ಅದನ್ನು ಸುದೀಪ್ ಅವರೇ ಕಟ್ಟಿಕೊಡಬೇಕು ಎಂದು ದೀಪಕ್ ಕೋರಿದ್ದಾರೆ.

ಇತ್ತೀಚೆಗೆ ನಟ ದರ್ಶನ್ ಅವರೂ ಕೂಡ ದೀಪಕ್ ಅವರ ತೋಟದ ಮನೆಯನ್ನು ಶೂಟಿಂಗ್‍ಗಾಗಿ ಕೇಳಿದ್ದರು ಎಂದು ದೀಪಕ್ ತಿಳಿಸಿದ್ದಾರೆ. ಸದ್ಯ ಸಿಲ್ವರ್ ಮರಗಳಿಗಾಗಿ ಅಡ್ವಾನ್ಸ್ ನೀಡಿರುವವರು ನನ್ನನ್ನು ಹುಡುಕುತ್ತಿದ್ದು, ಮುಖ ಮರೆಸಿಕೊಂಡು ಓಡಾಡುತ್ತಿದ್ದೇನೆ ಎಂದು ದೀಪಕ್ ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಂಡಳಿ ಅಧ್ಯಕ್ಷ ಚನ್ನೇಗೌಡ ಅವರು ಬುಧವಾರ ಸಂಜೆ 5ಗಂಟೆಗೆ ಈ ಕುರಿತು ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ವರ್ಷಗಳ ಹಿಂದೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬಂದ ವಾರಸ್ಥಾರ ಧಾರವಾಹಿಯನ್ನು ಗಡ್ಡ ವಿಜಿ ನಿರ್ದೇಶಿಸಿದ್ದರು. ಯಜ್ಞ ಶೆಟ್ಟಿ ಅವರು ಅಭಿನಯಿಸಿದ್ದ ಈ ಧಾರಾವಾಹಿಯು ಸುಮಾರು ನೂರು ಕಂತುಗಳನ್ನು ಪೂರೈಸಿ ನಿಂತುಹೋಯಿತು. ಯಜ್ಞಾ ಶೆಟ್ಟಿ ಅವರು ಪ್ರಾಜೆಕ್ಟ್ ತೊರೆದಿದ್ದರಿಂದ ಧಾರಾವಾಯಿ ನಿಂತಿತು ಎಂದು ಹೇಳಲಾಗುತ್ತಿದೆ.

ದಿನದ ಸುದ್ದಿ

ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

Published

on

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

Published

on

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್‌ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್​​ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್​ ಈಗ ಹಲವರ ಗಮನ ಸೆಳೆದಿದೆ.

ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.

ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್​ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.

ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://instagram.com/shalu2626?igshid=YmMyMTA2M2Y=

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ದಿ ಕೇರಳ ಸ್ಟೋರಿ’ ವಿವಾದ| ಲವ್ ಜಿಹಾದ್ ಅನ್ನೋದು ಸುಳ್ಳು : ಕೇರಳ ಸಿಎಂ ಪಿಣರಾಯಿ

Published

on

ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಧ್ಯ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವಿಟ್ಟುಕೊಂಡು ತಯಾರಾಗಿರುವ ಈ ಸಿನಿಮಾದಲ್ಲಿ ಐಸಿಸ್ ವಿಚಾರವನ್ನೂ ಹೇಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್‌ಗೆ ತಡೆ ಬಿದ್ದರೂ ಅಚ್ಚರಿ ಏನಿಲ್ಲ.

ಲವ್ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.

ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆಗೆದ ಸಿನಿಮಾ ಇದು ಎಂದು ನಿರ್ದೇಶಕ ಸುದಿಪ್ಲೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,ನಟಿ ಶ್ವೇತಾ ಮೆನನ್ ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ. ಸದ್ಯ ಸಿನಿಮಾ ರಿಲೀಸ್‌ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಟ್ರೇಲರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದಾವಣಗೆರೆ ನೇತ್ರಾಲಯದ ಜೊತೆ ವಿಲೀನಗೊಂಡ ಡಾ. ಅಗರವಾಲ್ಸ್ ಗ್ರೂಪ್ ಆಫ್ ಐ ಹಾಸ್ಪಿಟಲ್ಸ್

ಸುದ್ದಿದಿನ,ದಾವಣಗೆರೆ : ಡಾ. ಸುನೀಲ್ ಜಿ ಸ್ಥಾಪಿಸಿದ ಕಣ್ಣಿನ ಆಸ್ಪತ್ರೆ ದಾವಣಗೆರೆ ನೇತ್ರಾಲಯವು ಡಾ. ಅಗರವಾಲ್ಸ್ ಐ ಹಾಸ್ಪಿಟಲ್ಸ್ ಜೊತೆ ವಿಲೀನವಾಗಿದ್ದು, ರಾಜ್ಯದ  18ನೇ ಕೇಂದ್ರವಾಗಿದೆ. 4200...

ದಿನದ ಸುದ್ದಿ1 day ago

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ...

ಭಾವ ಭೈರಾಗಿ3 days ago

ಕವಿತೆ | ಬುದ್ಧ ನಗುತ್ತಾನೆ..!

ರಶ್ಮಿಪ್ರಸಾದ್ (ರಾಶಿ) ಬೋಧಿವೃಕ್ಷದಡಿಯಲಿ ಕುಳಿತು ಬೋಧನೆಯ ನೆಲೆಯಲಿ ನಿಂತರಷ್ಟೇ ನಿನ್ನಂತಾಗುವೆವೆಂಬ ಮೌಢ್ಯವ ಕಂಡು ಬುದ್ಧ ಇನ್ನೂ ನಗುತ್ತಲೇ ಇದ್ದಾನೆ… ನಮ್ಮೊಳಗೆಂದೂ ನೀನಿಲ್ಲ ಬುದ್ಧ.! ಸಕಲವೈಭೋಗಗಳನೂ ತ್ಯಜಿಸಿ ಮೋಹದಾ...

ದಿನದ ಸುದ್ದಿ7 days ago

ಸಿದ್ದು , ಡಿಕೆ ಪ್ರಮಾಣ ವಚನ ; ಗಣ್ಯಾತಿಗಣ್ಯರ ಉಪಸ್ಥಿತಿ

ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರಲಿದೆ. ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಸಿದ್ದರಾಮಯ್ಯ ಇಂದು ಪ್ರಮಾಣ ವಚನ...

ದಿನದ ಸುದ್ದಿ1 week ago

ಮುಂಗಾರು ಪ್ರವೇಶ ವಿಳಂಬ

ಸುದ್ದಿದಿನ ಡೆಸ್ಕ್ : ನೈರುತ್ಯ ಮುಂಗಾರು ಪ್ರವೇಶ ಈ ವರ್ಷ ಸಾಮಾನ್ಯ ದಿನಕ್ಕಿಂತ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ದಿನದ ಸುದ್ದಿ1 week ago

ಸಿದ್ದರಾಮಯ್ಯ ಗೆ ಸಿಎಂ ಪಟ್ಟ ; ಡಿಕೆಶಿ ಡಿಸಿಎಂ

ಸುದ್ದಿದಿನ, ದೆಹಲಿ : ಕಾಂಗ್ರೆಸ್ ವರಿಷ್ಠರ ಜತೆಗೆಗಿನ ಹಲವು ಸುತ್ತಿನ ಮಾತುಕತೆಯ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಮೇ 20ರಂದು...

ದಿನದ ಸುದ್ದಿ2 weeks ago

ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ; ನವಿಲೇಹಾಳಿನಲ್ಲಿ 30 ಅಡಿ ಎತ್ತರದ ಸಿದ್ದರಾಮಯ್ಯ ಫ್ಲೆಕ್ಸ್ ಹಾಕಿ ಸಂಭ್ರಮ

ಸುದ್ದಿದಿನ, ದಾವಣಗೆರೆ : ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಮೂವತ್ತು ಅಡಿಯ ಸಿದ್ದರಾಮಯ್ಯ...

ದಿನದ ಸುದ್ದಿ2 weeks ago

ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಗೆ ಅತಿ ಹೆಚ್ಚು ಸ್ಥಾನ ; ಯಾವ ವರ್ಷಗಳಲ್ಲಿ ಎಷ್ಟು..?

ಸುದ್ದಿದಿನ ಬೆಂಗಳೂರು : ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಹುಮ್ಮಸ್ಸು ಪಡೆದಿದೆ. 1989ರಲ್ಲಿ 178ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭರ್ಜರಿ...

ಭಾವ ಭೈರಾಗಿ2 weeks ago

ಕವಿತೆ | ನಿನ್ನ ಮಗನ ಕೊಂದರು…

ಮೂಲ : ಬ್ರೆಕ್ಟ್, ಅನುವಾದ : ಸಿದ್ಧಲಿಂಗಯ್ಯ “ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು ಹೋರಾಟದ ಜೀವಿ ಒಡನಾಡಿ ಬಂಧುವನ್ನು ನಿನ್ನ ಮಗನ ಕೊಂದರು. ಅವನಂಥ...

ದಿನದ ಸುದ್ದಿ2 weeks ago

ಚುನಾವಣೆ | ದಾವಣಗೆರೆ ಜಿಲ್ಲೆಯ ಕ್ಷೇತ್ರವಾರು ಕಂಪ್ಲೀಟ್ ಡೀಟೆಲ್ಸ್

ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ...

Trending