ರಾಜಕೀಯ
ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಂಪ್ಲೀಟ್ ಡೀಟೆಲ್ಸ್ : ಮಿಸ್ ಮಾಡ್ದೆ ಓದಿ
ಸುದ್ದಿದಿನ, ಬೆಂಗಳೂರು : ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದ 63 ನಗರ ಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳಿಗೆ ಮೇ 29 ರಂದು ಚುನಾವಣೆಯು ನಡೆಯಲಿದೆ.
ಚುನಾವಣೆ ಕುರಿತು ಸುದ್ದಿಗೋಷ್ಟಿ ನಡೆಸಿ ವಿವರಗಳನ್ನು ನೀಡಿದ ರಾಜ್ಯ ಚುನಾವಣಾಧಿಕಾರಿ ಶ್ರೀನಿವಾಸಾಚಾರಿ ಅವರು, ರಾಜ್ಯ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ಮತದಾನ, ಮೇ 31 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿನ ಒಟ್ಟು 63 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನಗರ ಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳು ಸೇರಿವೆ. ಇದೇ ಮೇ 5 ರಂದು ಚುನಾವಣಾ ಅಧಿಸೂಚನೆ ಜಾರಿಯಾಗಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದ್ದು, ಮೇ 20 ನಾಮಪತ್ರ ಹಿತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ
- ಬೆಂಗಳೂರು ನಗರ – ಆನೇಕಲ್ ಪುರಸಭೆ – 27 ವಾರ್ಡ್ ಗಳು
- ಬೆಂಗಳೂರು ಗ್ರಾಮಾಂತರ – ದೇವನಹಳ್ಳಿ ಪುರಸಭೆ – 23 ವಾರ್ಡ್ ಗಳು
- ಬೆಂಗಳೂರು ಗ್ರಾಮಾಂತರ – ನೆಲಮಂಗಲ ಪುರಸಭೆ – 23 ವಾರ್ಡ್ ಗಳು
- ಕೋಲಾರ – ಬಂಗಾರಪೇಟೆ ಪುರಸಭೆ – 27 ವಾರ್ಡ್ ಗಳು
- ಕೋಲಾರ – ಶ್ರೀನಿವಾಸಪುರ ಪುರಸಭೆ – 23 ವಾರ್ಡ್ ಗಳು
- ಕೋಲಾರ – ಮಾಲೂರು ಪುರಸಭೆ – 27 ವಾರ್ಡ್ ಗಳು
- ಚಿಕ್ಕಬಳ್ಳಾಪುರ – ಬಾಗೇಪಲ್ಲಿ ಪುರಸಭೆ – 23 ವಾರ್ಡ್ ಗಳು
- ಶಿವಮೊಗ್ಗ – ಶಿಕಾರಿಪುರ ಪುರಸಭೆ – 23 ವಾರ್ಡ್ ಗಳು
- ತುಮಕೂರು – ಪಾವಗಡ ಪುರಸಭೆ – 23 ವಾರ್ಡ್ ಗಳು
- ತುಮಕೂರು – ಕುಣಿಗಲ್ ಪುರಸಭೆ – 23 ವಾರ್ಡ್ ಗಳು
- ಮೈಸೂರು – ಕೆ.ಆರ್.ನಗರ ಪುರಸಭೆ – 23 ವಾರ್ಡ್ ಗಳು
- ಮೈಸೂರು – ಬನ್ನೂರು ಪುರಸಭೆ – 23 ವಾರ್ಡ್ ಗಳು
- ಚಿಕ್ಕಮಗಳೂರು – ಕಡೂರು ಪುರಸಭೆ – 23 ವಾರ್ಡ್ ಗಳು
- ದಕ್ಷಿಣ ಕನ್ನಡ – ಮೂಡಬಿದಿರೆ ಪುರಸಭೆ – 23 ವಾರ್ಡ್ ಗಳು
- ಮಂಡ್ಯ – ಮಳವಳ್ಳಿ ಪುರಸಭೆ – 23 ವಾರ್ಡ್ ಗಳು
- ಮಂಡ್ಯ – ಕೆ.ಆರ್.ಪೇಟೆ ಪುರಸಬೆ – 23 ವಾರ್ಡ್ ಗಳು
- ಮಂಡ್ಯ – ಶ್ರೀರಂಗಪಟ್ಟಣ ಪುರಸಭೆ – 23 ವಾರ್ಡ್ ಗಳು
- ಚಾಮರಾಜನಗರ – ಗುಂಡ್ಲುಪೇಟೆ ಪುರಸಭೆ – 23 ವಾರ್ಡ್ ಗಳು
- ವಿಜಯಪುರ – ಬಸವನಬಾಗೇವಾಡಿ ಪುರಸಭೆ – 23 ವಾರ್ಡ್ ಗಳು
- ವಿಜಯಪುರ – ಇಂಡಿ ಪುರಸಭೆ – 23 ವಾರ್ಡ್ ಗಳು
- ವಿಜಯಪುರ – ತಾಳಿಕೋಟೆ ಪುರಸಭೆ – 23 ವಾರ್ಡ್ ಗಳು
- ಧಾರವಾಡ – ನವಲಗುಂದ ಪುರಸಭೆ – 23 ವಾರ್ಡ್ ಗಳು
- ಗದಗ – ಮುಂಡರಗಿ ಪುರಸಭೆ – 23 ವಾರ್ಡ್ ಗಳು
- ಗದಗ – ನರಗುಂದ ಪುರಸಭೆ – 23 ವಾರ್ಡ್ ಗಳು
- ಹಾವೇರಿ – ಬ್ಯಾಡಗಿ ಪುರಸಭೆ – 23 ವಾರ್ಡ್ ಗಳು
- ಹಾವೇರಿ – ಶಿಗ್ಗಾಂವ್ ಪುರಸಭೆ – 23 ವಾರ್ಡ್ ಗಳು
- ಉತ್ತರ ಕನ್ನಡ – ಭಟ್ಕಳ ಪುರಸಭೆ – 23 ವಾರ್ಡ್ ಗಳು
- ಬೀದರ್ – ಭಾಲ್ಕಿ ಪುರಸಭೆ – 27 ವಾರ್ಡ್ ಗಳು
- ಬೀದರ್ – ಹುಮ್ನಾಬಾದ್ ಪುರಸಭೆ – 27 ವಾರ್ಡ್ ಗಳು
- ಬೀದರ್ – ಚಿಟಗುಪ್ಪ ಪುರಸಭೆ – 23 ವಾರ್ಡ್ ಗಳು
- ಬಳ್ಳಾರಿ – ಸಂಡೂರು ಪುರಸಭೆ – 23 ವಾರ್ಡ್ ಗಳು
- ಬಳ್ಳಾರಿ – ಹರಪನಹಳ್ಳಿ ಪುರಸಭೆ – 27 ವಾರ್ಡ್ ಗಳು
- ಬಳ್ಳಾರಿ – ಹೂವಿನಹಡಗಲಿ ಪುರಸಭೆ – 23 ವಾರ್ಡ್ ಗಳು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243