Connect with us

ದಿನದ ಸುದ್ದಿ

ಪ್ರಜಾ ಪರಿವರ್ತನಾ ವೇದಿಕೆ | ಸೆ.24 ರಂದು ‘ಸಂವಿಧಾನ ಯಾರ ಹೊಣೆ..? ಸಮ್ಮೇಳನ : ಎ.ಡಿ. ಈಶ್ವರಪ್ಪ

Published

on

ಸುದ್ದಿದಿನ, ದಾವಣಗೆರೆ : ಪ್ರಜಾ ಪರಿವರ್ತನಾ ವೇದಿಕೆಯಿಂದ ‘ಸಂವಿಧಾನ ರಕ್ಷಣೆ ಯಾರ ಹೊಣೆ?’ ಎಂಬ ವಿಷಯದ ಮೇಲೆ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವನ್ನು ಸೆ.24ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ‌. ಈಶ್ವರಪ್ಪ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತ ಜಾತಿ ಗಳು, ಹತ್ತಾರು ಧರ್ಮ ದವರು ವಾಸ ಮಾಡುತ್ತಿರುವ ನಮ್ಮ ದೇಶಕ್ಕೆ ಉತ್ತಮ ವಾದ ಜಗತ್ತಿನ ಎಲ್ಲ ದೇಶಗಳು ಹೊಗಳುವ ಲಿಖಿತ ಸಂವಿಧಾನ ವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರವರು ರಚಿಸಿ ದೇಶಕ್ಕೆ ಸಮರ್ಪಿಸಿದ್ದಾರೆ. ಭಾರತೀಯರಾದ ನಾವೆಲ್ಲರೂ ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯ. ಸಮಾನತೆ, ರಕ್ಷಣೆ, ಉದ್ಯೋಗ ಮತ್ತು ಶಿಕ್ಷಣ ದ ಮೀಸಲಾತಿ ಇವೆಲ್ಲವೂ ಬಾಬಾ ಸಾಹೇಬರ ಸಂವಿಧಾನದ ಕೊಡುಗೆ ಯಾಗಿದೆ ಎಂದು ನುಡಿದರು.

ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡಬೇಕು, ಎಸ್ ಸಿ ಎಸ್ ಟಿ ಮೀಸಲಾತಿ ರದ್ದು ಮಾಡಬೇಕು ಎಂದು ದೇಶದಾದ್ಯಂತ ಮನುವಾದಿ ಸಂಘಟನೆ ಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿವೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳುವವರಿಗೆ ಸಂವಿಧಾನದ ಬಗ್ಗೆ ಪೂರ್ಣ ಮಾಹಿತಿ ಇದೆ. ಆದರೆ ಸಂವಿಧಾನದ ನೇರ ಫಲಾನುಭವಿಗಳಾದ, ಎಸ್ ಸಿ ಮತ್ತು ಎಸ್ ಟಿ, ಒಬಿಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಂವಿಧಾನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲದಿರುವುದು ದುರಂತ. ಈ ಕೊರತೆಯನ್ನು ನೀಗಿಸಲು ತಾವು ತಮ್ಮ ಕುಟುಂಬದ ಸದಸ್ಯರು ಮತ್ತು ಸ್ನೇಹಿತರು, ಹಾಗೂ ಬಂಧುಗಳೊಂದಿಗೆ ಈ ಸಮ್ಮೇಳನದಲ್ಲಿ ಭಾಗವಹಿಸಲು ಕೋರಿದರು.

ಸುದ್ದಿ ಗೋಷ್ಟಿಯಲ್ಲಿ ಪ್ರಜಾ ಪರಿವರ್ತನಾ ವೇದಿಕೆಯ ಹೆಚ್,ಕೆ, ಕೃಷ್ಣ‌ಅರಕೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಕೆ.ಓ. ಹನುಮಂತಪ್ಪ, ಸುನಿಲ್ ಯರಗನಾಳ್, ಜಿಲ್ಲಾ ವಿದ್ಯಾರ್ಥಿಮುಖಂಡ ಸಿದ್ದಪ್ಪಸಿಂಗಟಗೆರೆ, ನಾಗರಾಜ್ ಮಾದೇನಹಳ್ಳಿ ಅಣ್ಣಪ್ಪ ಚಿಕ್ಕಹಾಲಿವಾಣ,ಮಮತಾ ಕುರುವ, ಹೊನ್ನಾಳಿ ತಾಲೂಕ್ ಮಹಿಳಾ ಅಧ್ಯಕ್ಷೆ, ಸರಸ್ವತಿ ಬೇಲಿಮಲ್ಲೂರು, ಹೊನ್ನಾಳಿ ತಾಲೂಕ್ ಮಹಿಳಾ ಪ್ರಧಾನ ಕಾರ್ಯದರ್ಶಿ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಟಿ ಜಯಂತಿ ಇನ್ನಿಲ್ಲ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕನ್ನಡ, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ 6 ಭಾಷೆಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದರು. ಜಯಂತಿ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ; ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸಚಿವೆ ಶಶಿಕಲಾ ಜೊಲ್ಲೆ

Published

on

ಸುದ್ದಿದಿನ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ.

ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.

ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಅನುಮಾನ
ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending