ದಿನದ ಸುದ್ದಿ

ಕಾಂಗ್ರೆಸ್ ಗೆ ತೆರಿಗೆ ಪಾವತಿಸಲು ನೋಟಿಸ್ ಜಾರಿ

Published

on

ಸುದ್ದಿದಿನ ಡೆಸ್ಕ್ : ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಾಗಿ 1 ಸಾವಿರದ 823 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ತೆರಿಗೆ ಬಾಧ್ಯತೆಗಳಿಗೆ ಈ ನೋಟಿಸ್ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿ ಮೂಲಗಳು ಹೇಳಿವೆ.

ದೇಶದ ಪ್ರಮುಖ ಪ್ರತಿ ಪಕ್ಷಕ್ಕೆ ತೊಂದರೆ ನೀಡಲು ಆದಾಯ ತೆರಿಗೆ ಇಲಾಖೆಯನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಖಾತೆಗಳಿಂದ ಆದಾಯ ತೆರಿಗೆ ಇಲಾಖೆ ಈಗಾಗಲೇ 135 ಕೋಟಿ ರೂಪಾಯಿಗಳನ್ನು ಹಿಂಪಡೆದಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version