ದಿನದ ಸುದ್ದಿ

ಉಪಚುನಾವಣೆ | ಕಾಂಗ್ರೆಸ್ ಚನ್ನಪಟ್ಟಣ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ; 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸುವಂತೆ ಸಿಎಂ ಮನವಿ

Published

on

ಸುದ್ದಿದಿನಡೆಸ್ಕ್:ವಿಧಾನಸಭಾ ಉಪ ಚುನಾವಣೆಯ ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಗೇಶ್ವರ್ ಅವರನ್ನು ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.

ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಹಿvದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ ಅಭ್ಯರ್ಥಿಗಳ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version