ದಿನದ ಸುದ್ದಿ

ಮಾಯಕೊಂಡ ಕ್ಷೇತ್ರದ ಜನಧ್ವನಿ ಪ್ರತಿಭಟನೆ : ಬಿಜೆಪಿ ಜನ ವಿರೋಧಿ‌ ನೀತಿ ಖಂಡನೆ

Published

on

ಸುದ್ದಿದಿನ, ಚನ್ನಗಿರಿ: ರಾಜ್ಯದಲ್ಲಿ ಕೋವಿಡ್-19ರ ಸಾಮಗ್ರಿಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆಸ ಹೆಣದ ಮೇಲೆ ಹಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಎಸ್. ಬಸವಂತಪ್ಪ ಖಂಡಿಸಿದರು.

ಮಾಯಕೊಂಡ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಬಸವಾಪಟ್ಟಣದಲ್ಲಿ ಪ್ರತಿಭಟನೆ ಜಾಥಾ ನೆಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಿ ಕಾರ್ಪೋರೇಟ್ ಗುಲಾಮಗಿರಿ ನಿಲ್ಲಿಸಲು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿದ ಅವರು ಕೃಷಿ ವಿರೋಧಿ ನೀತಿಗೆ ಕೈಗನ್ನಡಿಯಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಲು ಒತ್ತಾಯಿಸಿದರು.

ರೈತರ ಹಾಗೂ ಕೃಷಿ ಕಾರ್ಮಿಕರ ಬದುಕಿಗೆ ಮಾರಕವಾಗಿರುವ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಹಿತಕಾಯುವ ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆಯ ವಿರುದ್ದ ಹಾಗೂ ಕಾರ್ಮಿಕ ಕಾಯ್ದೆಯನ್ನು ಹಿಂಪಡೆದು ಕಾರ್ಮಿಕರನ್ನು ಮಾಲೀಕರ ಗುಲಾಮರನ್ನಾಗಿ ಮಾಡಲು ಹೊರಟಿರುವುದು, ವಿಷಾದನೀಯ ಸಂಗತಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಮಹಿಳಾ ಮುಖಂಡರಾದ ಎಂ.ಜಿ. ಶಶಿಕಲಾ ಮೂರ್ತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಲ್ಕುದುರೆ , ಕತ್ತಲಗೆರೆ ತಿಪ್ಪಣ್ಣ ಅವರುಗಳು ಮಾತನಾಡಿದರು.ಪ್ರತಿಭಟನೆಯಲ್ಲಿ ತಾ.ಪಂ. ಸದಸ್ಯರಾದ ಶ್ರೀಮತಿ ಜ್ಯೋತಿ ಪ್ರಕಾಶ್, ಹನುಮಂತಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಿದಾಯತ್, ಮುಖಂಡರಾದ ಆಲಂಪಾಷಾ, ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version