ದಿನದ ಸುದ್ದಿ
ಪಕ್ಷದ ನಾಯಕರಿಗೆ ವಾರ್ನಿಂಗ್ ಕೊಟ್ರು ಡಿಕೆಶಿ
ಸುದ್ದಿದಿನಡೆಸ್ಕ್:ಡಿಸಿಎಂ, ಸಿಎಂ ವಿಚಾರಕ್ಕೆ ಯಾವುದೇ ಚರ್ಚೆ ಆಗಿಲ್ಲ ಬಾಯಿಗೆ ಬೀಗ ಹಾಕಿಕೊಂಡಿದ್ರೆ ಪಕ್ಷಕ್ಕೆ ಒಳ್ಳೆಯದ್ದು ಪಕ್ಷದ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ಕ್ರಮ ಕೈಗೊಳ್ಳಲಾಗುವುದು. ಬಾಯಿಗೆ ಬೀಗ ಹಾಕಿಕೊಂಡಿದ್ರೆ ಪಕ್ಷಕ್ಕೆ ಒಳ್ಳೆಯದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಹೇಳಿದ್ದಾರೆ.
ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


