Connect with us

ರಾಜಕೀಯ

ರಾಷ್ಟ್ರಪತಿ ಕುರಿತು ಕಾಂಗ್ರೆಸ್ ನಾಯಕ ಅಧೀರ್‌ರಂಜನ್ ಚೌಧರಿ ಅನುಚಿತ ಪದ ಬಳಕೆ; ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ; ಕಲಾಪ ನಾಳೆಗೆ ಮುಂದೂಡಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ಸಂಸದ ಅಧೀರ್‌ರಂಜನ್ ಚೌಧರಿ ಅವಹೇಳನಕಾರಿ ಪದ ಬಳಕೆ ಮಾಡಿರುವುದರ ವಿರುದ್ಧ ಆಡಳಿತಾರೂಢ ಬಿಜೆಪಿ ಸಂಸದರು ಲೋಕಸಭೆಯಲ್ಲಿಂದು ಪ್ರತಿಭಟನೆ ನಡೆಸಿದರು.

ಚೌಧರಿ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಲೇ ದೇಶದ ಜನತೆ ಎದುರು ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಂಸದರು ಆಗ್ರಹಿಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರಪತಿ ಸ್ಥಾನ ಕುರಿತು ಅನುಚಿತ ಪದ ಬಳಸುವ ಮೂಲಕ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಕಾಂಗ್ರೆಸ್ ಅಪಹಾಸ್ಯ ಮಾಡಿದೆ ಎಂದರು.

ಅಲ್ಲದೆ ದೇಶದ ಮಹಿಳೆಯರು, ಬುಡಕಟ್ಟು ಸಮುದಾಯ, ಆದಿವಾಸಿಗಳು ಮತ್ತು ಬಡಜನರಿಗೆ ಅಗೌರವ ತೋರಿದೆ ಎಂದು ಸಚಿವೆ ಸ್ಮೃತಿ ಇರಾನಿ ಟೀಕಿಸಿದರು. ಚೌಧರಿ ಹೇಳಿಕೆ ಇಡೀ ದೇಶಕ್ಕೆ ಮಾಡಿದ ಅಪಮಾನವಾಗಿದ್ದು, ಜನತೆ ದಿಗ್ಭ್ರಾಂತರಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಆಗ್ರಹಿಸಿದರು.

ಆಯುಷ್ ಸಚಿವ ಸರ್ಬಾನಂದ ಸೋನೋವಾಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಭಾರತಿ ಪವಾರ್ ಸೇರಿದಂತೆ ಹಲವು ಸಚಿವರು ಮತ್ತು ಸಂಸದರು ಚೌಧರಿ ಹೇಳಿಕೆಯನ್ನು ಟೀಕಿಸಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿ ಹಾಗೂ ಪ್ರತಿ ಪಕ್ಷಗಳ ವಾಗ್ವಾದ ಮತ್ತು ಗದ್ದಲದಿಂದಾಗಿ ಸದನದ ಕಲಾಪವನ್ನು ಹಲವು ಬಾರಿ ಮುಂದೂಡಲಾಗಿದ್ದು, ಅಂತಿಮವಾಗಿ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ಆಯೋಗ ಪತ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಅಧೀರ್‌ರಂಜನ್ ಚೌಧರಿ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮುಂದಿನ ತಿಂಗಳ 3ರಂದು ಈ ಕುರಿತು ವಿಚಾರಣೆಗೆ ನಡೆಸಲಿದ್ದು, ಖುದ್ದಾಗಿ ಹಾಜರಾಗುವಂತೆ ಚೌಧರಿ ಅವರಿಗೆ ಆಯೋಗ ಸೂಚಿಸಿದೆ. ಅಲ್ಲದೆ ಚೌಧರಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಆಯೋಗ ಪತ್ರ ಬರೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

Published

on

ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

ಪೂರಕ ದಾಖಲಾತಿ

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‍ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್‍ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತದಾನದಲ್ಲಿ ಮಹಿಳೆಯರದೇ ಮೇಲುಗೈ

Published

on

ಸುದ್ದಿದಿನ ಡೆಸ್ಕ್ : ಲೋಕಸಭೆಯ ಆರನೇ ಹಂತದ ಚುನಾವಣೆಯಲ್ಲಿ ಪುರುಷರಿಗಿಂತ ಶೇ.3ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದೇ ತಿಂಗಳ 25 ರಂದು ನಡೆದ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಮತದಾರರ ಅಂಕಿ-ಅಂಶವನ್ನು ಬಿಡುಗಡೆಗೊಳಿಸಿರುವ ಚುನಾವಣಾ ಆಯೋಗ, ಶೇಕಡ 61.95 ಅರ್ಹ ಪುರುಷ ಮತದಾರರಿಗೆ ಹೋಲಿಸಿದರೆ. ಶೇಕಡ 64.95 ಅರ್ಹ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ, ಇದಲ್ಲದೆ, ಶೇಕಡ 18.67 ರಷ್ಟು ತೃತೀಯಲಿಂಗಿಗಳ ಮತದಾನದಲ್ಲಿ ಪಾಲ್ಗೊಂಡರು ಎಂದು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243|

Continue Reading

ದಿನದ ಸುದ್ದಿ

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

Published

on

ಸುದ್ದಿದಿನ ಡೆಸ್ಕ್ : ಇತ್ತೀಚೆಗಷ್ಟೇ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಬಿಎಸ್ ವೈ ಅವರ ಬಳಿ ಸಹಾಯ ಕೋರಲು ಹೋದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಅನ್ನು ಮಹಿಳೆ ದಾಖಲಿಸಿದ್ದರು.

ದೂರುದಾರೆಯು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರನ್ನು ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಆದರೆ ನಿನ್ನೆಯಷ್ಟೇ ಅವರು ಚೆನ್ನಾಗಿದ್ದರು ಎಂದು ಮೂಲಗಳು ಹೇಳುತ್ತಿವೆ. ವೈದ್ಯರ ವರದಿಯನ್ನು ಪೊಲೀಸರು ಎದುರು ನೋಡುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending