ರಾಜಕೀಯ

ನಾವಂದ್ರೆ ಸಿಎಂ ಕುಮಾರಸ್ವಾಮಿ ಗೆ ಅಸಡ್ಡೆ: ಕಾಂಗ್ರೆಸ್ ಶಾಸಕರ ಅಸಮಾಧಾನ

Published

on

ಸುದ್ದಿದಿನ ಬೆಂಗಳೂರು: ಇಲ್ಲಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಅಸಮಾಧಾನಗಳು ಹೊರ ಬಿದ್ದವು.

ಸಚಿವ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರಾದ ಆನಂದ್ ಸಿಂಗ್ ಮತ್ತು ಭೀಮನಾಯ್ಕ್ ನಡುವೆ ವಾಗ್ವಾದ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಳ್ಳಾರಿ ಕ್ಷೇತ್ರದಲ್ಲಿ ನಾಗೇಂದ್ರ ಅಥವಾ ಪಿ.ಟಿ.ಪರಮೇಶ್ವರ್ ನಾಯ್ಕ್ ಸಚಿವರಾಗಬೇಕೆಂದು ಭೀಮಾನಾಯ್ಕ್ ಅವರು ಹೇಳಿದ್ದು, ಅಸಮಾಧಾನಕ್ಕೆ ಕಾರಣವಾಯಿತು. ಈ ವೇಳೆ ಇಬ್ಬರು ನಾಯಕರು ಪರಸ್ಪರ ದೂರಿದ್ದಾರೆ ಎನ್ನಲಾಗಿದೆ.

ಈ ವೇಳೆ ಕಾಂಗ್ರೆಸ್ ನಾಯಕರು ಇಬ್ಬರನ್ನು ಸಮಾಧಾನಪಡಿಸಿ, ಅದು ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿ ಹೇಳಿದ್ದಾರೆ.

ನಾವಂದ್ರೆ ಸಿಎಂ ಕುಮಾರಸ್ವಾಮಿ ಗೆ ಅಸಡ್ಡೆ: ಕಾಂಗ್ರೆಸ್ ಶಾಸಕರ ಅಸಮಾಧಾನ

ಇನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುರಿತು ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ನಾವಂದ್ರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಅಸಡ್ಡೆ. ಯಾವುದೇ ಕಾರ್ಯಕ್ಕೆ ಹೋದರು ಗಂಟೆಗಟ್ಟಲೆ ಕಾಯಿಸುತ್ತಾರೆ. ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿಕೊಂಡಿದ್ದಾರೆ.

Trending

Exit mobile version