ದಿನದ ಸುದ್ದಿ
ಅಧಿವೇಶನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ ಕಾಂಗ್ರೆಸ್ ಎಂ ಎಲ್ ಸಿ ಪ್ರಕಾಶ್ ರಾಥೋಡ್..!
ಸುದ್ದಿದಿನ, ಬೆಂಗಳೂರು : ವಿಧಾನ ಪರಿಷತ್ ಅಧಿವೇಶನದಲ್ಲಿ ಕಾಂಗ್ರೆಸ್ ನ ಎಂ ಎಲ್ ಸಿ ಪ್ರಕಾಶ್ ರಾಥೋಡ್ ಅಶ್ಲೀಲ ಚಿತ್ರ ವೀಕ್ಷಿಸಿದ ಘಟನೆ ನಡೆದಿದೆ.
ವಿಧಾನ ಪರಿಷತ್ ಅಧಿವೇಶನದ ಎರಡನೇ ದಿನವಾದ ಶುಕ್ರವಾರ ಪ್ರಕಾಶ್ ರಾಥೋಡ್ ಅವರು ಅಧಿವೇಶ ಆರಂಭವಾಗುತ್ತಲೇ ನೀಲಿ ಚಿತ್ರವನ್ನು ನೋಡುತ್ತಿರುವ ದೃಶ್ಯವನ್ನು ಪವರ್ ಟಿವಿ ಕನ್ನಡ ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ರವೀಂದ್ರ ರೇಷ್ಮೆ, ಮತ್ತು ಬಿಜೆಪಿಯ ವಕ್ತಾರ ಗೋ ಮಧುಸೂದನ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ವಿಧಾನ ಸಭೆಯ ಅಧಿವೇಶನದಲ್ಲಿ ಲಕ್ಷ್ಮಣ ಸವದಿ ಸೇರಿದಂತೆ ಇನ್ನಿಬ್ಬರು ಅಶ್ಲೀಲ ಚಿತ್ರ ನೋಡಿದ್ದು ದೇಶಾದ್ಯಂತ ಚರ್ಚೆಗೆ ಒಳಗಾಗಿತ್ತು. ಶಿಸ್ತಿನ ಪಕ್ಷ ಎಂದು ಹೆಸರಾಗಿರುವ ಬಿಜೆಪಿ ಈ ಘಟನೆಯಿಂದ ತೀವ್ರ ಮುಜುಗರಕ್ಕೆ ಒಳಗಾಗಿತ್ತು.
ಎಂ ಎಲ್ ಸಿ ಪ್ರಕಾಶ್ ರಾಥೋಡ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದು, ಕಾಂಗ್ರೆಸ್ ಈ ಘಟನೆಗೆ ಸಂಬಂಧಿಸಿದಂತೆ ಹೇಗೆ ಪ್ರತಿಕ್ರಿಯಿಸುತ್ತಿದೆ ಎಂದು ಕಾದು ನೋಡ ಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243