ರಾಜಕೀಯ

ಮೋದಿಯವರ ನಿಜ ಬಣ್ಣ ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ ಅಧಿಕಾರ ನಡೆಸಿ ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ ಎಂದರು.

ಸುಳ್ಳಿಗೆ ಪರ್ಯಾದ ಪದವೆಂದರೆ ಅದು ನರೇಂದ್ರ ಮೋದಿ. ಅವರ ಚುನಾವಣಾ ಪೂರ್ವದ ಭಾಷಣ ಹಾಗೂ ಇಂದಿನ ಆಡಳಿತ ಒಂದಕ್ಕೊಂದು ತದ್ವಿರುದ್ಧವಾಗಿದೆ. ಮೋದಿ, ಮೋದಿ ಅಂತ ಘೋಷಣೆ ಕೂಗುತ್ತಾ, ಅಧಿಕಾರ ಕೊಟ್ಟ ಜನರೇ ಇಂದು ಮೋಸಹೋಗಿದ್ದಾರೆ. ಮೋದಿಯವರ ನಿಜ ಬಣ್ಣವನ್ನು ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version