Connect with us

ರಾಜಕೀಯ

ಸಂವಿಧಾನ ಮತ್ತು ಧರ್ಮ : ಸದ್ಯದ ಅಪವ್ಯಾಖ್ಯಾನ

Published

on

ಮಸ್ಯೆಯೊಂದನ್ನು ನಿರ್ಲಕ್ಷಿಸಿದಾಗ ಅದು ತನ್ನ ಪ್ರಾಬಲ್ಯ ಹಿಗ್ಗಿಸಿಕೊಳ್ಳಲಾರಂಭಿಸುತ್ತದೆ. ಸಕಾಲಿಕ ಪರಿಹಾರೋಪಾಯ ಶೋಧಿಸಿಕೊಂಡು ಎದುರುಗೊಳ್ಳದಿದ್ದರೆ ಅದು ಬೃಹದಾಕಾರ ಪಡೆದುಕೊಳ್ಳುತ್ತದೆ. ಬಿಡಿಸಲಾಗದ ಬಿಕ್ಕಟ್ಟಾಗಿ ಮಾರ್ಪಾಡಾಗಿ ನಾನಾ ಸಂಕಟಗಳನ್ನು ನೆಲೆಗೊಳಿಸಿಬಿಡುತ್ತದೆ. ಪರಿಹಾರದ ಮಾರ್ಗ ಯಾವುದು ಎಂಬುದು ಗೊತ್ತಿದ್ದರೂ ಅದನ್ನು ಅನುಸರಿಸುವುದಕ್ಕೆ ಕಷ್ಟಸಾಧ್ಯ ಎಂಬ ಭಾವವನ್ನು ಸಾರ್ವತ್ರಿಕಗೊಳಿಸುವಷ್ಟರ ಮಟ್ಟಿಗೆ ಆ ಸಂಕಟಗಳು ತೀವ್ರವಾಗಿ ಬಾಧಿಸುತ್ತವೆ. ಹೀಗೆ ಸಂಕಟಗೊಳಪಟ್ಟ ವ್ಯಕ್ತಿಗತ ಸಂಕೀರ್ಣತೆ ಸಾಮೂಹಿಕ ಸ್ವರೂಪ ಆವಾಹಿಸಿಕೊಂಡು ಜನಸಮುದಾಯಗಳನ್ನು ದಿಗ್ಮೂಢರನ್ನಾಗಿಸುತ್ತದೆ. ಆಂತರ್ಯದೊಳಗೆ ಮೂಡುವ ಅಸಮಾಧಾನ ಸಹನೆಯನ್ನು ಕಳೆದಿಡುತ್ತದೆ. ಆ ಸಂದರ್ಭದ ಅಸಹನೆಯು ಹಿಂಸೆಯೊಂದಿಗಿನ ದೃಷ್ಟಿಕೋನಗಳನ್ನು ಚಿಗುರಿಸಿಕೊಳ್ಳಲು ನೆರವಾಗುತ್ತದೆ. ಈ ಹಂತದಲ್ಲಿಯೇ ದ್ವಂದ್ವ, ಅಸ್ಪಷ್ಟತೆ, ಅವಿವೇಕತನ, ಅಸಂಬದ್ಧತೆ ಮತ್ತು ಕ್ರೌರ್ಯದ ನಡವಳಿಕೆಗಳು ದೇಶದ ಸಾಮಾಜಿಕ ಅಸ್ಮಿತೆಯನ್ನೇ ಧ್ವಂಸಗೊಳಿಸುತ್ತವೆ. ಭಾರತ ಅಂಥದ್ದೊಂದು ಅಪಾಯಕಾರಿ ಪ್ರವೃತ್ತಿಯ ಮಿತಿಯೊಂದಿಗೆ ಹೆಜ್ಜೆಯಿರಿಸುತ್ತಿದೆ. ಇದನ್ನು ತಿಳಿದುಕೊಂಡು ಸರಿಹಾದಿ ತೋರುವ ದಾರ್ಶನಿಕತೆಯನ್ನು ನಿರೂಪಿಸಬೇಕಾದ ನಾಯಕರಲ್ಲದ ನಾಯಕರೆನ್ನಿಸಿಕೊಂಡವರು ಸಮಸ್ಯಾತ್ಮಕತೆಯನ್ನು ಸ್ಥಾಯಿಯಾಗಿಸಿ ತಮ್ಮ ಅಸ್ತಿತ್ವವನ್ನು ಶಾಶ್ವತಗೊಳಿಸಿಕೊಳ್ಳುವ ಹಂಬಲಗೊಳೊಂದಿಗೇ ಗುರುತಿಸಿಕೊಂಡಿದ್ದಾರೆ.

ಈ ದೇಶವನ್ನು ಕಾಡುತ್ತಿರುವ ಸಮಸ್ಯೆಗಳು ಯಾವುವು ಎಂಬುದು ಅವುಗಳ ವ್ಯತಿರಿಕ್ತ ಪರಿಣಾಮಗಳಿಗೆ ಈಡಾದವರೂ ಸೇರಿದಂತೆ ಹಲವರಿಗೆ ಗೊತ್ತಿದೆ. ಈ ಸಮಸ್ಯೆಗಳ ಮೂಲ ಎಲ್ಲಿಯದು ಎಂಬುದರ ಅರಿವೂ ಇದೆ. ಇಡೀ ದೇಶದಲ್ಲಿ ಸಮಸ್ಯೆಗಳೇ ಇಲ್ಲ ಎಂಬಂಥ ಪರಮೋಚ್ಛ ಭ್ರಮೆಯ ವರ್ತುಲಕ್ಕೆ ಸಿಲುಕೊಳ್ಳಬಾರದು ಎಂಬ ಪ್ರಜ್ಞೆಯನ್ನು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಒದಗಿಸಿಕೊಡುವ ನಕಾರಾತ್ಮಕತೆಯ ಅನುಭವವು ಪ್ರತಿಯೊಬ್ಬರಿಗೂ ಆಗುತ್ತಲೇ ಇರುತ್ತದೆ. ಆದರೆ, ಅದನ್ನು ಹಲವರು ಅಭಿವ್ಯಕ್ತಿಸುವುದಿಲ್ಲ. ಬದಲಾವಣೆ ಬಯಸುವ ಚಿಂತಕರು ಮತ್ತು ಜನಸಾಮಾನ್ಯ ವಲಯ ಆ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸುತ್ತಾರೆ. ಹಾಗೆ ಅವರು ಮುಕ್ತ ಆಲೋಚನೆಯನ್ನು ಹರಿಬಿಟ್ಟಾಗ ಅದು ಅಪಾಯಕಾರಿ ಎಂದು ತಪ್ಪಾಗಿ ಅರ್ಥೈಸುವ ಜಾಯಮಾನದ ನಡೆಯನ್ನು ರಾಜಕೀಯ ವಲಯ ಈಗೀಗ ನೆಚ್ಚಿಕೊಳ್ಳುತ್ತಿದೆ. ಇಂಥ ನಡೆಯ ಕಾರಣಕ್ಕಾಗಿಯೇ ಸಂವಿಧಾನ ಮತ್ತು ಧರ್ಮ ಪರಸ್ಪರ ಸಂಘರ್ಷಿಸುವ ನೆಲೆಗಳಾಗಿ ಚರ್ಚಿಸಲ್ಪಡುತ್ತಿವೆ. ಇವೆರಡರ ಉದಾತ್ತ ಅರ್ಥವನ್ನು ಒಡೆದು ಸಂಕುಚಿತಗೊಳಿಸಿದ ಅಪವ್ಯಾಖ್ಯಾನವನ್ನೇ ಜನಸಮುದಾಯ ನೆಚ್ಚಿಕೊಳ್ಳುವಂತೆ ಒತ್ತಡ ಹಾಕುತ್ತಿವೆ. ಇದೇ ಬಗೆಯ ಅನುಕೂಲಕರ ಸಮಯಾವಕಾಶವನ್ನು ಕಾಯ್ದುಕುಳಿತಂತೆ ರಾಜಕೀಯ ವಲಯ ತನ್ನ ದಾಳಗಳನ್ನು ಪ್ರಯೋಗಿಸುತ್ತಿದೆ.

ಸದ್ಯದ ವ್ಯತಿರಿಕ್ತ ಸ್ಥಿತಿಗತಿಗಳು ಅತ್ಯಂತ ನಿಖರವಾಗಿ ಬಿಟ್ಟುಕೊಡುತ್ತಿರುವ ಸುಳಿವುಗಳು ಹಲವಿವೆ. ಅವುಗಳಲ್ಲಿ ಧರ್ಮ ಮತ್ತು ದೇವರಿಗೆ ಸಂಬಂಧಿಸಿದಂತೆ ಇರುವ ವ್ಯಕ್ತಿಗತ ಸಂಕುಚಿತತೆಯನ್ನು ಸಾಂಸ್ಥಿಕಗೊಳಿಸಿ ಪ್ರಭಾವವನ್ನು ವ್ಯಾಪಕಗೊಳಿಸುವ ಪ್ರಯತ್ನವೂ ಒಂದು. ಧರ್ಮವನ್ನು ಮತ್ತೊಂದು ಧರ್ಮದ ವಿರುದ್ಧ ಎತ್ತಿಕಟ್ಟುವುದು, ಆಯಾ ಧರ್ಮಗಳವರ ನಂಬಿಕೆಯ ಆವರಣದಲ್ಲಿ ಆದ್ಯತೆ ಪಡೆದಿರುವ ದೇವರುಗಳ ಆರಾಧನೆಯ ಅವಕಾಶಗಳನ್ನು ಸ್ವಾರ್ಥಕ್ಕೆ ತಿರುಗಿಸಿಕೊಳ್ಳುವುದು ಈಗೀಗ ಸಾರ್ವತ್ರಿಕವಾಗಿದೆ. ಸಮಸ್ಯೆಯೊಂದು ವ್ಯಕ್ತಿಯನ್ನು ಭಾಧಿಸುತ್ತಿರುತ್ತದೆ. ವ್ಯಕ್ತಿಗತ, ಕೌಟುಂಬಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯಾತ್ಮಕ ಸಂಕೀರ್ಣತೆಗಳೊಂದಿಗಿನ ವಾಸ್ತವಿಕತೆಯೇ ಆ ಸಮಸ್ಯೆಗೆ ಕಾರಣವಾಗಿರುತ್ತದೆ. ಆದರೆ, ಧರ್ಮ ಮತ್ತು ದೇವರನ್ನು ಅಪವ್ಯಾಖ್ಯಾನಕ್ಕೊಳಪಡಿಸಿ ಆ ಬಗ್ಗೆ ಸಂಕುಚಿತವಾಗಿ ಅರ್ಥೈಸಿ ಭಯಹುಟ್ಟಿಸಲಾಗುತ್ತದೆ. ಹೀಗೆ ಭಯವನ್ನು ಹುಟ್ಟಿಸಿ ಸ್ವಾರ್ಥ ಸಾಧಿಸಿಕೊಳ್ಳುವ ಹಿತಾಸಕ್ತಿಗಳ ಅಸ್ತಿತ್ವದಲ್ಲಿಯೇ ಮಹತ್ವದ ಸುಳಿವನ್ನು ಗೊತ್ತುಮಾಡಿಕೊಳ್ಳಬಹುದು. ಈ ಹಿತಾಸಕ್ತಿಗಳು ಸಮಸ್ಯೆಗಳನ್ನು ಉದ್ದೇಶಪೂರ್ವಕವಾಗಿ ಸ್ಥಾಯಿಯಾಗಿಸಿ ಜನರೊಳಗಿನ ಆಲೋಚಿಸುವ ಶಕ್ತಿಯನ್ನೇ ತಡೆದು ನಿಲ್ಲಿಸುತ್ತವೆ. ಆವರ ಆಲೋಚನೆಯ ಸಾಧ್ಯತೆಗಳನ್ನು ಮೊಟಕುಗೊಳಿಸಿ ಧರ್ಮವಲ್ಲದ ಸಂಗತಿಗಳ ಕಡೆಗೆ ತಿರುಗಿಸುತ್ತವೆ. ಅವರ ಮನಸ್ಸಿನಲ್ಲಿ ದೇವರುಗಳ ಬಗ್ಗೆ ಭಯದ ಭಾವ ಮೂಡಿಸುತ್ತವೆ. ಆರಾಧಿಸದಿದ್ದರೆ ಶಿಕ್ಷೆ ಗ್ಯಾರಂಟಿ, ದೇವರೇ ಮುನಿಸಿಕೊಂಡರೆ ಮುಂದಿದೆ ವ್ಯತಿರಿಕ್ತ ಪರಿಣಾಮ ಎಂಬ ಅತಾರ್ಕಿಕತೆಯನ್ನೇ ಮಂಡಿಸಿ ದಾರಿ ತಪ್ಪಿಸುತ್ತವೆ.

ಮೊದಲೇ ಸಮಸ್ಯೆಗಳ ಮಧ್ಯೆ ನರಳುತ್ತಿರುವವರ ಮುಂದೆ ಧರ್ಮದಲ್ಲಿಲ್ಲದ ಸಂಗತಿಗಳನ್ನು ವೈಭವೀಕರಿಸಿ ಹೇಳಿದರೆ ಸ್ವಾರ್ಥದ ಉದ್ದೇಶಗಳನ್ನು ಈಡೇರಿಸಿಕೊಳ್ಳಬಹುದು ಎಂಬ ಕಾರ್ಯಸೂಚಿ ಅತ್ಯಂತ ಎಚ್ಚರದಲ್ಲಿ ಯಶಸ್ವಿಯಾಗಿ ನಿರ್ವಹಿಸಲ್ಪಡುತ್ತದೆ. ಹೀಗಾದರೆ ಹೀಗಾಗುತ್ತದೆ ಎಂದು ತಾರ್ಕಿಕವಾಗಿ ಮಾತನಾಡುವವರಂತೆ ನಟಿಸುವವರೇ ರಂಜನಾಮಾಧ್ಯಮೋದ್ಯಮದ ಮೂಲಗಳಾಗುತ್ತಾರೆ. ಸಮಾಜದ ವಿವಿಧ ಜನವರ್ಗಗಳು ಇಂಥವರನ್ನು ಆರಾಧಿಸಿಕೊಂಡೇ ಇದ್ದರೆ ತಮ್ಮ ಬೇಳೆ ಬೇಯಿಸಿಕೊಳ್ಳಬಹುದು ಎಂಬ ರಾಜಕೀಯ ವಲಯದ ನಿರೀಕ್ಷೆಗಳು ಈ ಹಂತದಲ್ಲಿಯೇ ಈಡೇರಿಬಿಡುತ್ತವೆ. ಸಮಸ್ಯೆಯನ್ನು ಶಾಶ್ವತವಾಗಿ ಉಳಿಯುವಂತೆ ನೋಡಿಕೊಂಡು ಅದು ಬಿಕಟ್ಟಿನ ಸ್ವರೂಪ ಪಡೆದುಕೊಂಡಾಗಲೂ ಪರಿಹಾರದ ನಾಟಕವಾಡಿ ಧರ್ಮ, ದೇವರ ಕುರಿತಾಗಿ ಭಯಭೀತಿ ಸೃಷ್ಟಿಸಿ ಸಾಮಾಜಿಕ ಚಲನೆಯನ್ನು ನಿಲ್ಲಿಸಿಬಿಡುವ ರಾಜಕೀಯ ಉದ್ದೇಶಗಳು ಯಶಸ್ಸು ಪಡೆದುಬಿಡುತ್ತವೆ. ಇದೇ ರಾಜಕೀಯ ಪ್ರವೃತ್ತಿ ಇಂದು ಸಂವಿಧಾನಕ್ಕೆ ಸವಾಲೆಸೆಯುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ.
ಇದು ಎಲ್ಲ ಕಾಲದ ಸಮಸ್ಯೆಯೂ ಹೌದು. ಬಹುಷಃ ಈ ಕಾರಣಕ್ಕಾಗಿಯೇ ಇರಬಹುದು; ಈಗಾಗಲೇ ಆಗಿಹೋದ ದಾರ್ಶನಿಕರು ದೇವರು ಮತ್ತು ಧರ್ಮದ ಕುರಿತ ನಂಬಿಕೆಯ ಜಗತ್ತನ್ನು ಆಧರಿಸಿಯೇ ತಾತ್ವಿಕತೆಯನ್ನು ಪ್ರತಿಪಾದಿಸಿದರು. ಭೌತಿಕ ಜಗತ್ತಿನ ಒಳಗೇ ಮನುಷ್ಯಸಹಜ ದೌರ್ಬಲ್ಯಗಳೊಂದಿಗಿನ ಊನಗಳನ್ನು ತಮ್ಮೊಳಗಿನ ದಾರ್ಶನಿಕತೆಯೊಂದಿಗೆ ಎದುರುಗೊಂಡರು. ನಿಜವಾದ ಧರ್ಮ ಏನು ಎಂಬುದನ್ನು ಅರ್ಥೈಸಿದರು. ದೇವರ ಅಸ್ತಿತ್ವವು ಒಳಿತಿನೊಂದಿಗೇ ಇದೆ ಎಂಬ ವಿವೇಕವನ್ನು ಕಟ್ಟಿಕೊಡಲು ಪ್ರಯತ್ನಿಸಿದರು. ನಿಸರ್ಗದ ಅನೇಕ ಕೌತುಕಮಯ ಸಂಗತಿಗಳನ್ನು ಕಾಡಿಸಿಕೊಂಡು ಅವುಗಳನ್ನು ಜೀವಪರ ಅಂತಃಕರಣದೊಂದಿಗೆ ಮನುಷ್ಯ ಬದುಕಿನ ಉದ್ಧಾರಕ್ಕೆ ಬಳಸಿಕೊಳ್ಳಬಹುದಾದ ಒಳನೋಟಗಳ ಮೇಲೆ ಬೆಳಕು ಚೆಲ್ಲಿದರು. ಧರ್ಮ-ದೇವರ ಬಗೆಗಿನ ನಂಬಿಕೆಯ ಜಗತ್ತನ್ನು ಅಲುಗಾಡಿಸದೇ ಅಂತಸ್ಥಗೊಂಡಿರುವ ಮೂಢನಂಬಿಕೆಯ ಬೇರುಗಳನ್ನು ಕಿತ್ತೆಸೆಯಲು ತಾತ್ವಿಕ ಮಾರ್ಗವನ್ನು ಕಂಡುಕೊಂಡರು. ಆ ಮೂಲಕ ಧರ್ಮ ಮತ್ತು ದೇವರನ್ನು ಉದಾತ್ತತೆಯೊಂದಿಗೆ ತಾದಾತ್ಮ್ಯಗೊಳಿಸುವ ಚಲನಾತ್ಮಕ ಆಕೃತಿಗಳನ್ನು ಕೊಡುಗೆಗಳನ್ನಾಗಿ ನೀಡಿದರು. ಈಗ ಈ ಸಾಧ್ಯತೆಯ ತದ್ವಿರುದ್ಧದ ದಿಕ್ಕುಗಳೇ ಪರಮಮಾರ್ಗಗಳಾಗಿ ಪರಿಗಣಿತವಾಗುತ್ತಿವೆ. ಅವೇ ಪರಮೋಚ್ಛ ಎಂಬ ಬಿಂಬಗಳನ್ನು ಅತ್ಯಂತ ಚಾಣಾಕ್ಷಯುತವಾಗಿ ಕಟ್ಟಿಕೊಡಲಾಗುತ್ತಿದೆ. ಅಂಥ ಎಲ್ಲ ಸಂಕುಚಿತತೆಯನ್ನು ರಾಜಕೀಯ ಪೋಷಿಸುತ್ತಿದೆ. ಧರ್ಮ-ದೇವರನ್ನು ನೆಚ್ಚಿಕೊಂಡ ಜನರ ನಂಬಿಕೆಯ ಜಗತ್ತನ್ನು ಮೌಢ್ಯಕ್ಕೆ ತಿರುಗಿಸಿ ಅಪನಂಬಿಕೆಗಳನ್ನು ಮುನ್ನೆಲೆಗೆ ತಂದು ತನ್ನನ್ನು ವಿಜೃಂಭಿಸಿಕೊಳ್ಳುತ್ತಿದೆ.

ಧರ್ಮ ಮತ್ತು ದೇವರು – ಇವೆರಡೂ ಭಾವನಾತ್ಮಕ ಸಾಂಸ್ಥಿಕತೆಯನ್ನು ಅಳವಡಿಸಿಕೊಂಡು ನಿರಂತರವಾಗಿ ಜನರನ್ನು ಶೋಷಿಸಲು ಬಳಕೆಯಾದ ಇತಿಹಾಸವಿದೆ. ಅದನ್ನು ಮರೆಗೆ ಸರಿಸಿ ಅಧಿಕಾರ, ಹಣ ಮತ್ತು ಪ್ರತಿಷ್ಠೆಗಳನ್ನು ಸ್ಥಾಯಿಯಾಗಿಸಿಕೊಳ್ಳಲು ರಾಜಕೀಯ ಕೇಂದ್ರಗಳು ಪ್ರಯತ್ನಿಸಿ ಯಶಸ್ವಿಯಾಗುತ್ತಲೇ ಇವೆ. ಅವುಗಳಿಗೆ ಅನುಗುಣವಾಗಿಯೇ ತಮ್ಮನ್ನು ಪ್ರತಿಷ್ಠಾಪಿಸಿಕೊಂಡ ವಿವಿಧ ಜಾತಿಗಳ ಜನಸಮೂಹ ಅವು ನಿರೀಕ್ಷಿಸುವ ಸಂಕುಚಿತತೆಯ ಮನೋಧರ್ಮಕ್ಕೆ ಪಕ್ಕಾಗುತ್ತಲೇ ಇದೆ. ಬದಲಾವಣೆಯ ಪ್ರಬಲ ಅಸ್ತ್ರ ಎಂದು ಪರಿಗಣಿಸಲ್ಪಟ್ಟ ಶಿಕ್ಷಣ ಮತ್ತು ಅದರ ಮೂಲಕ ವ್ಯಾಪಕಗೊಳ್ಳುತ್ತದೆ ಎಂದುಕೊಂಡಿದ್ದ ಮೌಲ್ಯಾತ್ಮಕ ಪ್ರಭೆಯನ್ನು ಮತ್ತೆ ಮತ್ತೆ ಸೋಲಿಸುತ್ತಿರುವುದು ಇದೇ ಸಂಕುಚಿತತೆಯೇ. ಇದನ್ನೇ ಅಧಿಕಾರ ಕೇಂದ್ರಗಳ ಕಡೆಗೆ ನೋಟ ನೆಟ್ಟ ರಾಜಕೀಯ ವಲಯದ ಪ್ರತಿನಿಧಿಗಳು ತಮ್ಮ ಬಂಡವಾಳವಾಗಿಸಿಕೊಳ್ಳುತ್ತಿದ್ದಾರೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಧರ್ಮದಲ್ಲಿ ಇಲ್ಲದೇ ಇರುವ ಜೀವವಿರೋಧಿ ಅಮಾನವೀಯ ಸಾಂಪ್ರದಾಯಿಕತೆಯನ್ನು ಸಂವಿಧಾನಕ್ಕಿಂತಲೂ ಮಿಗಿಲು ಎಂದು ಪ್ರತಿಪಾದಿಸುತ್ತಿದ್ದಾರೆ. ಆ ಪ್ರತಿಪಾದನೆಯನ್ನು ಸಮಾಜದ ವಿವಿಧ ಜನವರ್ಗಗಳು ಒಪ್ಪಿಕೊಳ್ಳಲೇಬೇಕು ಎಂಬ ವಿತಂಡವಾದವನ್ನು ಮುಂದಿಡುತ್ತಿದ್ದಾರೆ.
ಈ ನಕಾರಾತ್ಮಕ ಹೆಜ್ಜೆಗಳಿಗೆ ಪರ್ಯಾಯವಾಗಿ ವಿಶ್ವಾಸಾರ್ಹವಾದ ಸಂವಿಧಾನಬದ್ಧ ರಾಜಕೀಯ ಸಂಸ್ಕøತಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಧರ್ಮವಲ್ಲದ ಸಂಗತಿಗಳನ್ನು ವೈಭವೀಕರಿಸಿ ಮುನ್ನೆಲೆಗೆ ತಂದ ವಲಯದವರೂ ತಾವು ಬದಲಾಗಬೇಕಾದ ಆಲೋಚನೆಗಳನ್ನು ಹರಿಬಿಡುತ್ತಿದ್ದಾರೆ ಎಂಬುದೇನೋ ಸಮಾಧಾನ ತರುವ ಸಂಗತಿ. ಈ ದೇಶದ ಸಾಂಸ್ಕøತಿಕ ವೈವಿಧ್ಯತೆಯ ಮಹತ್ವವನ್ನು ತಡವಾಗಿಯಾದರೂ ಹೇಳುತ್ತಿದ್ದಾರೆ ಎಂದುಕೊಳ್ಳಬಹುದು. ಎಲ್ಲ ಧರ್ಮಗಳವರನ್ನು ಗೌರವಿಸಬೇಕು ಎನ್ನುವ ಭಾವವನ್ನು ಸಂವಹಿಸುತ್ತಿದ್ದಾರೆ ಎಂದು ಖುಷಿಪಡಬಹುದು. ಅಂಥ ಆಶಾದಾಯಕ ನುಡಿಗಳು ನಡೆಯಲ್ಲೂ ಮೇಳೈಸಿಕೊಳ್ಳಬೇಕು.
ಹಾಗಾಗುವುದಕ್ಕೆ ಭಾರತದ ರಾಜಕಾರಣ ಅಷ್ಟು ಸುಲಭವಾಗಿ ಬಿಡುವುದಿಲ್ಲ. ಇಲ್ಲಿಯ ರಾಜಕಾರಣಕ್ಕೆ ಬದಲಾವಣೆಗಿಂತ ಸ್ಥಗಿತತೆಯೇ ಹೆಚ್ಚು ಅಚ್ಚುಮೆಚ್ಚು. ಧರ್ಮ-ದೇವರು ಕೇಂದ್ರಿತ ಸಾಂಪ್ರದಾಯಿಕತೆಯೊಂದಿಗೆ ತಳುಕು ಹಾಕಿಕೊಂಡಿರುವ ಸಮಸ್ಯೆಗಳು ಜಟಿಲವಾದಷ್ಟೂ ಅದಕ್ಕೆ ಎಲ್ಲಿಲ್ಲದ ಖುಷಿ. ಜನರು ಈ ಸಾಂಪ್ರದಾಯಿಕತೆಯ ತೊಳಲಾಟಗಳಲ್ಲೇ ಕಾಲ ಕಳೆದರೆ ನಿಜವಾದ ಬೆಳವಣಿಗೆಗೆ ಸಂಬಂಧಿಸಿದ ಚಿಂತನೆಯೇ ಹುಟ್ಟುವುದಿಲ್ಲ. ಆಗ ಜನರು ಎಚ್ಚೆತ್ತುಕೊಳ್ಳುವ ಪ್ರಮೇಯವೇ ಎದುರಾಗುವುದಿಲ್ಲ. ಇದು ದೇವರು-ಧರ್ಮಗಳ ರಕ್ಷಾಕವಚಗಳನ್ನು ಹಾಕಿಕೊಂಡು ಜನರ ಭಯವಿಹ್ವಲತೆಯನ್ನು ಬೇರೂರಿಸಿ ಮತ್ತಷ್ಟು ಗಟ್ಟಿಯಾಗಿಸಿ ಉಸಿರುಗಟ್ಟಿಸುವ ಆಟ. ತಮ್ಮನ್ನು ಸೋಲಿಸುವ ವೈಚಾರಿಕತೆ ಸನಿಹದಲ್ಲಿಯೇ ಇದೆ ಎನ್ನುವ ಸುಳಿವು ಸಿಕ್ಕ ತಕ್ಷಣವೇ ಧರ್ಮರಕ್ಷಣೆ ಮತ್ತು ದೇವರನ್ನು ಕೃತಾರ್ಥರನ್ನಾಗಿಸುವ ಕೈಂಕರ್ಯಗಳ ನೆಪದಲ್ಲಿ ಭಯವನ್ನು ಸೃಷ್ಟಿಸಿ ವಂಚಿಸುವ ಆಟ. ಇಂಥ ಆಟವನ್ನು ನಿಲ್ಲಿಸಬೇಕಾದರೆ ಪ್ರತಿಕಾಲಘಟ್ಟದಲ್ಲೂ ಸೋಲುತ್ತಲೇ ಇರುವ ಬಹುಸಂಖ್ಯಾತ ಶೋಷಿತ ಸಮುದಾಯದ ಜನರು ಸಂವಿಧಾನದ ಆವರಣಕ್ಕೆ ಮರಳಬೇಕು. ತಮ್ಮ ಸಮಸ್ಯೆಗಳಿಗೆ ಪರಿಹಾರ ತೋರುವ ಪರಿವರ್ತನಾಶೀಲ ಚಿಂತನಶೀಲ ಸದಾಶಯಗಳೊಂದಿಗೆ ಮುಖಾಮುಖಿಯಾಗಬೇಕು. ಧ್ಯಾನಸ್ಥ ಸ್ಥಿತಿಯಲ್ಲಿ ಸಂವಿಧಾನವನ್ನು ಅಂತರ್ಗತಗೊಳಿಸಿಕೊಳ್ಳಬೇಕು.
ಪರ್ಯಾಯ ರಾಜಕಾರಣದ ಸಾಧ್ಯತೆಗಳನ್ನು ಇಷ್ಟೊತ್ತಿಗಾಗಲೇ ಅತ್ಯಂತ ಚಾಣಾಕ್ಷಯುತವಾಗಿ ಪರೀಕ್ಷೆಗೊಡ್ಡಿ ತನ್ನ ಸಂವಿಧಾನಬದ್ಧ ಶಕ್ತಿಯನ್ನು ವಿಸ್ತರಿಸಿಕೊಳ್ಳಬಹುದಾಗಿದ್ದ ರಾಜಕೀಯ ಪಕ್ಷಗಳು ಮತ್ತೆ ಅಧಾರ್ಮಿಕ ಸಂಕುಚಿತತೆಯೊಂದಿಗಿನ ಶ್ರೇಷ್ಠತೆಯ ವ್ಯಸನದಿಂದ ಬಳಲುತ್ತಿರುವ ಸಾಂಪ್ರದಾಯಿಕ ಶಕ್ತಿಗಳ ಜೊತೆಗೇ ಕೈಜೋಡಿಸಿ ತಮ್ಮ ಅಧಿಕಾರ ಪಡೆಯುವ ಹಂಬಲಗಳನ್ನು ಜೀವಂತಗೊಳಿಸಿಕೊಳ್ಳುತ್ತಿವೆ. ಮತ್ತವೇ ಜಾತಿ ವೈರುಧ್ಯಗಳು. ಮತ್ತದೇ ಅಧಾರ್ಮಿಕ ಸಂಘರ್ಷ. ಮೇಲು-ಕೀಳುಗಳ ಅಂತರ್ಯುದ್ಧದ ಕಪಟಕಿರುಕುಳ ಯಾನ. ಸಂವಿಧಾನವನ್ನು ಗೆಲ್ಲಿಸುವ ಇಚ್ಛಾಶಕ್ತಿಯ ಕೊರತೆ. ಅಲ್ಲಲ್ಲಿ ಕಂಡುಬರುವ ಮಾನವೀಯತೆಯ ಒರತೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವಾಗಿಸಿಬಿಡುವ ಹುನ್ನಾರಗಳ ತಕಧಿಮಿಗುಟ್ಟುವ ಕ್ರೂರನರ್ತನ. ಉದಾತ್ತ ತಾತ್ವಿಕತೆಯ ಪರಿಭಾಷೆಗಳನ್ನು ಅಪವ್ಯಾಖ್ಯಾನಗೊಳಿಸುವ ಸಾಂಪ್ರದಾಯಿಕತೆ ಅಸ್ತಿತ್ವ ಇನ್ನೆಷ್ಟು ದಿನ? ಕಾಲವೇ ಉತ್ತರಿಸಬೇಕು ಎಂದು ಸುಮ್ಮನೆ ಕುಳಿತುಕೊಳ್ಳಬೇಕೇ? ಯೋಚಿಸಲಾರಂಭಿಸಬೇಕೇ……?

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ,ಇ-ಮೇಲ್ ವಿಳಾಸ: nkpadmanabh@gmail.com
ಮೊಬೈಲ್: 9972998300)

ದಿನದ ಸುದ್ದಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

Published

on

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಆದೇಶಿಸಿದ್ದಾರೆ.

ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

Published

on

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ವೃತ್ತಿ ನಾಟಕ ಶಿಬಿರಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯ ಅಗತ್ಯ : ಡಾ. ವೆಂಕಟೇಶ್ ಬಾಬು

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ...

ದಿನದ ಸುದ್ದಿ2 weeks ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಖರೀದಿಸಲು ನೋಂದಣಿ ಆರಂಭ

ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್‍ಗೆ...

ದಿನದ ಸುದ್ದಿ2 weeks ago

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು...

ದಿನದ ಸುದ್ದಿ3 weeks ago

ದಾವಣಗೆರೆ | 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎ.ಬಿ.ರಾಮಚಂದ್ರಪ್ಪ ಆಯ್ಕೆ

ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ...

ದಿನದ ಸುದ್ದಿ3 weeks ago

ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ

ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್...

ದಿನದ ಸುದ್ದಿ3 weeks ago

ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ...

ಕ್ರೀಡೆ3 weeks ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ...

ಕ್ರೀಡೆ3 weeks ago

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ...

ಕ್ರೀಡೆ4 weeks ago

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ...

Trending