ದಿನದ ಸುದ್ದಿ
ನಾಳೆ ‘ಪ್ರಜಾ ಪರಿವರ್ತನಾ ವೇದಿಕೆ’ಯಿಂದ ‘ಸಂವಿಧಾನ ಜಾಗೃತಿ ಅಭಿಯಾನ’ ಸಮಾರಂಭ
ಸುದ್ದಿದಿನ ಡೆಸ್ಕ್ : ಭಾರತದ ಸಂವಿಧಾನ ಇಡೀ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದದ್ದು ಎಂಬುದೇ ಪ್ರತಿಯೊಬ್ಬ ಭಾರತೀಯನ ಹೆಗ್ಗಳಿಕೆ. ಮೌಡ್ಯ ಕಂದಾಚಾರದಂತಹ ಅನಿಷ್ಟಪದ್ದತಿಗಳನ್ನು ಧಿಕ್ಕರಿಸಿ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿರುವ ನಮ್ಮ ಸಂವಿಧಾನ ಸರ್ವಕಾಲಕ್ಕೂ ಮಾನ್ಯವಾಗುವಂತಹ ಕಾನೂನುಗಳನ್ನು ಹೊಂದಿದೆ. ಹತ್ತಾರು ಧರ್ಮೀಯರು ವಿಭಿನ್ನ ಸಂಸ್ಕೃತಿಯ ಸಾವಿರಾರು ಜಾತಾಗಳನ್ನ ಹೊಂದಿರುವ ಭಾರತದಂಥ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸ್ವತಂತ್ರ್, ಸಮಾನತೆ, ಸಹೋದರತೆಯಂತಹ ಮಾನವೀಯ ಮೌಲ್ಯಗಳ ತಳಹದಿಯ ಮೇಲೆ ರೂಪಿತವಾಗಿರುವ ಸಂವಿಧಾನ ಭಾರತದ ದೇಶದ ಘನತೆಯನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸಿದೆ.
ಸಂವಿಧಾನ ಜಾರಿಯಾದ ದಿನದಿಂದ ಇಂದಿನವರೆಗೆ ದೇಶವನ್ನಾಳಿದ ಮನುವಾದಿ ಸರ್ಕಾರಗಳು ಯಥಾವತ್ತಾಗಿ ಸಂವಿಧಾನವನ್ನು ಜಾರಿಮಾಡಿದ್ಥರೆ ಭಾರತದ ಇಂದಿನ ಸಾಮಾಜಿಕ, ಆರ್ಥಿಕ, ರಾಜಕೀಯ ಚಿತ್ರಣವೇ ಬೇರೆಯಾಗಿರುತ್ತಿತ್ತು. ಆದರೇ ಸಾಮಾಜಿಕ ಬದಲಾವಣೆ ಒಪ್ಪದ ಮನುವಾದಿಗಳು ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡಿಲ್ಲ ಜೊತೆಗೆ ಸಂವಿಧಾನದ ಬಗ್ಗೆ ದೇಶವಾಸಿಗಳಲ್ಲಿ ಜಾಗೃತಿ ಮೂಡಿಸಲಿಲ್ಲ. ಅದರ ಪರಿಣಾಮವಾಗಿ ಇಡೀ ಜಗತ್ತು ಮೆಚ್ಚುವ ಸಂವಿಧಾನವನ್ನು ಭಾರತೀಯರೇ ಗೌರವಿಸುತ್ತೀಲ್ಲ ಬದಲಾಗಿ ಮನುವಾದಿಗಳು ಸಂವಿಧಾನವನ್ನು ಬದಲಿಸುವ ಮಾತನಾಡಿದಾಗ, ಅದರ ಪ್ರತಿಗೆ ಬೆಂಕಿಹಂಚಿದಾಗ ಸಂವಿಧಾನದ ಅಡಿಯಲ್ಲಿ ಬದುಕುವ ನಾಗರಿಕರಷ್ಟೆ ಅಲ್ಲ, ಸಂವಿಧಾನ ಬದ್ಧವಾಗಿ ರಚನೆಯಾಗಿರುವ ಸರ್ಕಾರವು ಮೌನವಹಿಸುತ್ತದೆ.
ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಏಕಾಂಗಿಯಾಗಿ 2 ವರ್ಷ 11 ತಿಂಗಳವರೆಗೆ ಸಂವಿಧಾನ ರಚನೆಯಲ್ಲಿ ತೊಡಗಿಕೊಂಡು ನಂತರ ಸಂವಿಧಾನದ ಮೇಲೆ ಸದನದಲ್ಲಿ 166 ದಿನಗಳ ಸುದೀರ್ಘ ಚರ್ಚೆ ನಡೆಸಿ, ಸುಮಾರು 7635 ಪ್ರಶ್ನೆಗಳಲ್ಲಿ 5162 ಪ್ರಶ್ನೆಗಳಿಗೆ ತೃಪ್ತಿದಾಯಕ ಉತ್ತರವನ್ನು ನೀಡಿ 2473 ಪ್ರಶ್ನೆಗಳನ್ನು ಸಲಹೆಯಾಗಿ ಸ್ವೀಕರಿಸಿ ಅಂತಿಮವಾಗಿ ಸದನ ಸಮಿತಿಯ ಎಲ್ಲಾ ಪ್ರತಿನಿಧಿಗಳ ಒಪ್ಪಿಗೆಯಂತೆ 1950 ಜನವರಿ 26 ರಂದು ಸಂವಿಧಾನ ಜಾರಿಯಾಯಿತು.
ಸಂವಿಧಾನದ ಆಶಯಗಳು ಜಾರಿಯಾಗಿದೆ ಈ ದೇಶದ ಸಮಸ್ತ ಅಭಿವೃದ್ದಿ ಸಾಧ್ಯವಿಲ್ಲ. ಅದಕ್ಕಾಗಿ ಸಂವಿಧಾನದ ಜಾರಿಗಾಗಿ ದೇಶದ ಪ್ರತಿಯೊಬ್ಬ ನಾಗರಿಕನೂ ಹೋರಾಟ ನಡೆಸಬೇಕಿದೆ, ಬಹುಮುಖ್ಯವಾಗಿ ಸಂವಿಧಾನದ ರಕ್ಷಣೆಯ ಹೊಣೆಯನ್ನು ದಲಿತ, ಹಿಂದೂಳಿದ, ಅಲ್ಪಸಂಖ್ಯಾತ ಸಮುದಾಯಗಳು ಹೊರಬೇಕಾಗಿದೆ. ಈ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ಪ್ರಯತ್ನವಾಗಿ ಪ್ರಜಾ ಪರಿವರ್ತನಾ ವೇದಿಕೆ ದಾವಣಗೆರೆ ಜಿಲ್ಲಾ ಸಮಿತಿಯು ನಾಳೆ, 31/01/2019 ರ ಗುರುವಾರ ಬೆಳಿಗ್ಗೆ 11-30 ಕ್ಕೆ ದಾವಣಗೆರೆಯ ರೋಟರಿ ಬಾಲಭವನದಲ್ಲಿ ”ಸಂವಿಧಾನ ಜಾಗೃತಿ ಅಭಿಯಾನ” ಸಮಾರಂಭದ ಉದ್ಘಾಟನೆಯನ್ನು ಹಮ್ಮಿಕೊಂಡಿದೆ.
ಜನರು ಸರ್ವಸಮಾನರಾಗಿ ಶೋಷಣೆ ಮುಕ್ತರಾಗಿ ಜೀವಿಸಲು ಸಂವಿಧಾನ ಬಹಳ ಮುಖ್ಯವಾಗಿ ಬೇಕಾಗುವ ಗ್ರಂಥವೇ ಸರಿ. ಸಂವಿಧಾನ ಜನರ ಜೀವನದ ಅವಿಭಾಜ್ಯ ಅಂಗವಾದಾಗ ಸಂವಿಧಾನದ ರಕ್ಷಣೆ ಸಾಧ್ಯ ಎಂದು ಹೇಳುತ್ತಾ, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ನಾಡಿನ ಹಾಗೂ ಜಿಲ್ಲೆಯ ಎಲ್ಲಾ ಪ್ರಗತಿಪರರು, ಚಿಂತಕರು, ಸಂಘಸಂಸ್ಥೆಯ ಪದಾಧಿಕಾರಿಗಳು, ನಾಗರಿಕರು, ಹಾಗೂ ಎಲ್ಲಾಕ್ಕಿಂತ ಹೆಚ್ಚಾಗಿ ನನ್ನೆಲ್ಲಾ ಬಹುಜನ ಬಂಧುಗಳು ಭಾಗವಹಿಸುವಂತೆ ಈ ಮೂಲಕ ಕೋರಿಕೆಯನ್ನು ಸಲ್ಲಿಸುತ್ತಿದ್ದೇವೆ.
ಈ ನಮ್ರ ಪ್ರಯತ್ನಕ್ಕೆ ಸಹಸ್ರಾರು ಜನರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಭೀಮ ವಿನಂತಿ ಸಲ್ಲಿಸುತ್ತೇವೆ.
-ಪ್ರಜಾ ಪರಿವರ್ತನಾ ವೇದಿಕೆ
ಜಿಲ್ಲಾಸಮಿತಿ ದಾವಣಗೆರೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
