ದಿನದ ಸುದ್ದಿ
ದಾವಣಗೆರೆ | ನವೆಂಬರ್ 26 ರಂದು ಗ್ಲಾಸ್ ಹೌಸ್ ನಲ್ಲಿ ಸಂವಿಧಾನ ದಿನಾಚರಣೆ
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತದಿಂದ ಇದೇ ನ. 26 ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಬಹಳ ಅರ್ಥಪೂರ್ಣ ಆಚರಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸೂಚನೆ ನೀಡಿದರು.
ಶುಕ್ರವಾರ (22) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ನವಂಬರ್ 26 ರಂದು ಕಾರ್ಯಕ್ರಮವನ್ನು ಕುಂದುವಾಡ ಕೆರೆಯ ಗ್ಲಾಸ್ ಹೌಸ್ ನಲ್ಲಿ ಆಚರಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ಮತ್ತು ವಿತರಿಣೆ ಮಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಾಗೂ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕೆಂದರು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸದಸ್ಯರು ಹಾಗೂ ಪ್ರಾಂಶುಪಾಲರಾದ ಪ್ರೊ. ಮಲ್ಲಿಕಾರ್ಜುನ್ ಮತ್ತು ರುದ್ರಪ್ಪ ಹನಗವಾಡಿ ಇವರಿಂದ ಉಪನ್ಯಾಸ ನೀಡುವರು.
ಕಾರ್ಯಕ್ರಮದ ವೇದಿಕೆಯಲ್ಲಿ ಸಂವಿಧಾನ ಪೀಠಿಕೆ ಓದಬೇಕು.ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ ಹಾಸ್ಟೆಲ್‍ಗಳ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಬೇಕೇಂದರು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಕೆ.ಎಸ್.ಆರ್.ಟಿ.ಸಿ.ಯಿಂದ ಬಸ್ ವ್ಯವಸ್ಥೆ ಮಾಡಬೇಕು.
ಅಂಬೇಡ್ಕರ್ ರವರ ಜೀವನ ಚರಿತ್ರೆಯ ಭಾರತ ಭಾಗ್ಯವಿದಾತ, ಜೈಭೀಮ, ಬಾಲಕ ಅಂಬೇಡ್ಕರ್ ಕುರಿತು ಚಲನಚಿತ್ರವನ್ನು ವಿದ್ಯಾರ್ಥಿಗಳಿಗೆ ವೀಕ್ಷಣೆಯ ಮಾಡಲು ಚಲನಚಿತ್ರ ಮಂದಿರಗಳಿಗೆ ಅವಕಾಶ ನೀಡಬೇಕು ಎಂದರು.
ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ಅರಿವು ಮೂಡಿಸಲು ಸಂವಿಧಾನದ ಕುರಿತು ಪ್ರಬಂಧ ಸ್ಪರ್ಧೆಯನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಿ ತಾಲ್ಲೂಕುವಾರು ಒಬ್ಬ ವಿದ್ಯಾರ್ಥಿಯನ್ನು ಆಯ್ಕೆಮಾಡಬೇಕೆಂದರು.
ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ವಸತಿ ಶಾಲೆಗಳಿಂದ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ಅರಿವು ಮೂಡಿಸುಲು ಸಂವಿಧಾನ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ತಾಲ್ಲೂಕುವಾರು ಒಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ, ಭಾರತ ಸಂವಿಧಾನದ ಜಾಗೃತಿ ಮೂಡಿಸುವ ಸಲುವಾಗಿ ದಾವಣಗೆರೆ ಮಹಾನಗರ ಪಾಲಿಕೆಯ ಪ್ರಸಿದ್ದ ಉದ್ಯಾನವನ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಎದುರುಗಡೆ ಇರುವ ವಿಶ್ವೇಶ್ವರಯ್ಯ ಪಾರ್ಕ್ ನಲ್ಲಿ ಸಂವಿಧಾನ ಪೀಠಿಕೆಯನ್ನು ಕನ್ನಡ ಹಾಗೂ ಆಂಗ್ಲ ಭಾμÉಯಲ್ಲಿ ಕೆತ್ತನೆ ಮಾಡಿ ನಿರ್ಮಿಸಿ, ಜ.26 ರಂದು ಪೀಠಿಕೆಯನ್ನು ಉದ್ಘಾಟಿಸಿ ಪ್ರಚಾರಾಂದೋಲನ ಕೈಗೊಳ್ಳಬೇಕೇಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ನಾಗರಾಜ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ರವಿಚಂದ್ರ, ಡಿಡಿಪಿಐ ಕೊಟ್ರೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|998034624