ದಿನದ ಸುದ್ದಿ
ಮುಂದಿನ 4 ವರ್ಷಗಳಲ್ಲಿ 200 ನೂತನ ವಿಮಾನ ನಿಲ್ದಾಣ, ಹೆಲಿಪೋರ್ಟ್ ನಿರ್ಮಾಣ : ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಸುದ್ದಿದಿನ ಡೆಸ್ಕ್ : ಮುಂದಿನ ಮೂರು ವರ್ಷಗಳಲ್ಲಿ ದೇಶದ ವಿಮಾನ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಳ್ಳಲಿದ್ದು, 200 ದಶಲಕ್ಷಕ್ಕೆ ಏರಿಕೆಯಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ಪ್ರಯಾಣಕ್ಕೆ ಸೂಕ್ತ ವಾತಾವರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು. ದೇಶದಲ್ಲಿ ಕಳೆದ 8ವರ್ಷಗಳಲ್ಲಿ67ನೂತನ ವಿಮಾನ ನಿಲ್ದಾಣಗಳು, ವಾಟರ್ ಡ್ರೋಮ್ ಮತ್ತು ಹೆಲಿಪೋರ್ಟ್‌ಗಳನ್ನು ನಿರ್ಮಿಸಲಾಗಿದೆ.
ಮುಂದಿನ ನಾಲ್ಕು ವರ್ಷಗಳಲ್ಲಿ ಈ ಸಂಖ್ಯೆಯನ್ನು 200ಕ್ಕೆ ಏರಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.
ವಿಮಾನ ಪ್ರಯಾಣ ಹೆಚ್ಚಿದಂತೆ ವಿಮಾನ ಸಂಚಾರ ದಟ್ಟಣೆಯೂ ಏರಿಕೆಯಾಗಲಿದ್ದು, ವೈಮಾನಿಕ ಸಂಚಾರ ನಿರ್ವಹಣೆ ಮತ್ತು ವಿಮಾನ ಪ್ರಯಾಣ ಸುರಕ್ಷತೆ ಖಾತ್ರಿಪಡಿಸಲು ದೇಶೀಯವಾಗಿ ’ಗಗನ್’ ನ್ಯಾವಿಗೇಶನ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ವಿವರಿಸಿದರು. ಗಗನ್ ನಾವಿಗೇಶನ್ ವ್ಯವಸ್ಥೆ ಅಭಿವೃದ್ಧಿಪಡಿಸುವ ಮೂಲಕ ಭಾರತೀಯ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ದೇಶದ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ ಎಂದು ಸಚಿವರು ಶ್ಲಾಘಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243