ದಿನದ ಸುದ್ದಿ
ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣ : ಸಚಿವ ಡಾ.ನಾರಾಯಣಗೌಡ
ಸುದ್ದಿದಿನ, ಮಂಡ್ಯ : ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಜನರ ಬಹುದಿನದ ಬೇಡಿಕೆ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸ್ಥಳೀಯ ಶಾಸಕರೂ ಆದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಕೆ.ಆರ್.ಪೇಟೆಯಲ್ಲಿ 28ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243