ದಿನದ ಸುದ್ದಿ
ಆನ್‌ಲೈನ್ ವ್ಯವಹಾರ ಮಾಡೋರಿಗೆ ಎಚ್ಚರಿಕೆಯ ಸುದ್ದಿ
ಶೇ. 25 ಭಾರತೀಯ ಗ್ರಾಹಕರು ಆನ್‌ಲೈನ್ ವ್ಯವಹಾರ ನಡೆಸುವಾಗ ಸೆಕ್ಯುರಿಟಿ ರಿಜನ್ ಗಳಿಗಾಗಿ ಮೋಸಕ್ಕೆ ಒಳಗಾಗಿದ್ದಾರೆ
* ಸ್ವಲ್ಪ ಯಾಮಾರಿದ್ರೆ ಕ್ಷಣಾರ್ಧದಲ್ಲಿ ಮಂಗಮಾಯ ನಿಮ್ಮ ದುಡ್ಡು
ಸುದ್ದಿದಿನ ಡೆಸ್ಕ್: ಆನ್‌ಲೈನ್ ವ್ಯವಹಾರ ನಡೆಸುವಾಗ ಗ್ರಾಹಕರು ಬಹು ಎಚ್ಚರಿಕೆಯಿಂದ ಇರಬೇಕಾದ ಆತಂಕಕಾರಿ ವಿಷಯ ಬಹಿರಂಗವಾಗಿದೆ. ಶೇ. 25 ಭಾರತೀಯ ಗ್ರಾಹಕರು ಆನ್‌ಲೈನ್ ವ್ಯವಹಾರ ನಡೆಸುವಾಗ ಸೆಕ್ಯುರಿಟಿ ರಿಜನ್ ಗಳಿಗಾಗಿ ಮೋಸಕ್ಕೆ ಒಳಗಾಗಿದ್ದಾರೆ ಎಂಬ ಆತಂಕ ವಿಷಯವನ್ನು ಗ್ಲೋಬಲ್ ಇನ್ಫಾರ್ಮೇಶನ್ ಸರ್ವೀಸ್ ಕಂಪನಿ ಎಕ್ಸಪೀರಿಯನ್ ವರದಿ ಹೇಳಿದೆ.
ಇತ್ತೀಚಿನ ದಿನಗಳಲ್ಲಿ ಬಹುತೇಕ ಗ್ರಾಹಕರು ಮೊಬೈಲ್ ನಲ್ಲಿ ವ್ಯವಹಾರ ಮಾಡುವುದನ್ನು ರೂಢಿಮಾಡಿಕೊಂಡಿದ್ದಾರೆ. ಮೊಬೈಲ್ ನಲ್ಲಿ ವಸ್ತುಗಳ ಖರೀದಿ, ಮಾರಾಟ ಮಾಡುವುದು ಇಂದು ಖುದ್ದಾಗಿ ಮಾರುಕಟ್ಟೆಯಲ್ಲಿ ಖರೀದಿಸಿದಣ್ಟೇ ಸರಳ, ಸಹಜವಾಗಿದೆ. ಆನ್‌ಲೈನ್ ವ್ಯವಹಾರ ವಂಚನೆ ಮಾಡುವ ಕೃತ್ಯಗಳಿಗೆ ಪ್ರೋತ್ಸಾಹ ನೀಡಲು ಸುಲಭವಾಗಿದೆ ಎಂದು ಸಂಸ್ಥೆ ನೀಡಿದ “ಡಿಜಿಟಲ್ ಕಂಜುಮರ್ ಇನ್ಸೈಟ್ಸ್-2018” ಹೆಸರಿನ ವರದಿ ತಿಳಿಸಿದೆ.
ಎಪ್ಯಾಕ್ (ಏಷ್ಯಾ- ಪೆಸಿಫಿಕ್) ದೇಶಗಳ ಪೈಕಿ ಭಾರತದ ಗ್ರಾಹಕರಲ್ಲಿ ಆನ್‌ಲೈನ್ ನಲ್ಲಿ ನಡೆಯುತ್ತಿರುವ ವಂಚನೆ, ಮೋಸ ಪ್ರಕರಣಗಳ ಬಗ್ಗೆ ಸೂಕ್ತ ಮಾಹಿತಿ, ಅರಿವು, ಜಾಗೃತಿ ಕೊರತೆ ಇದೆ ಎಂಬ ಅಂಶಗಳು ವರದಿಯಿಂದ ತಿಳಿದು ಬಂದಿದೆ ಎಂದು ಸಂಸ್ಥೆಯ ಭಾರತದ ಮುಖ್ಯಸ್ಥ ವೈಶಾಲಿ ಕಸ್ತೂರ್ ಹೇಳಿಕೆ ನೀಡಿದ್ದಾರೆ.
ಮೋಸ ಹೋದ ಗ್ರಾಹಕರಿಗೆ ಹಣವನ್ನು ವಾಪಸ್ ನೀಡುವುದರಿಂದ ಆನ್‌ಲೈನ್ ವಂಚನೆ, ಮೋಸ ಕಡಿವಾಣ ಹಾಕಲು ಸಾಧ್ಯವಾಗುವುದಿಲ್ಲ. ಆನ್‌ಲೈನ್ ವಂಚನೆ ಬಗ್ಗೆ ಗ್ರಾಹಕರು ಎಚ್ಚೆತ್ತುಕೊಳ್ಳಲು ಹೆಚ್ಚು ಜಾಗೃತಿ ಹಾಗೂ ಸಾಮೂಹಿಕ ಹೋರಾಟದ ಅನಿವಾರ್ಯತೆ ಇದೆ.
ಎಪೆಕ್.ನ ೧೦ ದೇಶಗಳಾದ ಆಸ್ಟ್ರೇಲಿಯಾ, ಚೀನಾ, ಹಾಂಗ್ ಕಾಂಗ್, ಭಾರತ, ಇಂಡೋನೇಷ್ಯಾ, ಜಪಾನ್, ನ್ಯೂಜಿಲೆಂಡ್, ಸಿಂಗಪುರ್, ಥೈಲ್ಯಾಂಡ್, ವಿಯೆಟ್ನಾಂ ದೇಶಗಳ 3,200 ಗ್ರಾಹಕರನ್ನು ಸಮೀಕ್ಷೆ ನಡೆಸಲಾಗಿದೆ. ಮಾರ್ಕೆಟ್ ರಿಸರ್ಚ್ ಸಂಸ್ಥೆಯಾದ ಐಡಿಸಿ ಸಹಯೋಗದಲ್ಲಿ ಸಮೀಕ್ಷೆ ಕೈಗೊಂಡಿತ್ತು.
ಗ್ರಾಹಕರು ಆನ್‌ಲೈನ್ ವಂಚನೆ ಬಗ್ಗೆ ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ಏಕೆಂದರೆ, ಡಿಜಿಟಲಿಕರಣದ ಹೆಚ್ಚಿನ ಅನುಕೂಲತೆಗಳು ದೊಡ್ಡ ಪ್ರಮಾಣದ ವಂಚನೆ ಪ್ರಕರಣಗಳಿಗೆ ಅವಕಾಶ ಮಾಡಿಕೊಡುತ್ತವೆ. ಆದ್ದರಿಂದ ಗ್ರಾಹಕರು, ಬಯೋಮೆಟ್ರಿಕ್, ಫೇಸಿಯಲ್, ದ್ವನಿ ಮೂಲಕ ಖಾತ್ರಿ ಪಡಿಸುವ ಸೌಲಭ್ಯ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದೆ.
ಶೇ. 53 ಭಾರತೀಯರು ದಾಖಲೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದರಿಂದ ವಂಚನೆ ಮಾಡಲು ಅವಕಾಶ ಮಾಡಿಕೊಡುತ್ತದೆ. ಗ್ರಾಹಕರು ಅಸಂಬದ್ದವಾಗಿ ಮಾಹಿತಿ ಹಂಚಿಕೊಳ್ಳುವ ಮೂಲಕ ವ್ಯಯಕ್ತಿಕ ದಾಖಲೆಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.
ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.
ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.
ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ5 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ5 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ15 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

