ದಿನದ ಸುದ್ದಿ

ಗುತ್ತಿಗೆದಾರ ಆತ್ಮಹತ್ಯೆ | ತನಿಖೆಯ ಪ್ರಾಥಮಿಕ ವರದಿಯ ನಂತರ ಕ್ರಮ : ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಮಂಗಳೂರು : ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆ ಮತ್ತು ಶಾಂತಿ-ಸಾಮರಸ್ಯ ಕಾಪಾಡಲು ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಕೆಲವು ಘಟನೆಗಳಿಗೆ ಸಂಬಂಧಿಸಿ ಕಾನೂನು ರೀತಿಯ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಕೋಮು ಭಾವನೆ ಪ್ರಚೋದನೆ ಹಾಗೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿಷ್ಪಕ್ಷಪಾತವಾಗಿ ಕಠಿಣ ಕ್ರಮಗಳನ್ನು ಜರುಗಿಸಲಾಗುತ್ತದೆ. ಸಾಮಾಜಿಕ ಸಾಮರಸ್ಯ ಕಾಪಾಡಲು ಪ್ರತಿಯೊಬ್ಬ ಸಹಕಾರ ಅಗತ್ಯ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿಯಲ್ಲಿ ಗುತ್ತಿಗೆದಾರರೊಬ್ಬರು ಮೃತಪಟ್ಟಿರುವ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇರುವುದಿಲ್ಲ. ತನಿಖೆಯ ಪ್ರಾಥಮಿಕ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version