ದಿನದ ಸುದ್ದಿ
ಕೊರೋನಾ ಸಂಕಷ್ಟದಲ್ಲಿ ನರಕವಾದ ಆಸ್ಪತ್ರೆಗಳು
ಕೊರೋನಾ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗಳು ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮತ್ತು ಆಹಾರವನ್ನು ಕೊಡುತ್ತಿಲ್ಲ ಇದರಿಂದಾಗಿ ಶಂಕಿತರು ಹಾಗೂ ಸೋಂಕಿತರು ಚಿಕಿತ್ಸೆಯಿಲ್ಲದೆ ನರಕವನ್ನು ಅನುಭವಿಸುತ್ತಿದ್ದಾರೆ.
ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಸರಿಯಾದ ವ್ಯವಸ್ಥೆಯನ್ನು ಮಾಡಬೇಕು ಮತ್ತು ಇದರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ತಿಳಿದುಕೊಳ್ಳಬೇಕು ಜನರ ಸಹಾಯಕ್ಕೆ ಸರ್ಕಾರ ಸ್ಪಂದಿಸಬೇಕು. ದಿನೇದಿನೇ ಸೋಂಕಿನ ಹರಡುವಿಕೆ ಆಗುತ್ತಿದೆ, ನಿಯಂತ್ರಣ ಬರುತ್ತಿಲ್ಲ, ಇನ್ನೂ ಕೆಟ್ಟ ರೀತಿಯಲ್ಲಿ ಪರಿಸ್ಥಿತಿ ಕೈಮೀರಿ ಹೋಗುವ ಮುನ್ನ ಇದಕ್ಕೆ ಒಂದು ವ್ಯವಸ್ಥೆಯನ್ನು ಮಾಡಬೇಕು.
ಹೆಮ್ಮಾರಿ ಕೊರೋನ ಭಯದಿಂದ ರಾಜ್ಯದಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಮುಚ್ಚಿವೆ,
ಸಾಧಾರಣ ಜ್ವರ ಕೆಮ್ಮು ನೆಗಡಿ ಇರುವವರನ್ನೂ ನೋಡಲು ಯಾವ ವೈದ್ಯರೂ ಸಿಗ್ತಿಲ್ಲ ಮತ್ತು ಮುಂದಾಗುತ್ತಿಲ್ಲ, ಬಿಪಿ ಶುಗರ್ ರೋಗಿಗಳ ಸಂಕಟ ಕೇಳುವವರು ಯಾರು ಇಲ್ಲ, ಕೋವಿಡ್ 19 ಆಸ್ಪತ್ರೆ ಗಳ ಅವ್ಯವಸ್ಥೆ ಹೆಚ್ಚಾಗಿದೆ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ಬೆಡ್ ಗಳ ಕೊರತೆ, ಊಟದ ಕೊರತೆ ಮತ್ತು ಸರಿಯಾದ ಸಮಯದಲ್ಲಿ ಔಷಧಿಯನ್ನು ಯಾರು ವಿತರಿಸುತ್ತಿಲ್ಲ.
ಇನ್ನು ಕೆಲ ಆಸ್ಪತ್ರೆಗಳಲ್ಲಿ ಆಹಾರವಿಲ್ಲದೆ ಜನರು ಒದ್ದಾಡುತ್ತಿದ್ದಾರೆ, ಸೋಂಕಿತರನ್ನು ಮತ್ತು ಶಂಕಿತರನ್ನು ಸರಿಯಾಗಿಯೂ ನಡೆಸಿಕೊಳ್ಳುತ್ತಿಲ್ಲ ಎಲ್ಲರನ್ನು ಒಟ್ಟಿಗೆ ಇರಿಸಿದ್ದಾರೆ ಆಸ್ಪತ್ರೆಯ ಅವಾಂತರ ನಿರ್ಲಕ್ಷ್ಯವನ್ನು ಸ್ವತ ರೋಗಿಗಳು ಹೇಳಿ ಕೊಂಡಿದ್ದಾರೆ, ಕೋವಿಡ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವ ಅದೆಷ್ಟೋ ಜನರಿಗೆ ತಮ್ಮ ರಿಪೋರ್ಟ್ ಏನೂ ಎನ್ನುವುದನ್ನೂ ಸಹ ಆಸ್ಪತ್ರೆಯವರು ಇನ್ನೂ ಹೇಳಿಲ್ಲ, ತಿಂಗಳಿಂದ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿರುವ ಜನರು ತಮಗೆ ಯಾವ ಲಕ್ಷಣಗಳೂ ಇಲ್ಲ, ಆರೋಗ್ಯವಾಗಿದ್ದೇನೆ, ನಮ್ಮನು ಬಿಟ್ಟುಬಿಡಿ ಎಂದು ಕೇಳುತ್ತಿದ್ದರು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ ಮಾಡುತ್ತಿದ್ದಾರೆ.
ಕೋವಿಡ್ ಆಸ್ಪತ್ರೆಗಳಲ್ಲಿ ಕೋರೋನ ಬಿಟ್ಟು ಕ್ಯಾನ್ಸರ್, ಬಿಪಿ, ಶುಗರ್ ರೋಗಿಗಳು ಸಹ ಇದ್ದಾರೆ ಅವರನ್ನು ಕೊರೋನ ರೋಗಿಗಳ ಜೊತೆಗೆ ಇರಿಸಿರುವುದು ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ, ಇನ್ನೂ ಖಾಸಗಿ ಆಸ್ಪತ್ರೆ ಗಳಲ್ಲಿ ಕೊರೋನ ಚಿಕಿತ್ಸೆಯು ಶುರುವಾಗಿರುವ ಹಿನ್ನಲೆಯಲ್ಲಿ ಸರ್ಕಾರ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಎಲ್ಲವನ್ನೂ ಒಂದು ವ್ಯವಸ್ಥೆಯನ್ನಾಗಿ ಮಾಡಬೇಕು.
ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮತ್ತು ಆಹಾರ ವಿತರಣೆಯನ್ನು ಸರಿಯಾದ ಸಮಯದಲ್ಲಿ ನೀಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಎಚ್ಚರವಹಿಸಬೇಕು, ಇನ್ನು ಖಾಸಗಿ ಆಸ್ಪತ್ರೆಗಳಿಗೆ ನಿಗದಿತವಾದ ದರದಲ್ಲಿ ಜನರಿಗೆ ಚಿಕತ್ಸೆ ಯನ್ನು ಕೊಡುವಂತೆ ಆದೇಶಿಸಬೇಕು, ಜನರು ಕೂಡ ಈ ತುರ್ತು ಸಂದರ್ಭದಲ್ಲಿ ತಮ್ಮ ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು, ಮಾಸ್ಕನ್ನು ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
-ದಿವ್ಯಶ್ರೀ. ವಿ
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ1 day agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ5 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

