ದಿನದ ಸುದ್ದಿ
ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ ನಿಮಗಿದೆಯೇ..? : ನಳಿನ್ ಕುಮಾರ್ ಕಟೀಲ್ ಭಾಷೆಯಲ್ಲೇ ತಿರುಗೇಟು ನೀಡಿದ ಸಿದ್ದರಾಮಯ್ಯ..?
ಸುದ್ದಿದಿನ ಡೆಸ್ಕ್ : ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ,
ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ @nsitharaman ಅವರ ಮನವೊಲಿಸಿ,
ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ @nalinkateel ಅವರೇ?
2/2— Siddaramaiah (@siddaramaiah) October 23, 2020
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ @nsitharaman ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ @nalinkateel ಅವರೇ?
1/2— Siddaramaiah (@siddaramaiah) October 23, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243