ದಿನದ ಸುದ್ದಿ
ಕೊರೋನಾ ಪ್ರಕರಣ ಏರಿಕೆ | ಮೈಕ್ರೋ ಕಂಟೈನ್ಮೆಂಟ್ ಮತ್ತು ಮಾಸ್ಕ್ ಕಡ್ಡಾಯ : ಸಿಎಂ ಯಡಿಯೂರಪ್ಪ
ಸುದ್ದಿದಿನ,ಬೆಂಗಳೂರು: ಕೊರೊನಾ ಪ್ರಕರಣಗಳು ಕೆಲವು ದಿನಗಳಿಂದ ಹೆಚ್ಚುತ್ತಿವೆ. ಆದ್ದರಿಂದ ರಾಜ್ಯದಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಹಾಗೂ ಮಾಸ್ಕ್ ಕಡ್ಡಾಯಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
Speaking at the interaction with Chief Ministers. https://t.co/s0c7OSK8zK
— Narendra Modi (@narendramodi) March 17, 2021
ಬುಧವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಪರಿಸ್ಥಿತಿ ಬಗ್ಗೆ ಪ್ರಧಾನಿಯವರು ವೀಡಿಯೋ ಕಾನ್ಫರೆನ್ಸ್ ನಡೆಸಿದ್ದು, ಜನರಲ್ಲಿ ಭಯವನ್ನು ಸೃಷ್ಟಿಸುವ ಅಗತ್ಯವಿಲ್ಲ. ಲಸಿಕೆ ತಯಾರಿಕೆಗೆ ಎಲ್ಲ ಅವಕಾಶಗಳ ಬಳಕೆಗೆ ರಾಜ್ಯಗಳು ಸಹಕಾರ ಕೊಡುವಂತೆ ಕೇಳಿಕೊಂಡರು. ಅಲ್ಲದೆ ಕೊರೊನಾ ಬಗ್ಗೆ ಜನ ಜಾಗೃತಿ ಮೂಡಿಸುವಂತೆ ತಿಳಿಸಿದರು ಎಂದರು.
ಕಳೆದ ಹತ್ತು ದಿನಗಳಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗಿದೆ. ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಹೆಚ್ಚಿಸುವ ಅಗತ್ಯವಿದ್ದು, ಹೆಚ್ಚು ಜನ ಸೇರುವ ಕಡೆ ಮುನ್ನೆಚ್ಚರಿಕೆಯ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಕೋವಿಡ್-19 ಸ್ಥಿತಿಗತಿಯ ಕುರಿತು ಚರ್ಚಿಸಲು ಪ್ರಧಾನಮಂತ್ರಿ @narendramodi ರವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ @BSYBJP ರವರು ಪಾಲ್ಗೊಂಡರು.
ಆರೋಗ್ಯ ಸಚಿವ @mla_sudhakar, ಗೃಹ ಸಚಿವ @BSBommai, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು pic.twitter.com/wgfeORImKH
— CM of Karnataka (@CMofKarnataka) March 17, 2021
ಸಾರ್ವಜನಿಕ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ತಡೆಯಲು ಕ್ರಮ ವಹಿಸಲು ಪ್ರಧಾನಿ ಸೂಚಿಸಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಜನ ಸೇರುವ ಕಾರ್ಯಕ್ರಮಗಳಲ್ಲಿ ಕಟ್ಟೆಚ್ಚರ ವಹಿಸುವುದು ಅತ್ಯಗತ್ಯ. ಬಹಿರಂಗ ಕಾರ್ಯಕ್ರಮಗಳಿಗೆ ಜನಮಿತಿ ಹೊರತುಪಡಿಸಿ, ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243