ದಿನದ ಸುದ್ದಿ
ಕೊರೋನಾ ನಿಯಂತ್ರಣ | ರಾಜ್ಯಗಳಿಗೆ ಅಗತ್ಯ ನೆರವು, ಸಹಕಾರ ನೀಡಲು ಕೇಂದ್ರ ಬದ್ಧವಾಗಿದೆ : ಪ್ರಧಾನಿ ಮೋದಿ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕೋವಿಡ್ ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆಕಾಶವಾಣಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಂದು ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ವಿರುದ್ಧದ ಹೋರಾಟದಲ್ಲಿ ಜಯಗಳಿಸಲು ತಜ್ಞರು ಮತ್ತು ವಿಜ್ಞಾನಿಗಳು ಹಾಗೂ ವೈದ್ಯಕೀಯ ಸಮುದಾಯದ ಸಲಹೆ, ಸೂಚನೆಗಳಿಗೆ ಆದ್ಯತೆ ನೀಡಬೇಕು. ರಾಜ್ಯಗಳಿಗೆ ಅಗತ್ಯ ನೆರವು, ಸಹಕಾರ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಹೇಳಿದರು.
Tune in to #MannKiBaat April 2021. https://t.co/ti5rqBhiWH
— Narendra Modi (@narendramodi) April 25, 2021
ಬರುವ ಮೇ 1 ರಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾಗಲಿದೆ. ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಂಡು ತಮ್ಮ ಆರೋಗ್ಯದೊಂದಿಗೆ ಸಮುದಾಯದ ಆರೋಗ್ಯ ಕಾಪಾಡಲು ಸಂಕಲ್ಪ ಮಾಡಬೇಕು ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಶ್ವಾಸಾರ್ಹ ಮೂಲಗಳಿಂದ ಮಾತ್ರ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿ ಪಡೆಯುವಂತೆ ಮನವಿ ಮಾಡಿದರು.
ದೇಶದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ 551ಆಮ್ಲಜನಕ ಉತ್ಪಾದಕ ಘಟಕಗಳ ಸ್ಥಾಪನೆಗೆ ಪಿ.ಎಂ. ಕೇರ್ಸ್ ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನಮಂತ್ರಿ ಅವರ ನಾಗರಿಕ ನೆರವು ಮತ್ತು ಪರಿಹಾರ ನಿಧಿ ಟ್ರಸ್ಟ್ ತಾತ್ವಿಕ ಒಪ್ಪಿಗೆ ನೀಡಿದೆ. ದೇಶದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೋವಿಡ್ ಎರಡನೇ ಅಲೆಯು ಬಹಳ ವೇಗವಾಗಿ ಹರಡುತ್ತಿದೆ. ಧಾರವಾಡ ಜಿಲ್ಲೆಯ ಕಿಮ್ಸ್, ಜಿಲ್ಲಾಸ್ಪತ್ರೆ, ಎಸ್.ಡಿ.ಎಂ. ಹಾಗೂ ಇತರೆ ಖಾಸಗಿ ಆಸ್ಪತ್ರೆಗಳು ಆಯು?ನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಕೋಟಾದಡಿ ಹೆಚ್ಚು ಹಾಸಿಗೆಗಳನ್ನು ಒದಗಿಸಲು ಮುಂದಾಗಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಧಾರವಾಡದಲ್ಲಿಂದು ತಿಳಿಸಿದ್ದಾರೆ.
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊರಡಿಸಿರುವ ವಾರಾಂತ್ಯ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಪ್ರಸ್ತುತ ಬರುವ ಮೇ ೪ರವರೆಗೆ ಜಾರಿಯಲ್ಲಿವೆ. ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಬಂಧಗಳನ್ನು ಉಳಿದ ಕೆಲಸದ ದಿನಗಳಿಗೂ ವಿಸ್ತರಿಸಬೇಕೇ ಬೇಡವೇ ಎಂಬುದರ ಕುರಿತು ನಾಳೆ ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳು ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಧಾರವಾಡದಲ್ಲಿಂದು ತಿಳಿಸಿದ್ದಾರೆ.
ಇಂದು ಭಗವಾನ್ ಮಹಾವೀರ್ ಜಯಂತಿ. ಭಗವಾನ್ ಮಹಾವೀರ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿಂದು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243