ದಿನದ ಸುದ್ದಿ

ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಎಷ್ಟು ಗೊತ್ತಾ..?

Published

on

ಸುದ್ದಿದಿನ ಡೆಸ್ಕ್ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಭಾರತದಲ್ಲಿ ಇಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 72 ಲಕ್ಷದ ಗಡಿ ದಾಟಿದ್ದು, ನಿಯಂತ್ರಣಕ್ಕೆ ಬರುವ ಯಾವ ಲಕ್ಷವೂ ಕಾಣಿಸುತ್ತಿಲ್ಲ.

ಕಳೆದ 24 ಗಂಟೆಯಲ್ಲಿ ಕೊರೋನಾ ಹೊಸ ಕೊರೋನಾ ಪ್ರಕರಣಗಳು 63,509 ದಾಖಲಾಗಿವೆ.
ಇದರೊಂದಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 72,39,39ಕ್ಕೆ ಏರಿಕೆಯ ಅಗಿದೆ.

ಮಂಗಳವಾರ ಕೊರೋನಾದಿಂದ ಒಟ್ಟಯ 730 ಜನ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಇದುವರೆಗೆ 1,10,586 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಆದರೆ ಈಗ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದು ನಿಧಾನವಾಗಿ ದೇಶವು ಕೊರೋನಾದಿಂದ ಮುಕ್ತವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version