ದಿನದ ಸುದ್ದಿ
ರೂಪಾಂತರಿ ಕೊರೋನಾ ; ನಿರ್ಲಕ್ಷ್ಯ ಬೇಡ : ಸಚಿವ ಡಾ.ಕೆ. ಸುಧಾಕರ್
ಸುದ್ದಿದಿನ, ಬೆಂಗಳೂರು : ಜಗತ್ತಿನಿಂದ ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗಿಲ್ಲ. ಓಮಿಕ್ರಾನ್, ಎಕ್ಸ್ ಇ, ಎಂ.ಇ ಸೇರಿದಂತೆ, ಹಲವು ರೂಪಾಂತರಗಳ ಮೂಲಕ ಕಾಣಿಸಿಕೊಳ್ಳುತ್ತಿರುವುದರಿಂದ, ನಿರ್ಲಕ್ಷ್ಯಿಸದೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾಕ್ಟರ್ ಕೆ. ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 10 ರಿಂದ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. 6 ರಿಂದ 12 ವರ್ಷ ವಯಸ್ಸಿನ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯ ಅಧ್ಯಯನಕ್ಕಾಗಿ 5 ಸಾವಿರ ಮಕ್ಕಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
- ರಾಜ್ಯದಲ್ಲಿ ನಿನ್ನೆ ಹೊಸದಾಗಿ 48ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 39 ಲಕ್ಷ 46 ಸಾವಿರದ 84 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ನಿನ್ನೆ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. ಈವರೆಗೆ ಸೋಂಕಿನಿಂದ ಒಟ್ಟು 40 ಸಾವಿರದ 57 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243