Connect with us

ದಿನದ ಸುದ್ದಿ

ಕೋವಿಡ್-19 | ಹೊರ ರಾಜ್ಯದಿಂದ ರಾಜ್ಯಕ್ಕೆ ಆಗಮಿಸುವವರು ಅನುಸರಿಸಬೇಕಾದ ಕ್ರಮ

Published

on

ಸುದ್ದಿದಿನ, ಬೆಂಗಳೂರು : ಹೊರರಾಜ್ಯಗಳಲ್ಲಿ ಸ್ಥಗಿತವಾಗಿರುವ ಕರ್ನಾಟಕ ರಾಜ್ಯದ ಜನರು sevasindhu.karnataka.gov.in ವೆಬ್‍ಸೈಟ್ ಮೂಲಕ ಟ್ರಾವೆಲ್ ಟು ಕರ್ನಾಟಕ ಫ್ರಮ್ ಅದರ್ ಇಂಡಿಯನ್ ಸ್ಟೇಟ್ಸ್ ಆಯ್ಕೆಯನ್ನು ಮಾಡಿಕೊಂಡು ನೊಂದಣಿ ಮಾಡಿಕೊಳ್ಳಬೇಕು.

 ಇ-ಪಾಸ್

ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಸ್ವೀಕೃತಿ ಬರುತ್ತದೆ. ಈ ಅರ್ಜಿಗಳನ್ನು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ರಾಜ್ಯದ ನೋಡಲ್ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ. ನಂತರ ಅರ್ಜಿದಾರರಿಗೆ ಎಸ್‍ಎಂಎಸ್ ಸಂದೇಶದ ಮೂಲಕ ಇ-ಪಾಸ್ ಪಡೆಯುವ ಲಿಂಕ್ ಕಳುಹಿಸಲಾಗುತ್ತದೆ. ಇ-ಪಾಸ್ ದೊರೆಕಿದ ನಂತರ ಪ್ರಯಾಣಿಸಲು ಒಂದು ವಾರದ ಕಾಲಾವಕಾಶ ಇರುತ್ತದೆ.

ತಪಾಸಣಾ ಪ್ರಾಧಿಕಾರವು ಇ-ಪಾಸ್‍ಗಳ ಅಧಿಕೃತತೆಯನ್ನು ಕ್ಯೂಆರ್ ಕೊಡ್ ಸ್ಕ್ಯಾನಿಂಗ್ ಮೂಲಕ ಪರಿಶೀಲಿಸುತ್ತದೆ. ಇದಕ್ಕಾಗಿ ಗೂಗಲ್ ಪ್ಲೇ ಸ್ಟೊರ್ ಮೂಲಕ ಸರ್ವಿಸ್ ಪ್ಲಸ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು.

ಇ-ಪಾಸ್ ಹೊಂದಿರುವವರು ತಮ್ಮ ಸಂತ ಅಥವಾ ಬಾಡಿಗೆ ಅಥವಾ ಕರಾರು ಒಪ್ಪಂದದ ಬಸ್‍ಗಳ ಮೂಲಕ ಪ್ರಯಾಣ ಕೈಗೊಳ್ಳಬಹುದು. ಇಂತಹ ವಾಹನಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಸ್ಯಾನಿಟೈಸರ್ ಬಳಸಬೇಕು ಹಾಗೂ ಸಾಮಾಜಿಕ ಅಂತರದ ನಿಯಮ ಪಾಲಿಸಬೇಕು.

ಗಮನಿಸಿ

ಒಂದು ಕಾರಿನಲ್ಲಿ 03, ದೊಡ್ಡ ಕಾರ್‍ಗಳಲ್ಲಿ (ಎಸ್‍ಯುವಿ) 05, ವ್ಯಾನ್‍ಗಳಲ್ಲಿ 10 ಹಾಗೂ ಬಸ್‍ಗಳಲ್ಲಿ 25 ಜನ ಮಾತ್ರ ಪ್ರಯಾಣಿಸಲು ಅವಕಾಶವಿದೆ. ಪ್ರಯಾಣಿಕರು ಗಡಿ ಜಿಲ್ಲೆಗಳಲ್ಲಿ ಗುರುತಿಸಲಾಗಿರುವ ಆಗಮನದ ಚೆಕ್‍ಪೋಸ್ಟ್‍ಗಳ ಮೂಲಕವೇ ಪ್ರಯಾಣಿಸುವುದು ಕಡ್ಡಾಯವಾಗಿದೆ.

ವಾಹನ ವೆಚ್ಚ

ವಾಹನಗಳ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು. ವೈದ್ಯಕೀಯ ತಪಾಸಣೆ ಹಾಗೂ ಅಧಿಕೃತ ಗುರುತಿನ ಚೀಟಿಗಳೊಂದಿಗೆ ಪ್ರಯಾಣಿಸಬೇಕು. ಕೋವಿಡ್ ಲಕ್ಷಣವಿರುವವರನ್ನು ಆಸ್ಪತ್ರೆ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ. ರೋಗ ಲಕ್ಷಣ ಇಲ್ಲದೇ ಇರುವವರನ್ನು ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತದೆ. ರಾಜ್ಯಕ್ಕೆ ಆಗಮಿಸುವ ನಾಗರಿಕರು ತಮ್ಮ ಮೋಬೈಲ್‍ಗಳಲ್ಲಿ ಆರೋಗ್ಯಸೇತು ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗೆ ಮತ್ತು ತುರ್ತು ಸಂದರ್ಭಗಳಿಗೆ 080-22636800 ದೂರವಾಣಿ ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending