ದಿನದ ಸುದ್ದಿ
ಕೊರೋನಾ ಎಫೆಕ್ಟ್ | ಯುವಕನಿಗೆ ಬ್ಲಾಕ್ ಫಂಗಸ್ ; ಚಿಕಿತ್ಸೆಗೆ ಸರ್ಕಾರದ ಸಹಾಯ ಬೇಡಿದ ಕುಟುಂಬಸ್ಥರು
ಸುದ್ದಿದಿನ,ಬೆಳಗಾವಿ: ಕೊರೋನಾ ರೋಗದ ಪರಿಣಾಮ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 30 ವರ್ಷದ ಯುವಕನೊಬ್ಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಎಂಬ ಯುವಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.ಯುವಕ ಆನಂದ ಕುಲಾಲಿ
ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಮೇ 5ರಂದು ಕೊರೋನ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ಪಾಸಿಟಿವ್ ಎಂದು ರಿಪೋರ್ಟ್ ಬಂದಿತ್ತು.
ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಆನಂದ ಕುಲಾಲಿಯನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ವೈದ್ಯರು ಅಡ್ಮಿಟ್ ಆಗುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮೇ 10ರಂದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಯುವಕ ಆನಂದ ಕುಲಾಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ.
ಇದನ್ನೂ ಓದಿ | ದಾವಣಗೆರೆ | ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ; ಇಂದಿನ ಬೆಲೆ ಎಷ್ಟು ಗೊತ್ತಾ..?
ಬಳಿಕ ಯುವಕ ಆನಂದ ಕುಲಾಲಿಯ ಮುಖವು ಬಾವು ಬರುತ್ತಿದ್ದು ಇಎನ್‌ಟಿ ಸ್ಪೆಷಲಿಸ್ಟ್ ಬಳಿ ತೆರಳಿ ಚೆಕಪ್ ಮಾಡಿಸಿ ಸಲಹೆಯನ್ನು ನೀಡಲಾಗಿತ್ತು. ಬಳಿಕ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ಯುವಕ ಆನಂದ ಕುಲಾಲಿ
ಅಡ್ಮಿಟ್ ಆದನು. ಆಗ ಖಾಸಗಿ ಆಸ್ಪತ್ರೆಯ ವೈದ್ಯರು ಯುವಕನಿಗೆ ಬ್ಲ್ಯಾಕ್ ಫಂಗಸ್ ಆಗಿದೆ ಎಂದು ತಿಳಿಸಿದ್ದಾರೆ.
ಯುವಕ ಆನಂದ ಕುಲಾಲಿ ಕೊರೋನಾದಿಂದ ಗುಣಮುಖ ಆದ ಬಳಿಕ ಸರ್ಜರಿ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಯುವಕನ ಕುಟುಂಬಸ್ಥರು ರಾಜ್ಯ ಸರ್ಕಾರವು ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243