ದಿನದ ಸುದ್ದಿ
ಕೊರೋನಾ ನಾಲ್ಕನೇ ಅಲೆ ಭೀತಿ ; ಶಾಲೆ ಮುಚ್ಚುವ ಪ್ರಶ್ನೆಯೇ ಇಲ್ಲ : ಸಚಿವ ಬಿ.ಸಿ. ನಾಗೇಶ್
ಸುದ್ದಿದಿನ,ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಮಾಸ್ಕ್ ಕಡ್ಡಾಯವೆಂದು ಆದೇಶ ಹೊರಡಿಸಿದ್ದಾರೆ.
ಈ ಹಿನ್ಮೆಲೆ ಕೊರೊನಾ ನಾಲ್ಕನೇ ಅಲೆ ಭೀತಿ ಹೆಚ್ಚಾಗಿದ್ದರೂ ಸಹ ಯಾವ ಕಾರಣಕ್ಕೂ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಮಂಗಳವಾಗ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿ ಪಡಿಸಿದ ದಿನಾಂಕ ಅಂದರೆ, ಮೇ 16ರಿಂದ ಶಾಲೆಗಳು ಆರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳಿದ್ದು, ನಿನ್ನೆಯಷ್ಟೇ ಸಿಎಂ ಸಭೆ ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡಿರುವಂತಹ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲಿಸುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಮುಚ್ಚುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
ಸರ್ಕಾರ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಉಚಿತ ಲಸಿಕೆ ನೀಡುತ್ತಿದ್ದು, ಪರೀಕ್ಷೆಗಳು ನಡೆಯುತ್ತಿರುವುದರಿಂದ ಶಾಲೆಗಳಲ್ಲಿ ಲಸಿಕೆಯನ್ನು ಕೊಡುವುದುದು ಸದ್ಯಕ್ಕೆ ನಿಲ್ಲಿಸಲಾಗಿದೆ. ಪರೀಕ್ಷೆಗಳು ಮುಗಿದ ನಂತರ ಶಾಲೆಗಳಲ್ಲಿ ಲಸಿಕೆ ಅಭಿಯಾನ ಮತ್ತೆ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243