ದಿನದ ಸುದ್ದಿ

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಗೆ ಮತ್ತೆ ಕೊರೋನ ಸೋಂಕು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರಿಗೆ ಮತ್ತೆ ಕರೋನ ಸೋಂಕು ಇರೋದು ಪತ್ತೆ ಯಾಗಿದೆ.

ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಅವರು ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಅಂತ ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version