ದಿನದ ಸುದ್ದಿ
ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ ಏರಿಕೆ
ಸುದ್ದಿದಿನ, ದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಗಣನೀಯವಾಗಿ ಇಳಿಯುತ್ತಿದೆ. ದೇಶದಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ 92.32% ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಕೊರೋನಾ ಸಕ್ರಿಯ ಪ್ರಕರಣಗಳ ಪ್ರಮಾಣ 6.19% ಇದ್ದು, ಸಾವಿನ ಪ್ರಮಾಣ 1.49% ಇದೆ. ವಿಶ್ವದ 200ಕ್ಕೂ ಹೆಚ್ಚು ದೇಶಗಳಿಗೆ ಕೊರೋನಾ ಸೋಂಕು ವ್ಯಾಪಿಸಿದ್ದು, ಆ ದೇಶದಲ್ಲಿ ಹೋಲಿಸಿದರೆ ಭಾರತದಲ್ಲಿ ಚೇತರಿಕೆಯ ಪ್ರಮಾಣ ಹೆಚ್ಚಿದೆ. ಒಟ್ಟು 77,65,966 ಮಂದಿ ಗುಣಮುಖರಾಗಿದ್ದಾರೆ ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243