ದಿನದ ಸುದ್ದಿ

ರಾಜ್ಯದಲ್ಲಿ 6,259 ಹೊಸ ಕೊರೊನಾ ಕೇಸ್ ಪತ್ತೆ

Published

on

ಸುದ್ದಿದಿನ,ಬೆಂಗಳೂರು: ಇಂದು ರಾಜ್ಯದಲ್ಲಿ 6,259 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,45,830ಕ್ಕೆ ಏರಿಕೆಯಾಗಿದೆ.

ಇಂದು 110 ಮಂದಿ ಕೊರೊನಾಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 2,704ಕ್ಕೇರಿಕೆಯಾಗಿದೆ. ಒಟ್ಟು 634 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 73,846 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 2035 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 63,033ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 30 ಮಂದಿಯನ್ನು ಕೊರೊನಾ ಬಲಿ ಪಡೆದಿದ್ದು, 34,021 ಸಕ್ರಿಯ ಪ್ರಕರಣಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version